Karnataka Budget 2022: ಬೊಮ್ಮಾಯಿ ಬಜೆಟ್​ನಲ್ಲಿ ತವರು ಜಿಲ್ಲೆ ಹಾವೇರಿಗೆ ಬಂಪರ್ ಕೊಡುಗೆ

ತವರು ಜಿಲ್ಲೆ ಹಾವೇರಿಗೆ (Haveri) ಸಿಎಂ ಬಂಪರ್ ಕೊಡುಗೆಗಳ ಘೋಷಣೆ ಮಾಡಿದ್ದಾರೆ, ಹಾವೇರಿ ಜಿಲ್ಲೆಗೆ 15 ಯೋಜನೆಗಳನ್ನು ಘೋಷಣೆ ಮಾಡೋ ಮೂಲಕ ಜನರಿಗೆ ಗಿಫ್ಟ್ ನೀಡಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ಬಸವರಾಜ್ ಬೊಮ್ಮಾಯಿ

  • Share this:
Karnataka Budget 2022: ಇಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ (Basavaraja Bommai) ಬಹು ನಿರೀಕ್ಷಿತ ರಾಜ್ಯ ಬಜೆಟ್ ಮಂಡಿಸಿದ್ದಾರೆ. 2022-23 ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget 2022) ಗಾತ್ರ 2,65,720 ಕೋಟಿ ರೂಪಾಯಿ ಆಗಿದೆ. ಬಾರಿಯ ಬಜೆಟ್ನಲ್ಲಿ ಅನೇಕ ಜನಪ್ರಿಯ ಯೋಜನೆಗಳನ್ನು ಸೇರಿಸಿದ್ದಾರೆ. ಕಳೆದ ಬಾರಿಯ ಬಜೆಟ್ಗಾತ್ರಕ್ಕಿಂತ ಬಾರಿಯ ಬಜೆಟ್ಗಾತ್ರ ದೊಡ್ಡದಾಗಿದೆ. ಕಳೆದ ಬಾರಿಯ ಬಜೆಟ್ಗಾತ್ರ  ₹ 2,46,207 ಕೋಟಿ ಇತ್ತು. ಬಾರಿ ಮಂಡಿಸಲಾದ ರಾಜ್ಯ ಬಜೆಟ್​​ನಲ್ಲಿ ಎಲ್ಲಾ ವಲಯಗಳಿಗೂ ಅನುದಾನ ಹಂಚಿಕೆ ಮಾಡಲಾಗಿದೆ. ತವರು ಜಿಲ್ಲೆ ಹಾವೇರಿಗೆ (Haveri) ಸಿಎಂ ಬಂಪರ್ ಕೊಡುಗೆಗಳ ಘೋಷಣೆ ಮಾಡಿದ್ದಾರೆ, ಹಾವೇರಿ ಜಿಲ್ಲೆಗೆ 15 ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ತವರು ಜಿಲ್ಲೆ ಹಾವೇರಿಗೆ ಭರ್ಜರಿ ಕೊಡುಗೆ

ಸಿಎಂ ಬಸವರಾಜ ಬೊಮ್ಮಾಯಿ ಸಾಲು ಸಾಲು ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಬಂಪರ್​ ಕೊಡುಗೆಗಳನ್ನು ನೀಡಿದ್ದಾರೆ. ಹಾವೇರಿಯಲ್ಲಿ ಮೆಗಾಡೈರಿ, ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್‌, ಹಾವೇರಿಯಲ್ಲಿ ನೂತನ ವಿಶ್ವವಿದ್ಯಾಲಯದ ಸ್ಥಾಪನೆ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಹಾವೇರಿ ಜಿಲ್ಲೆಗೆ 15 ಯೋಜನೆಗಳ ಘೋಷಣೆ

ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ, ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ರಾಣೆಬೆನ್ನೂಇನಲ್ಲಿ 15 ಕೋಟಿ ರೂ.ಗಳ ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ ಮಾಡುವುದಾಗಿ ಘೋಷಿಸಿರುವ ಸಿಎಂ, ಹಾವೇರಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ. ಅನುದಾನ ಮೀಸಲಿಡುವುದಾಗಿ ತಿಳಿಸಿದ್ದಾರೆ.

ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ, ಹಾನಗಲ್ ನಲ್ಲಿ ಮಾವು ಸಂಸ್ಕರಣಾ ಘಟಕ, ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ 'ಮುಖ್ಯಮಂತ್ರಿ ಆರೋಗ್ಯ ವಾಹಿನಿ' ಹೆಸರಿನ ಸಂಚಾರಿ ಕ್ಲಿನಿಕ್, ಶಿಗ್ಗಾಂವಿ ತಾಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ, ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸನುಚ್ಛಯ ಸ್ಥಾಪಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: Karnataka Budget 2022: 'ಉತ್ತರ'ದ 'ಕಲ್ಯಾಣ'ಕ್ಕೆ ಸಿಎಂ ಕೊಟ್ಟಿದ್ದೇನು? ಕರಾವಳಿಗೆ ಸಿಕ್ಕಿದ್ದೇನು?

ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ

ಇನ್ನು, ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ ಸ್ಥಾಪನೆ, ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ ನೀಡಲಾಗಿದ್ದು, ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಮೀಸಲಿಟ್ಟಿದ್ದು, ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರ ನಿರ್ಮಾಣಕ್ಕೆ 28 ಕೋಟಿ ರೂ. ನಿಗದಿಪಡಿಸಲಾಗಿದೆ.

ತಾಲೂಕುಗಳಿಗೆ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕದ ಶಿಕ್ಷಣ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಯೋಜನೆಗಳಿಗೆ 1,500 ಕೋಟಿ ರೂ. ಹಾಗೂ ಮೈಕ್ರೋ ಯೋಜನೆಗಳಿಗೆ 1,500 ಕೋಟಿ ರೂ. ಮೀಸಲಿಡಲಾಗಿದೆ. ಇನ್ನು, ಕೊಪ್ಪಳ, ರಾಯಚೂರು ಜಿಲ್ಲೆಯ ರೈತರ ಬಹುದಿನದ ಕನಸಾಗಿದ್ದ ಕೊಪ್ಪಳದ ನವಲಿ ಬಳಿ ಸಮತೋಲನ ಜಲಾಶಯಕ್ಕೆ 1,000 ಕೋಟಿ ರೂ. ಮೀಸಲಿಡಲಾಗಿದೆ. ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Karnataka Budget 2022: ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 3,500 ಕೋಟಿ ಅನುದಾನ, ರಾಯಚೂರಿನಲ್ಲಿ ಗ್ರೀನ್-ಫೀಲ್ಡ್ ವಿಮಾನ ನಿಲ್ದಾಣ

ಉತ್ತರ ಕರ್ನಾಟಕ್ಕೂ ಭರ್ಜರಿ ಕೊಡುಗೆ

 ಉತ್ತರ ಕರ್ನಾಟಕ ಭಾಗಕ್ಕೆ ಈ ಬಾರಿ ಬಜೆಟ್ ಖುಷಿ ನೀಡಿದೆ. ಗದಗ-ಯಲವಿಗಿ ನೂತನ ರೈಲು ಮಾರ್ಗ ನಿರ್ಮಿಸಲಾಗುವುದು. ಇದಕ್ಕಾಗಿ 640 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕೆ 927 ಕೋಟಿ, 186  ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ, ರಾಯಚೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಅಭಿವೃದ್ಧಿಯಾಗುವುದು ಎಂದಿದ್ದಾರೆ.
Published by:Pavana HS
First published: