Karnataka Budget 2022: ಯಡಿಯೂರಪ್ಪರನ್ನು ಹಿಂದಿಕ್ಕಿದ ಬೊಮ್ಮಾಯಿ! ಈವರ್ಷದ ಬಜೆಟ್ ಗಾತ್ರ 2,65,720 ಕೋಟಿ

2021-22ರಲ್ಲಿ ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಮಂಡಿಸಿದ್ದ ಕರ್ನಾಟಕ ಮುಂಗಡಪತ್ರ ಒಟ್ಟು ಗಾತ್ರ ₹ 2,46,207 ಕೋಟಿ (₹ 2.46 ಲಕ್ಷ ಕೋಟಿ) ಆಗಿತ್ತು.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
2022-23 ನೇ ಸಾಲಿನ ಕರ್ನಾಟಕ ಬಜೆಟ್   ಗಾತ್ರ 2,65,720 ಕೋಟಿ (Karnataka Budget 2022 Size) ರೂಪಾಯಿಯಷ್ಟಿದ್ದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಬಜೆಟ್ ಗಾತ್ರವನ್ನು ಹಿಂದಿನ ವರ್ಷಕ್ಕಿಂತ ಏರಿಸಿದ್ದಾರೆ. ಅಲ್ಲದೇ ಅನೇಕ ಜನಪ್ರಿಯ ಯೋಜನೆಗಳನ್ನು ಬಜೆಟ್ನಲ್ಲಿ ಸೇರಿಸಿದ್ದಾರೆ. 2021-22ರಲ್ಲಿ ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ(BS Yediyurappa) ಮಂಡಿಸಿದ್ದ ಕರ್ನಾಟಕ ಮುಂಗಡಪತ್ರ ಒಟ್ಟು ಗಾತ್ರ ₹ 2,46,207 ಕೋಟಿ (₹ 2.46 ಲಕ್ಷ ಕೋಟಿ) ಆಗಿತ್ತು. 2022-23 ನೇ ಸಾಲಿನ ಬಜೆಟ್ ಹಿಂದಿನ ಬಜೆಟ್​ಗಿಂತ ಹೆಚ್ಚಿನ ಗಾತ್ರ ಹೊಂದಿದ್ದು ಈವರ್ಷದ ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ. ಕವಿ ಗೋಪಾಲಕೃಷ್ಣ ಅಡಿಗರ ಕವನದ (Gopalakrishna Adiga) ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು ಕೃಷಿಗೆ 33,700 ಕೋಟಿ ಅನುದಾನ ನೀಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ 3,102 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ.

ಹಿಂದಿನ ವರ್ಷದ ಬಜೆಟ್ ಹೇಗಿತ್ತು?
2021-22ರಲ್ಲಿ ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಮಂಡಿಸಿದ್ದ ಬಜೆಟ್​ನಲ್ಲಿ ರಾಜ್ಯ ಸರ್ಕಾರದ ನಿರೀಕ್ಷಿತ ಆದಾಯ ₹ 2,43,734 ಕೋಟಿ ಒಟ್ಟು ವೆಚ್ಚ ₹ 2,46,207 ಕೋಟಿ ಬಜೆಟ್​ನ ಒಟ್ಟು ಕೊರತೆ ₹ 15,134 ಕೋಟಿ. ವಿತ್ತೀಯ ಕೊರತೆ ₹ 59,240 ಕೋಟಿ ಆಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿತ್ತು ಒಟ್ಟು ಸಾಲ ₹ 4,57,899 ಆಗುವ ಸಾಧ್ಯತೆಯಿದ್ದು, ಇದು ರಾಜ್ಯದ ಸರಾಸರಿ ತಲಾದಾಯದ ಶೇ 26.9ಕ್ಕೆ ಮುಟ್ಟುತ್ತದೆ ಎಂದು ಹೇಳಲಾಗಿತ್ತು.

ಈ ವರ್ಷದ ಬಜೆಟ್​ನ ಮುಖ್ಯಾಂಶಗಳೇನು?
ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ. ಸರ್ಕಾರದಿಂದ 100 ಕೋಟಿ ಷೇರು ಬಂಡವಾಳ ಘೋಷಣೆ ಮಾಡಲಾಗಿದೆ. ಜೊತೆಗೆ ಗೋಶಾಲೆಗಳಲ್ಲಿನ ಗೋವುಗಳ ದತ್ತು ಪ್ರೋತ್ಸಾಹಕ್ಕೆ ಪುಣ್ಯಕೋಟಿ ದತ್ತು ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇದನ್ನೂ ಓದಿ: Karnataka Budget 2022: ಜೆಟ್ ಮೂಲಕ ಸಿಎಂ ಬಜೆಟ್ ಪ್ರಚಾರ! ವಿಧಾನಸೌಧದ ಸುತ್ತ ಹಾರಿದ ಲಘು ವಿಮಾನ!

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಮಾಡಲಾದ ಅನುದಾನ ಹಂಚಿಕೆ:

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 - 5,000 ಕೋಟಿ ಘೋಷಿಸಲಾಗಿದೆ.

ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ 1,000 ಕೋಟಿ ರೂ. ಘೋಷಿಸಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ- 3,000 ಕೋಟಿ ರೂ.ಘೋಷಿಸಲಾಗಿದೆ.

ಎತ್ತಿನಹೊಳೆ ಯೋಜನೆ ಅನುದಾನ. 3,000 ಕೋಟಿ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Budget 2022: ಪ್ರೋತ್ಸಾಹ ಧನ, ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ: ಕೃಷಿ ವಲಯಕ್ಕೆ ಬಂಪರ್ ಕೊಡುಗೆ

ಮೇಕೆದಾಟು ಯೋಜನೆ- 1,000 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ತುಂಗಭದ್ರಾ ಜಲಾಶಯದ ಸರಿದೂಗಿಸಲು ನವಲೆ ನೀರು ಸಂಗ್ರಹಣೆ ಕೊರತೆಯಿದ್ದು  ಸಮತೋಲನಾ ಜಲಾಶಯ ಬಳಿ ನಿರ್ಮಾಣಕ್ಕೆ 1,000 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಕೇಂದ್ರ ಸರ್ಕಾರವು PMKSY-AIBP ಅಡಿಯಲ್ಲಿ ಸನ್ನತಿ, ಏತ ನೀರಾವರಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಘೋಷಿಸಲಾಗಿದೆ

ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ ಸಂಪದ ಸಂಯೋಜನೆಯೊಂದಿಗೆ 100 ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು 'ಮತ್ಸ ಸಿರಿ' ಯೋಜನೆ ಜಾರಿ.

ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ

ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ.

ದ್ವಿತಳಿ ಮೊಟ್ಟೆ ಉತ್ಪಾದಿಸಿ, ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ ಗಳ ವೆಚ್ಚದಲ್ಲಿ ಶೈತ್ಯಗಾರ ನಿರ್ಮಾಣ

ಹಾವೇರಿಯಲ್ಲಿ ಮೆಗಾಡೈರಿ ಸ್ಥಾಪನೆ; ಶಿವಮೊಗ್ಗ, ದಾವಣಗೆರೆ - ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ.
Published by:guruganesh bhat
First published: