HOME » NEWS » State » KARNATAKA BJP TWEETS DK SHIVAKUMAR PHOTO WITH RAMESH JARKIHOLI SEX SCANDAL MASTERMIND AMP CONGRESS HITS BACK SCT

ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ; ಫೋಟೋ ಮೂಲಕ ಡಿಕೆ ಶಿವಕುಮಾರ್ ಕೈವಾಡದ ಆರೋಪ ಮಾಡಿದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಡಿಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಆರೋಪಿ ಜೊತೆಗಿರುವ ಫೋಟೋವೊಂದನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಕೂಡ ಬಿಜೆಪಿಯ ಪ್ರಧಾನಿ, ಸಂಸದರು ಹಲವು ಆರೋಪಿಗಳೊಂದಿಗೆ ಇರುವ ಫೋಟೋಗಳನ್ನು ಟ್ವೀಟ್ ಮಾಡಿದೆ.

news18-kannada
Updated:March 17, 2021, 2:35 PM IST
ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣ; ಫೋಟೋ ಮೂಲಕ ಡಿಕೆ ಶಿವಕುಮಾರ್ ಕೈವಾಡದ ಆರೋಪ ಮಾಡಿದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು
ಡಿಕೆ ಶಿವಕುಮಾರ್ ಜೊತೆ ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಮಾಸ್ಟರ್​ಮೈಂಡ್
  • Share this:
ಬೆಂಗಳೂರು (ಮಾ. 17): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಬಿಜೆಪಿ ಆರೋಪ ಮಾಡಿತ್ತು. ಇದೆಲ್ಲದರ ಸೂತ್ರಧಾರ ಡಿ.ಕೆ. ಶಿವಕುಮಾರ್ ಎಂದು ಪರೋಕ್ಷವಾಗಿ ಅವರತ್ತಲೇ ಬೆರಳು ತೋರಿಸಿತ್ತು. ಇದಕ್ಕೆ ಪೂರಕವಾಗಿ ಇಂದು ಡಿಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಸೆಕ್ಸ್​ ಸಿಡಿ ಪ್ರಕರಣದ ಆರೋಪಿ ಜೊತೆಗಿರುವ ಫೋಟೋವೊಂದನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಕೂಡ ಬಿಜೆಪಿಯ ಪ್ರಧಾನಿ, ಸಂಸದರು ಹಲವು ಆರೋಪಿಗಳೊಂದಿಗೆ ಇರುವ ಫೋಟೋಗಳನ್ನು ಟ್ವೀಟ್ ಮಾಡಿದೆ.

ನಿನ್ನೆ ಟ್ವೀಟ್ ಮಾಡಿದ್ದ ಬಿಜೆಪಿ, ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವಿರುದ್ಧ ದಾಳಿ ನಡೆಸಿತ್ತು.

ಅದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಭ್ರಷ್ಟಾಚಾರ ಆರೋಪಿ ಮಹಾ ನಾಯಕ" ಎನ್ನುವ ಮೂಲಕ ನಿಮ್ಮದೇ ಪಕ್ಷದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ?! ಎಂದು ಪ್ರಶ್ನಿಸಿ ಲೇವಡಿ ಮಾಡಿತ್ತು.ಇಂದು ಮತ್ತೊಂದು ಫೋಟೋವನ್ನು ಟ್ವಿಟ್ಟರ್​ನಲ್ಲಿ ಬಿಡುಗಡೆ ಮಾಡಿರುವ ಕರ್ನಾಟಕ ಬಿಜೆಪಿ, ಮಹಾ ನಾಯಕರೊಬ್ಬರು ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ? ʼಮಾಸ್ಟರ್‌ ಮೈಂಡ್ʼ‌ ಮತ್ತು ʼರಿಂಗ್‌ ಮಾಸ್ಟರ್ʼ‌ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? ಎಂದು ಡಿಕೆ ಶಿವಕುಮಾರ್ ಜೊತೆಗೆ ಸಿಡಿ ಪ್ರಕರಣದ ಆರೋಪಿ ಇರುವ ಫೋಟೋವನ್ನು ಟ್ವೀಟ್​ ಮಾಡಿದೆ.ಅದಕ್ಕೆ ಮತ್ತೆ ಟ್ವಿಟ್ಟರ್​ನಲ್ಲಿಯೇ ಉತ್ತರ ನೀಡಿರುವ ಕಾಂಗ್ರೆಸ್ ಕೂಡ ಬಿಜೆಪಿ ನಾಯಕರು ಹಲವು ಪ್ರಕರಣಗಳ ಆರೋಪಿಗಳ ಜೊತೆಗೆ ಇರುವ ಫೋಟೋಗಳನ್ನು ಶೇರ್ ಮಾಡಿದೆ. ಹೆಣ್ಣುಮಕ್ಕಳನ್ನು ದುರ್ಬಳಕೆ ಮಾಡಿಕೊಂಡ ಮಾಜಿ ಸಚಿವರ ನಡವಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಬಿಜೆಪಿಗೂ ಈ ಆರೋಪಿಗಳಿಗೂ ಏನು ಸಂಬಂಧ ಎಂದು ಪ್ರಶ್ನಿಸಿದೆ.ದೇಶದ್ರೋಹಿ ಮತ್ತು ಅತ್ಯಾಚಾರಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಏನು ಸಂಬಂಧ? ಸಂಸದ ತೇಜಸ್ವಿ ಸೂರ್ಯ ಅವರಿಗೂ ಡ್ರಗ್ ಡೀಲರ್​ಗೂ ಏನು ಸಂಬಂಧ? ಸಂಸದ ಪ್ರತಾಪ್ ಸಿಂಹ ಅವರಿಗೂ ಈ ಫೋಟೋದಲ್ಲಿರುವ ಆರೋಪಿಗೂ ಏನು ಸಂಬಂಧ? ಡಿಸಿಎಂ ಲಕ್ಷ್ಮಣ ಸವದಿಗೂ ಯುವರಾಜ ಸ್ವಾಮಿಗೂ ಏನು ಸಂಬಂಧ? ಒಬ್ಬ ಸಚಿವರ ವಿಡಿಯೋ ರಿಲೀಸ್ ಅಗುತ್ತಿದ್ದಂತೆ ಹೆಗಲು ಮುಟ್ಟಿ ನೋಡಿಕೊಂಡು ಕೋರ್ಟ್​ನಿಂದ ತಡೆಯಾಜ್ಞೆ ತಂದವರು ಯಾರು? ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಚಾಟಿ ಬೀಸಿದೆ.
Published by: Sushma Chakre
First published: March 17, 2021, 2:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories