• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Bandh: ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಬಿಗಿಭದ್ರತೆ; 15 ಸಾವಿರ ಪೊಲೀಸರ ನಿಯೋಜನೆ

Karnataka Bandh: ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಬಿಗಿಭದ್ರತೆ; 15 ಸಾವಿರ ಪೊಲೀಸರ ನಿಯೋಜನೆ

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್

Karnataka Bandh: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬಂದ್ಗೆ ಅನುಮತಿ ಇಲ್ಲ. ಜನರು ಭಯಪಡದೆ ತಮ್ಮ ಎಂದಿನ ಚಟುವಟಿಕೆಯಲ್ಲಿ ತೊಡಗಿಕೊಳ್ಳಬಹುದು ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

  • Share this:

ಬೆಂಗಳೂರು(ಡಿ. 5): ಮರಾಠ ಅಭಿವೃದ್ಧಿ ನಿಗಮವನ್ನು ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಯಂತ್ರಿಸಲು ನಗರದಲ್ಲಿ 15 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದೆ. ಇವತ್ತು ಬೆಳಗ್ಗೆಯಿಂದಲೇ ಪೊಲೀಸರು ಎಲ್ಲ ಕಡೆಯೂ ಗಸ್ತು ತಿರುಗುತ್ತಿದ್ದಾರೆ. 5 ಮಂದಿ ಹೆಚ್ಚುವರಿ ಸಿಪಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ.


ನಗರದಲ್ಲಿ 35 ಕೆಎಸ್​ಆರ್​ಪಿ, 32 ಸಿಎಆರ್ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ. ಆಯಾ ವಿಭಾಗದ ಡಿಸಿಪಿಗಳಿಗೆ ಬಂದ್ ನಿರ್ವಹಣೆಯ ಹೊಣೆ ವಹಿಸಲಾಗಿದೆ. 300 ಪೊಲೀಸ್ ವ್ಯಾನ್​ಗಳು ನಗರದಾದ್ಯಂತ ವಿಶೇಷ ಗಸ್ತು ನಡೆಸುತ್ತಿವೆ. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರೌಡಿಶೀಟರ್​ಗಳನ್ನ ವಶಕ್ಕೆ ಪಡೆಯಲಾಗಿದೆ.


ಕರ್ನಾಟಕ ಬಂದ್​​ಗೆ ಯಾರೂ ಕೂಡ ಅನುಮತಿ ಕೇಳಿಲ್ಲ. ನಾವೂ ಅನುಮತಿ ಕೊಟ್ಟಿಲ್ಲ. ಇಂದು ಯಾವುದೇ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ. ಬಿಎಂಟಿಸಿ, ಕೆಎಸ್​ಆರ್​ಟಿಸಿ ಸಂಸ್ಥೆಗಳು ಬಂದ್​ಗೆ ಬೆಂಬಲ ಸೂಚಿಸಿಲ್ಲ. ಹೀಗಾಗಿ ಬಸ್ಸುಗಳನ್ನ ತಡೆಯುವ ಹಾಗಿಲ್ಲ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳು ಎಂದಿನಂತೆ ಸಂಚರಿಸುತ್ತವೆ. ಯಾರೂ ಕೂಡ ಭಯ ಪಡುವ ಅಗತ್ಯ ಇಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು. ಏನಾದರೂ ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಹೇಳಿದ್ದಾರೆ.


ಇದನ್ನೂ ಓದಿ: Karnataka Bandh: ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ


ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿರುವ ಈ ಬಂದ್​ಗೆ 50ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ಕೆಲ ಕರವೇ ಬಣಗಳು ನೈತಿಕ ಬೆಂಬಲ ಮಾತ್ರ ನೀಡಿವೆ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಕಡಿಮೆ ಇದೆ.

top videos
    First published: