HOME » NEWS » State » KARNATAKA BUDGET 2020 STATE BUDGET PRESENTED BY BSY IS MOST DISAPPOINTING SAYS DK SHIVAKUMAR SNVS

Budget 2020 | ಸರ್ಕಾರ ರಚಿಸುವಾಗ ಇದ್ದ ಹುರುಪು ಈ ಬಜೆಟ್​ನಲ್ಲಿ ಇಲ್ಲ: ಡಿಕೆಶಿ

ಕೇಂದ್ರ ಸರ್ಕಾರ ಮಂಡಿಸಿದ್ದ ಬಜೆಟ್ಟೇ ದುರ್ಬಲ ಅಂದುಕೊಂಡಿದ್ದೆ. ಅದಕ್ಕಿಂತ ದುರ್ಬಲ ಬಜೆಟ್ ಅನ್ನು ಯಡಿಯೂರಪ್ಪ ನೀಡಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಕ್ಕೂ ಶಕ್ತಿ ಕೊಡಲಿಲ್ಲ. ಜನರಿಗೂ ಶಕ್ತಿ ಕೊಡಲಿಲ್ಲ. ಇದು ರಾಜ್ಯಕ್ಕೆ ದೊಡ್ಡ ಅನ್ಯಾಯ ಎಂದು ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

news18-kannada
Updated:March 5, 2020, 1:07 PM IST
Budget 2020 | ಸರ್ಕಾರ ರಚಿಸುವಾಗ ಇದ್ದ ಹುರುಪು ಈ ಬಜೆಟ್​ನಲ್ಲಿ ಇಲ್ಲ: ಡಿಕೆಶಿ
ಡಿಕೆ ಶಿವಕುಮಾರ್ ಪ್ರಾತಿನಿಧಿಕ ಚಿತ್ರ
  • Share this:
ಬೆಂಗಳೂರು(ಮಾ. 05): ಯಡಿಯೂರಪ್ಪ ಮಂಡಿಸಿದ ರಾಜ್ಯ ಆಯವ್ಯಯ ಪತ್ರದಲ್ಲಿ ಯಾವ ಶಕ್ತಿಯೂ ಇಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಟೀಕಿಸಿದರು. ಈ ಬಾರಿಯ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದ ಬಜೆಟ್​​ಗಿಂತಲೂ ಇದು ದುರ್ಬಲವಾಗಿದೆ ಎಂದು ಹರಿಹಾಯ್ದರು. ಉತ್ತರ ಕರ್ನಾಟಕದ ಮಿರ್ಚಿ ಮಂಡಕ್ಕಿಯಲ್ಲಿ ಉಪ್ಪು ಖಾರ ಇರುತ್ತೆ. ಈ ಬಜೆಟ್​ನಲ್ಲಿ ಖಾರವೂ ಇಲ್ಲ, ಉಪ್ಪೂ ಇಲ್ಲ, ಶಕ್ತಿಯೂ ಇಲ್ಲ ಎಂದು ವ್ಯಂಗ್ಯ ಮಾಡಿದರು.

ಯಡಿಯೂರಪ್ಪ ಅವರು ಹುರುಪಿನಲ್ಲಿ ಸರ್ಕಾರ ಮಾಡಿದರು. ಆದರೆ ಆ ಹುರುಪು ಅವರ ಬಜೆಟ್​ನಲ್ಲಿ ಕಾಣಿಸುತ್ತಿಲ್ಲ. ಯಡಿಯೂರಪ್ಪ ಅವರಲ್ಲಿ ಶಕ್ತಿ ಇಲ್ಲ ಎಂದ ಡಿಕೆಶಿ, ತನ್ನ ಕೈಯಲ್ಲಿ ಒಳ್ಳೆಯ ಬಜೆಟ್ ಮಾಡೋಕೆ ಆಗಿಲ್ಲ. ಜಿಎಸ್​ಟಿ ವಿಫಲವಾಗಿದೆ ಎಂದು ಬಜೆಟ್ ಪುಸ್ತಕದಲ್ಲೇ ಯಡಿಯೂರಪ್ಪ ಬರೆದುಕೊಂಡಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಮಂಡಿಸಿದ್ದ ಬಜೆಟ್ಟೇ ದುರ್ಬಲ ಅಂದುಕೊಂಡಿದ್ದೆ. ಅದಕ್ಕಿಂತ ದುರ್ಬಲ ಬಜೆಟ್ ಅನ್ನು ಯಡಿಯೂರಪ್ಪ ನೀಡಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಕ್ಕೂ ಶಕ್ತಿ ಕೊಡಲಿಲ್ಲ. ಜನರಿಗೂ ಶಕ್ತಿ ಕೊಡಲಿಲ್ಲ. ಇದು ರಾಜ್ಯಕ್ಕೆ ದೊಡ್ಡ ಅನ್ಯಾಯ ಎಂದು ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Karnataka Budget Highlights - ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬಜೆಟ್​ನಲ್ಲಿ ಸಿಕ್ಕಿದ್ದೇನು?: ಇಲ್ಲಿದೆ ಹೈಲೈಟ್ಸ್

ಹಳೆಯ ಯೋಜನೆಗಳನ ಹೆಸರನ್ನ ತೆಗೆದು ಹೊಸ ಹೆಸರನ್ನು ನಮೂದನೆ ಮಾಡಿದ್ದಾರೆ. ಪರಿಶಿಷ್ಟ ಜಾತಿ ಪಂಗಡದ ಲಮಾಣಿಗಳನ್ನು ಹೊರಗೆ ಬಿಟ್ಟಿದ್ದಾರೆ ಎಂದು ಟೀಕಿಸಿದರು.

ಹಸಿರು ಶಾಲು ಹಾಕಿಕೊಂಡ ಮಾತ್ರಕ್ಕೆ ರೈತರಾಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಹರಿಹಾಯ್ದ ಡಿಕೆ ಶಿವಕುಮಾರ್, ನಮ್ಮ ರಾಜ್ಯದ ಜನರಿಗೆ ಒಂದು ಪಾಲಿಸಿ ಕೊಡಬೇಕು ಎಂಬ ಉದ್ದೇಶ ಇವರಿಗೆ ಇಲ್ಲ. ಹಣ, ಶಕ್ತಿ ಮತ್ತು ಧ್ವನಿ ಇಲ್ಲದ ಬಜೆಟ್ ಇದಾಗಿದೆ. ಸಂಪಾದನೆ ಮಾಡುವ ಯಾವ ಯೋಜನೆಯೂ ಇಲ್ಲ. ಇದು ದಿಕ್ಕು ದೆಸೆ ಇಲ್ಲದ ಬಜೆಟ್ ಎಂದು ಕೋಪ ಪಟ್ಟಿದ್ದಾರೆ.

ವರದಿ: ಅಭಿಷೇಕ್ ಡಿ.ಆರ್.ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

Youtube Video
First published: March 5, 2020, 1:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories