Karnataka Budget 2022: ಕನ್ನಡ ಮತ್ತು ಸಂಸ್ಕೃತಿಗೆ ಪ್ರೋತ್ಸಾಹ, ಕಾರ್ಮಿಕರ ಅಭಿವೃದ್ಧಿ; ಅಗಲಿದ ಸಾಹಿತಿಗಳನ್ನು ನೆನೆದ ಸಿಎಂ

Karnataka Budget Highlights: ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆಗಳ ಸಾಮರ್ಥ್ಯವನ್ನು 100ಕ್ಕೆ ಹೆಚ್ಚಳ ಮಾಡಲಾಗುವುದು. 19 ಹೊಸ ಚಿಕಿತ್ಸಾಲಯಗಳ ಪ್ರಾರಂಭ ಮಾಡುವುದಾಗಿ ಮುಖ್ಯಮಂತ್ರಿಗಳು ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
ಎಲ್ಲರೂ ಕಾದುಕುಳಿತಿದ್ದ ಕರ್ನಾಟಕದ ಬಜೆಟ್​ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಈಗಾಗಲೇ ಮಂಡಿಸಿದ್ದಾರೆ. ಬಜೆಟ್​ನಲ್ಲಿ ಕನ್ನಡದ ಅಭಿವೃದ್ಧಿಗೆ (Kannada Development) ಮುಖ್ಯಮಂತ್ರಿ ಆದ್ಯತೆ ನೀಡಿದ್ದಾರಾ? ಕರ್ನಾಟಕದ ಸಂಸ್ಕೃತಿಯನ್ನು (Karnataka Culture) ಬೆಳೆಸಿ ಉಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ಯಾವೆಲ್ಲ ಯೋಜನೆ ಘೋಷಿಸಿದ್ದಾರೆ? ಅಲ್ಲದೇ ಕಾರ್ಮಿಕ ವರ್ಗಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಏನೆಲ್ಲ ನೀಡಿದ್ದಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರಿನ 20 ಶಾಲೆಗಳನ್ನು 89 ಕೋಟಿಯಲ್ಲಿ ಉನ್ನತೀಕರಿಸಿ ಬೆಂಗಳೂರು ಪಬ್ಲಿಕ್ ಶಾಲೆ (Bengaluru Public School) ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಿಸಿದ್ದಾರೆ.

ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಾಹಿತಿ ಸಮ್ಮೇಳನ ಆಯೋಜಿಸಲು 20 ಕೋಟಿ ಅನುದಾನ ನೀಡಲಾಗುವುದು. ಕಾಸರಗೋಡು, ಅಕ್ಕಲಕೋಟೆ,ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲಾಗುವುದು. ಜೋಗ ಜಲಪಾತದಲ್ಲಿ 116 ಕೋಟಿ ವೆಚ್ಚದಲ್ಲಿ ಹೋಟೆಲ್, ರೋಪ್ ವೇ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಅಗಲಿದ ಕವಿಗಳನ್ನು ನೆನೆದ ಸಿಎಂ
ಬಜೆಟ್​ನಲ್ಲಿ ಘೋಷಿಸಿದಂತೆ ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲಾಗುತ್ತದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು.. ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ, ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ, ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ ರೂಪಿಸಲಾಗುವುದು ಎಂದು ಅವರು ತಿಳಿಸಿದರು.

ಅಗಲಿದ ಕನ್ನಡದ ಹಿರಿಯ ಸಾಹಿತಿಗಳಾದ ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರುಗಳ ಸಾಹಿತ್ಯವನ್ನು ಇನ್ನಷ್ಟು ಪ್ರಚಾರ ಮಾಡಲು ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಇದನ್ನೂ ಓದಿ:  Karnataka Budget 2022: ಯಾವುದೇ ಹೊಸ ತೆರಿಗೆ ಇಲ್ಲ! ಸಿಎಂ ಘೋಷಣೆ ಕೇಳಿ ನಿರಾಳವಾಗಿ ಉಸಿರಾಡಿದ ಜನಸಾಮಾನ್ಯ

ಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಸ್ಥಳಗಳಾದ ಹಂಪಿ, ಬಾದಾಮಿ. ಐಹೊಳೆ, ಪಟ್ಟದಕಲ್ಲು, ವಿಜಯಪುರದ ಪ್ರವಾಸಿ ವೃತ್ತದ ಅಭಿವೃದ್ಧಿ ಮಾಡಲಾಗುವುದು. ಮೈಸೂರು, ಶ್ರೀರಂಗಪಟ್ಟಣ, ಹಾಸನ, ಬೇಲೂರು, ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಬೇಲೂರು, ಹಳೇಬೀಡು, ಸೋಮನಾಥಪುರ ಸೇರಿದಂತೆ ಹೊಯ್ಸಳ ಕಾಲದ ಸ್ಮಾರಕಗಳನ್ನು ಈವರ್ಷದಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಬಜೆಟ್​ನಲ್ಲಿ ಘೋಷಿಸಿದ್ದಾರೆ.

ವಿವಿಧ ಕಲೆಗೆ ಪ್ರೋತ್ಸಾಹ
ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರಿನಲ್ಲಿ ಸೀರೆ ಮೈಕ್ರೋ ಕ್ಲಸ್ಟರ್​ನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Budget 2022: ನೀರಾವರಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಕೊಟ್ಟ ಬೊಮ್ಮಾಯಿ

ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಏನೇನು?
2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2610 ಕೋಟಿ ರೂ. ಗಳ ಯೋಜನೆಗಳ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಪ್ರಾರಂಭ
ಕಟ್ಟಡ ಕಾರ್ಮಿಕರ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆಗಳ ಸಾಮರ್ಥ್ಯವನ್ನು 100ಕ್ಕೆ ಹೆಚ್ಚಳ ಮಾಡಲಾಗುವುದು. 19 ಹೊಸ ಚಿಕಿತ್ಸಾಲಯಗಳ ಪ್ರಾರಂಭ ಮಾಡುವುದಾಗಿ ಮುಖ್ಯಮಂತ್ರಿಗಳು ಬಜೆಟ್​ನಲ್ಲಿ ಘೋಷಿಸಿದ್ದಾರೆ.
Published by:guruganesh bhat
First published: