Karnataka Bandh: ಇಂದು ಕರ್ನಾಟಕ ಬಂದ್; ಭಾರೀ ಬೆಂಬಲ ನಿರೀಕ್ಷೆ: ಏನಿರುತ್ತೆ, ಏನಿರಲ್ಲ?; ಇಲ್ಲಿದೆ ವಿವರ
ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ. ಅಂಗಡಿ ಮುಂಗಟ್ಟು ಕ್ಲೋಸ್, ಮಾಲ್ ಗಳು ಓಪನ್ ಆಗಲ್ಲ, ಪ್ರತಿಭಟನೆಯ ತೀವ್ರತೆ ನೋಡಿಕೊಂಡು ಕೈಗಾರಿಕೆಗಳು, ಕಂಪನಿಗಳು ಮುಚ್ಚುವ ಬಗ್ಗೆ ನಿರ್ಧಾರ ಮಾಡಲು ನಿರ್ಧರಿಸಲಾಗಿದೆ.
news18-kannada Updated:September 28, 2020, 6:48 AM IST

ಸಾಂದರ್ಭಿಕ ಚಿತ್ರ (ರೈತರ ಪ್ರತಿಭಟನೆ).
- News18 Kannada
- Last Updated: September 28, 2020, 6:48 AM IST
ಬೆಂಗಳೂರು (ಸೆ. 28): ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ. 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಹೀಗಾಗಿ, ಇಂದು ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಹಾಗಿದ್ದರೆ, ಆ ಸೇವೆಗಳು ಯಾವವು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ. ಇಂದು ರೈತರು ಹಾಗೂ ಕೆಲ ಸಂಘಟನೆಗಳು ಪ್ರತಿಭಟನೆ ಮಾಡುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಟೌನ್ ಹಾಲ್, ರೈಲ್ವೆ ಸ್ಟೇಷನ್, ಮೆಜೆಸ್ಟಿಕ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರಮುಖವಾಗಿ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಈ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲು ನಿರ್ಧರಿಸಲಾಗಿದೆ. ಪ್ರತಿಭಟನೆ ತೀವ್ರತೆ ನೋಡಿಕೊಂಡು ಭದ್ರತೆ ಹೆಚ್ಚಿಸಲು ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲೂ ಪ್ರತಿಭಟನೆ ನಡೆಯಲಿದೆ. ಜತೆಗೆ ಈಗಾಗಲೇ ಮುಖ್ಯಮಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸ ಸೇರಿದಂತೆ ಎಲ್ಲ ಸಚಿವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ರಸ್ತೆ ಕೆಲಕಾಲ ಬಂದ್ ಆಗುವ ಸಾಧ್ಯತೆ ಇದೆ. ಕರವೇ ಕಾರ್ಯಕರ್ತರಿಂದ ರ್ಯಾಲಿ ನಡೆಯಲಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಯೋಜಿಸಲಾಗಿದೆ. ಇನ್ನು, ಎಂದಿನಂತೆ ಸರ್ಕಾರಿ ಸ್ವಾಮ್ಯದ ವಾಹನಗಳು ಓಡಾಡಲಿವೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಓಡಾಟದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈಗಾಗಲೇ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಅಂಗಡಿ ಮುಂಗಟ್ಟುಗಳು, ಮಾಲ್ಗಳು ಮುಚ್ಚಿರಲಿವೆ. ಆಟೋ, ಓಲಾ, ಊಬರ್ ಮುಂತಾದ ಖಾಸಗಿ ಸಾರಿಗೆ ವ್ಯವಸ್ಥೆ ಬಂದ್ಗೆ ಬೆಂಬಲ ಸೂಚಿಸಿದ್ದು, ಇವು ಸಂಪೂರ್ಣ ಸ್ತಬ್ಧವಾಗಲಿದೆ. ಹೋಟೆಲ್ಗಳು ನೈತಿಕ ಬೆಂಬಲ ಮಾತ್ರ ಇರುವುದರಿಂದ ಅವು ತೆರೆದಿರಲಿವೆ.
ಉಳಿದಂತೆ ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೊಲ್ ಬಂಕ್, ತರಕಾರಿ-ಹಣ್ಣು ಮುಂತಾದ ಅಗತ್ಯ ಸೇವೆಗಳು ಎಂದಿನಂತೆ ಮುಂದುವರೆಯಲಿವೆ.
ಏನಿರುತ್ತೆ?:
ಕರ್ನಾಟಕ ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ. ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿದ್ದು, ಕೆಎಸ್ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.
ಏನಿರಲ್ಲ?:ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ. ಅಂಗಡಿ ಮುಂಗಟ್ಟು ಕ್ಲೋಸ್, ಮಾಲ್ ಗಳು ಓಪನ್ ಆಗಲ್ಲ, ಪ್ರತಿಭಟನೆಯ ತೀವ್ರತೆ ನೋಡಿಕೊಂಡು ಕೈಗಾರಿಕೆಗಳು, ಕಂಪನಿಗಳು ಮುಚ್ಚುವ ಬಗ್ಗೆ ನಿರ್ಧಾರ ಮಾಡಲು ನಿರ್ಧರಿಸಲಾಗಿದೆ.
ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ರಸ್ತೆ ಕೆಲಕಾಲ ಬಂದ್ ಆಗುವ ಸಾಧ್ಯತೆ ಇದೆ. ಕರವೇ ಕಾರ್ಯಕರ್ತರಿಂದ ರ್ಯಾಲಿ ನಡೆಯಲಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಯೋಜಿಸಲಾಗಿದೆ.