ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections) ಇನ್ನು ಕೆಲವೇ ದಿನಗಳು ಬಾಕಿ ಇದೆ. ಹೀಗಿರುವಾಗ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯನ್ನು ನೇಮಕ ಮಾಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ನೇಮಕವಾಗಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ. ನಡ್ಡಾ ಆದೇಶದಂತೆ ಇದನ್ನು ನೇಮಿಸಲಾಗಿದೆ ಎನ್ನಲಾಗಿದೆ. ಇನ್ನು ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿ 25 ಸದಸ್ಯರು ಈ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ಚುನಾವಣಾ ಪ್ರಚಾರ ಸಮಿತಿಯ ಸದಸ್ಯ ಸ್ಥಾನಕ್ಕೆ ಬಿ ವೈ ವಿಜಯೇಂದ್ರಗೂ ಅವಕಾಶ ನೀಡಲಾಗಿದ್ದು, ಚುನಾವಣೆ ನಿರ್ವಹಣಾ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕಗೊಂಡಿದ್ದಾರೆ. ಆದರೆ ಈ ಬಾರಿ ಯಡಿಯೂರಪ್ಪ ಬದಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದ ಹೊಣೆ ನೀಡಲಾಗಿದೆ. ಬಿಎಸ್ವೈ ಅವರನ್ನು ಪ್ರಚಾರ ಸಮಿತಿಯ ಮೊದಲ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಇಲ್ಲಿದೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಪಟ್ಟಿ
ಇನ್ನು ಬಿಜೆಪಿಯ ಈ ಪ್ರಚಾರ ಸಮಿತಿಯಲ್ಲಿ ವಲಸಿಗ ಸಚಿವರಾದ ಸಚಿವ ಸುಧಾಕರ್, ರಮೇಶ್ ಜಾರಕಿಹೊಳಿ, ಎಸ್ ಟಿ ಸೋಮಶೇಖರ್ಗೂ ಸ್ಥಾನ ನೀಡಲಾಗಿದೆ. ಆದರೆ ಸೋಮಣ್ಣಗೆ ಸ್ಥಾನ ಲಭಿಸಿಲ್ಲ, ಅತ್ತ ಚುನಾವಣಾ ನಿರ್ವಹಣೆ ಸಮಿತಿಯಲ್ಲೂ ಅವರಿಗೆ ಅವಕಾಶ ಸಿಕ್ಕಿಲ್ಲ. ಬೆಂಗಳೂರಿನ ಇಬ್ಬರು ಸಚಿವರಿಗೆ ಸಚಿವ ಆರ್ ಅಶೋಕ್, ಅಶ್ವಥ್ ನಾರಾಯಣ್ ಪ್ರಚಾರ ಸಮಿತಿಯಲ್ಲಿ ಅವಕಾಶ ನೀಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ