ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರ ಬಂಧನ; ವಿವಿಧೆಡೆ ಪ್ರತಿಭಟನಾಕಾರರಿಗೆ ತಡೆ

Karnataka Bandh - ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ರೈತರು ಟೌನ್​ಹಾಲ್​ನತ್ತ ಆಗಮಿಸಿದ್ಧಾರೆ. ಇದೇ ವೇಳೆ, ಕೆಆರ್ ಪುರಂ ಬಳಿ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರನ್ನ ಪೊಲೀಸರು ಬಂಧಿಸಿದ್ದಾರೆ.

news18-kannada
Updated:September 28, 2020, 10:44 AM IST
ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರ ಬಂಧನ; ವಿವಿಧೆಡೆ ಪ್ರತಿಭಟನಾಕಾರರಿಗೆ ತಡೆ
ಪ್ರತಿಭಟನಾಕಾರರನ್ನು ಬಸ್​ನಲ್ಲಿ ಕೊಂಡೊಯ್ಯುತ್ತಿರುವುದು.
  • Share this:
ಬೆಂಗಳೂರು(ಸೆ. 28): ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅನೇಕ ಕಡೆ ಇವತ್ತಿನ ಕರ್ನಾಟಕ ಬಂದ್​ನ ಬಿಸಿ ತಟ್ಟಿದೆ. ರೈತರ ಪ್ರತಿಭಟನೆಗಳು ಕೆಲ ತೀವ್ರ ಸ್ವರೂಪ ಪಡೆದಿವೆ. ಪರಿಸ್ಥಿತಿ ಕೈ ಮೀರಿ ಹೋಗದಂತೆ ತಡೆಯಲು ಪೊಲೀಸರು ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ಅಲ್ಲಲ್ಲಿ ತಡೆದು ವಶಕ್ಕೆ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಕೆಆರ್ ಪುರಂನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವಾರು ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೆಆರ್ ಪುರಂ ಸಂತೆಯಿಂದ ಬಿಬಿಎಂಪಿ ಕಚೇರಿಯವರೆಗೆ ಕಾಲ್ನಡಿಗೆ ಜಾಥಾದಲ್ಲಿ ಕೋಡಿಹಳ್ಳಿ ಚಂದ್ರಶೇಖರ್, ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಎಲೆ ಶ್ರೀನಿವಾಸ್ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು. ಈ ವೇಳೆ ಬಿಬಿಎಂಪಿ ಕಚೇರಿ ಬಳಿ ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದವರನ್ನು ಪೊಲೀಸರು ವಶಕ್ಕೆ ಪಡೆದರು.

ಇನ್ನು, ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಸಾಗಲಿರುವ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಾಕಷ್ಟು ಜನಸಾಗರ ಹರಿದುಬರುತ್ತಿದೆ. ರಾಜ್ಯದ ವಿವಿಧೆಡೆಯಿಂದ ರೈತರು ಬೆಂಗಳೂರಿಗೆ ಆಗಮಿಸಿದ್ದಾರೆ. ನಟ ಚೇತನ್, ಬಿಗ್ ಬಾಸ್ ಸ್ಪರ್ಧಿ ಶಶಿ ಮೊದಲಾದವರು ಈ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಸುಮನಹಳ್ಳಿಯಿಂದ ಟೌನ್​ಹಾಲ್​ವರೆಗೆ ಬೈಕ್ ರ್ಯಾಲಿ ನಡೆಯುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸಂಘಟನೆಗಳ ಕಾರ್ಯಕರ್ತರು, ಗಿರೀಶ್ ಗೌಡ, ಕುರುಬೂರು ಶಾಂತಕುಮಾರ್, ನಟ ಚೇತನ್ ಟೌನ್ ಹಾಲ್​ನಲ್ಲಿ ಈಗಾಗಲೇ ಬಹಳಷ್ಟು ಜನರು ಈ ಬೈಕ್ ಜಾಥಾದಲ್ಲಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಂದ್​​ಗೆ ಕಲಬುರ್ಗಿಯಲ್ಲಿ ಉತ್ತಮ ಪ್ರತಿಕ್ರಿಯೆ; ರೈತ ಮುಖಂಡರಿಂದ ರಸ್ತೆ ತಡೆ

ಟಾನ್ ಹಾಲ್​ನಲ್ಲಿ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದಾರೆ. ಸಾವಿರಕ್ಕೂ ಹೆಚ್ಚು ಮಂದಿ ಇಲ್ಲಿಂದ ಪ್ರತಿಭಟನಾ ಮೆರವಣಿಗೆ ಹೊರಡುವುದರಿಂದ 200ಕ್ಕೂ ಹೆಚ್ಚು ಪೊಲೀಸರನ್ನು ಇಲ್ಲಿ ನಿಯೋಜಿಸಲಾಗಿದೆ. ಹಾಗೆಯೇ, ಮೆರವಣಿಗೆ ಸಾಗುವ ಹಾದಿಯ ಸುತ್ತಮುತ್ತ ಕಟ್ಟೆಚ್ಚರಿಕೆ ವಹಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೃಷಿ ನೀತಿ ವಿರುದ್ಧ ರೈತ ಸಂಘಟನೆಗಳು ಕರೆಕೊಟ್ಟಿರುವ ಕರ್ನಾಟಕ ಬಂದ್ ಇವತ್ತು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಇದೆ. ದಲಿತರು, ಕಾರ್ಮಿಕರ ಸಂಘಟನೆಗಳು, ಕನ್ನಡ ಸಂಘಟನೆಗಳು ಈ ಬಂದ್​ಗೆ ಬೆಂಬಲ ವ್ಯಕ್ತಪಡಿಸಿವೆ.

ಇದನ್ನೂ ಓದಿ: Karnataka Bandh: ಬೆಳ್ಳಂಬೆಳಗ್ಗೆ ಬೆಂಗಳೂರು ಏರ್​​ಪೋರ್ಟ್​​​ಗೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು
Published by: Vijayasarthy SN
First published: September 28, 2020, 10:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading