Karnataka Bandh: ಶನಿವಾರ ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಶನಿವಾರ ಕರ್ನಾಟಕ ಬಂದ್​ ಇದ್ದರೂ ಬೆಂಗಳೂರು ಮೆಟ್ರೋ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಓಲಾ, ಉಬರ್ ಚಾಲಕರ ಸಂಘವು ಬೆಂಬಲ ನೀಡಿದೆ. ಇದರಿಂದಾಗಿ ಆಟೋ, ಟ್ಯಾಕ್ಸಿ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಂಗಳೂರು(ಡಿ.04): ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.5ರಂದು ಅಂದರೆ ನಾಳೆ (ಶನಿವಾರ) (Karnataka Bandh) ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಈ ಬಂದ್ ನಡೆಯಲಿದೆ. ರಾಜ್ಯ ಸರ್ಕಾರದ ವಿರುದ್ಧ ಸಮರಕ್ಕೆ ಇಳಿದಿರುವ ಕನ್ನಡಪರ ಸಂಘಟನೆಗಳ ನಾಳಿನ ಬಂದ್​ನ್ನು ಯಶಸ್ವಿಗೊಳಿಸಲು ಹರಸಾಹಸ ಪಡುತ್ತಿವೆ. ಇನ್ನೊಂದೆಡೆ ಸರ್ಕಾರ ಬಂದ್​ಗೆ ಯಾವುದೇ ಅವಕಾಶ ನೀಡುವುದಿಲ್ಲ. ಆದೇಶ ಮೀರಿ ಪ್ರತಿಭಟಿಸಿದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ಕೊಟ್ಟಿದೆ. ಆದರೆ ಸರ್ಕಾರದ ಎಚ್ಚರಿಕೆಗೂ ಮಣಿಯದ ಕನ್ನಡಪರ ಹೋರಾಟಗಾರರು ನಾಳೆ ಬಂದ್ ಮಾಡಿಯೇ ತೀರುತ್ತೇವೆ ಎಂದು ಪಣ ತೊಟ್ಟಿದ್ದಾರೆ. ನಾಳೆ ಬಂದ್ ನಡೆಯುತ್ತಾ? ಒಂದು ವೇಳೆ ಕರ್ನಾಟಕ ಬಂದ್ ನಡೆದರೆ ಯಾರೆಲ್ಲಾ ಬೆಂಬಲ ನೀಡಲಿದ್ದಾರೆ? ಎಲ್ಲೆಲ್ಲಿ ಬಂದ್ ನಡೆಯಲಿದೆ? ಬಂದ್ ದಿನ ಏನಿರುತ್ತೆ? ಏನಿರಲ್ಲ ಎಂಬೆಲ್ಲಾ ಮಾಹಿತಿ ಇಲ್ಲಿದೆ.

    ರಾಜ್ಯ ಸರ್ಕಾರವು ಕೆಲವು ದಿನಗಳ ಹಿಂದಷ್ಟೇ ಮರಾಠ ಅಭಿವೃದ್ದಿ ನಿಗಮ ರಚನೆ ಮಾಡುವುದಾಗಿ ಆದೇಶ ಹೊರಡಿಸಿತ್ತು. ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಜೊತೆಗೆ ಸರ್ಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ವಾಟಾಳ್ ನಾಗರಾಜ್​ ನವೆಂಬರ್ 30ರವರೆಗೆ ಗಡುವು ಕೊಟ್ಟಿದ್ದರು. ಆದರೆ ಸರ್ಕಾರ ಮಾತ್ರ ಹೋರಾಟಗಾರರ ಗಡುವಿಗೆ ಮಣಿದಿಲ್ಲ. ಇತ್ತ ಕನ್ನಡಪರ ಹೋರಾಟಗಾರರು ಸಹ ಸರ್ಕಾರದ ನಡೆಯನ್ನು ವಿರೋಧಿಸಿ ಡಿ.5ರಂದು ಕರ್ನಾಟಕ ಬಂದ್ ಮಾಡೇ ಮಾಡುತ್ತೇವೆ ಎಂದು ನಿರ್ಧರಿಸಿದ್ದಾರೆ.

    ಇನ್ನು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಬಂದ್​ಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕರ್ನಾಟಕ ಬಂದ್​ಗೆ ಕನ್ನಡ ರಕ್ಷಣಾ ವೇದಿಕೆ ಬೆಂಬಲ ನೀಡಿದೆ. ಜೊತೆಗೆ 50ಕ್ಕೂ ಹೆಚ್ಚು ಸಂಘಟನೆಗಳು ಬಹಿರಂಗವಾಗಿ ನಾಳಿನ ಬಂದ್​ಗೆ ಬೆಂಬಲ ನೀಡಿವೆ. ಇದೇ ರೀತಿ ಕಾಂಗ್ರೆಸ್ ಮತ್ತು ಜೆಡಿಎಸ್​ ಪಕ್ಷಗಳು ಪರೋಕ್ಷವಾಗಿ ಬಂದ್​ಗೆ ಬೆಂಬಲ ಸೂಚಿಸಿವೆ. ಬಿಜೆಪಿ ನಾಯಕರು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಬಂದ್ ಮಾಡದಂತೆ ಕನ್ನಡಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪರ-ವಿರೋಧಗಳ ನಡುವೆ ನಾಳೆ ಬಂದ್ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

    ಓಲಾ-ಊಬರ್-ಬಸ್-ಮೆಟ್ರೋ ಸಂಚಾರ ಇರುತ್ತಾ?

    ನಾಳೆ ಕರ್ನಾಟಕ ಬಂದ್ ನಡೆಯುವ ಹಿನ್ನೆಲೆ, ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳು ಎಂದಿನಂತೆ ಕಾರ್ಯಾಚರಣೆ ನಡೆಸಲಿವೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ. ಕೆಎಸ್​ಆರ್​ಟಿಸಿ ಬಸ್​​ಗಳೂ ಸಹ ಎಂದಿನಂತೆ ಸಂಚಾರ ನಡೆಸಲಿದೆ ಎಂದು ತಿಳಿದು ಬಂದಿದೆ.

    Karnataka Bandh: ಶನಿವಾರ ಕರ್ನಾಟಕ ಬಂದ್; ಭದ್ರತೆಗೆ ಬೆಂಗಳೂರಿನಲ್ಲಿ15 ಸಾವಿರ ಪೊಲೀಸರ ನಿಯೋಜನೆ

    ಇನ್ನು, ಮೆಟ್ರೋ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದು, ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಇನ್ನು, ನಾಳಿನ ಬಂದ್​​ಗೆ ಓಲಾ, ಉಬರ್ ಚಾಲಕರ ಸಂಘವು ಬೆಂಬಲ ನೀಡಿದೆ. ಇದರಿಂದಾಗಿ ಆಟೋ, ಟ್ಯಾಕ್ಸಿ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
    ಸರ್ಕಾರಿ ಕಚೇರಿಗಳು ಎಂದಿನಂತೆ ತೆರೆದಿರುತ್ತವೆ. ಬೀದಿ ಬದಿ ವ್ಯಾಪಾರಿಗಳು ಕರ್ನಾಟಕ ಬಂದ್​ಗೆ ಬೆಂಬಲ ನೀಡಿವೆ. ಇನ್ನು ಹೋಟೆಲ್ ಮಾಲೀಕರ ಸಂಘವು ಬಂದ್​ಗೆ ನೈತಿಕ ಬೆಂಬಲ ನೀಡಿದೆ. ಹೀಗಾಗಿ ಹೋಟೆಲ್​ಗಳು ತೆರೆದಿರುತ್ತವೆ.

    ಬಂದ್ ಹಿನ್ನೆಲೆ: ಪೊಲೀಸ್ ಬಂದೋಬಸ್ತ್

    ಕರ್ನಾಟಕ ಬಂದ್​ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಬಂದ್​ಗೆ 50ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿ ನಾಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು. ಹೀಗಾಗಿ, 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಪೊಲೀಸರು ಎಲ್ಲಾ ಕಡೆ ಗಸ್ತು ತಿರುಗಲಿದ್ದಾರೆ. 5 ಜನ ಅಡಿಷನ್ ಸಿಪಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ. ಇದುವರೆಗೂ ಬೆಂಗಳೂರಿನಲ್ಲಿ ಕರ್ನಾಟಕ ಬಂದ್​ಗೆ ಯಾರೂ ನಮ್ಮ ಬಳಿ ಅನುಮತಿ ಕೇಳಿಲ್ಲ, ನಾವೂ ಕೊಟ್ಟಿಲ್ಲ ಎಂದು ಕಮಲ್ ಪಂತ್ ತಿಳಿಸಿದ್ದಾರೆ.

    ಬಂದ್​ ಹಿನ್ನೆಲೆಯಲ್ಲಿ 35 ಕೆಎಸ್​ಆರ್​ಪಿ, 32 ಸಿಎಆರ್​ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ನೀಡುವುದಿಲ್ಲ. ಕರ್ನಾಟಕ ಬಂದ್​ಗೆ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬೆಂಬಲ ಸೂಚಿಸಿಲ್ಲ. ಹೀಗಾಗಿ, ಆ ಬಸ್​ಗಳನ್ನು ತಡೆಯುವ ಹಾಗೆ ಇಲ್ಲ. ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್​ಗಳು ಮಾಮೂಲಿನಂತೆ ಸಂಚರಿಸಲಿವೆ ಎಂದಿದ್ದಾರೆ.
    Published by:Latha CG
    First published: