Karnataka Budget 2022: ಯಾವುದೇ ಹೊಸ ತೆರಿಗೆ ಇಲ್ಲ! ಸಿಎಂ ಘೋಷಣೆ ಕೇಳಿ ನಿರಾಳವಾಗಿ ಉಸಿರಾಡಿದ ಜನಸಾಮಾನ್ಯ

Karnataka Budget Highlights: ಎರಡು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಗಳಲ್ಲಿ ಬಂಡವಾಳ ಹಿಂತೆಗೆಯುವಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಟ್ಯಾಕ್ಸ್ ಬಗ್ಗೆ ಸಿಎಂ ಹೇಳಿದ್ದೇನು?

ಟ್ಯಾಕ್ಸ್ ಬಗ್ಗೆ ಸಿಎಂ ಹೇಳಿದ್ದೇನು?

  • Share this:
2022-23ರಲ್ಲಿ ಯಾವುದೇ ರೀತಿಯ ತೆರಿಗೆ ಹೆಚ್ಚಳ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಕರ್ನಾಟಕ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಈಮೂಲಕ ಕೊವಿಡ್ 19ರಿಂದ ಉಂಟಾದ ನಷ್ಟದಲ್ಲಿರುವ ಜನಸಾಮಾನ್ಯರಿಗೆ ಹೊಸ ತೆರಿಗೆಯ (New Tax) ಹೊರೆ ವಿಧಿಸುವುದಿಲ್ಲ ಎಂದು ಅವರು ಕರ್ನಾಟಕ ಬಜೆಟ್​ನಲ್ಲಿ (Karnataka Budget 2022) ಭರವಸೆ ನೀಡಿದ್ದಾರೆ. 2022-23ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ರೂ. ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ, ರಾಜ್ಯ ಅಬಕಾರಿ ಇಲಾಖೆಗೆ 29,000 ಕೋಟಿ ರೂ. ಹಾಗೂ ಸಾರಿಗೆ ಇಲಾಖೆಗೆ 8,007 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್​ನಲ್ಲಿ ಹೊಸ ತೆರಿಗೆಯ ಘೋಷಣೆಯಾಗುತ್ತದೆಯೋ ಹೇಗೆ ಎಂಬ ಚಿಂತೆಯಲ್ಲಿದ್ದ ಜನಸಾಮಾನ್ಯರಿಗೆ ಈಮೂಲಕ ಸಿಎಂ ಬಸವರಾಜ ಬೊಮ್ಮಾಯಿ ನಿರಾಳತೆ ನೀಡಿದ್ದಾರೆ.

ಎರಡು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಗಳಲ್ಲಿ ಬಂಡವಾಳ ಹಿಂತೆಗೆಯುವಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು.  ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಗಳಲ್ಲಿ ಬಂಡವಾಳ ಹಿಂತೆಗೆಯುವಿಕೆಯ ಸಾರ್ವಜನಿಕ ಸಂಗ್ರಹಣೆಯಲ್ಲಿ ಇನ್ನಷ್ಟು ಪಾರದರ್ಶಕತೆ ತರಲು ಪೂರ್ವ ಪರಿಶೀಲನೆಗಾಗಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್​ನಲ್ಲಿ ಭರವಸೆ ನೀಡಿದ್ದಾರೆ.

ಪಡಿತರ ವಿತರಣೆ ಹೆಚ್ಚಳ
ಪಡಿತರ ವಿತರಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದಾರೆ. 5 ಕೆಜಿ ಅಕ್ಕಿಯ ಜತೆ 1 ಕೆಜಿ ರಾಗಿ ಅಥವಾ ಜೋಳ ವಿತರಣೆ ಮಾಡಲಾಗುವುದು. ಇದಕ್ಕೆ 1400 ಕೋಟಿ ರೂ ಹೆಚ್ಚುವರಿ ವೆಚ್ಚವಾಗಲಿದ್ದು 4.34 ಕೋಟಿ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: Karnataka Budget 2022: ಸರ್ಕಾರದಿಂದ ದೇಗುಲ ಸ್ವತಂತ್ರಕ್ಕೆ ಕ್ರಮ, ಕಾಶಿಯಾತ್ರೆಗೆ ಸಹಾಯಧನ, ಪಿಎಂ ಮೋದಿ ಕನಸಿಗೆ ನೀರೆರೆದ ಸಿಎಂ

2022-23 ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 2,65,720 ಕೋಟಿ (Karnataka Budget 2022 Size) ರೂಪಾಯಿಯಷ್ಟಿದ್ದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಬಜೆಟ್ ಗಾತ್ರವನ್ನು ಹಿಂದಿನ ವರ್ಷಕ್ಕಿಂತ ಏರಿಸಿದ್ದಾರೆ. ಅಲ್ಲದೇ ಅನೇಕ ಜನಪ್ರಿಯ ಯೋಜನೆಗಳನ್ನು ಬಜೆಟ್ನಲ್ಲಿ ಸೇರಿಸಿದ್ದಾರೆ. 2021-22ರಲ್ಲಿ ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ(BS Yediyurappa) ಮಂಡಿಸಿದ್ದ ಕರ್ನಾಟಕ ಮುಂಗಡಪತ್ರ ಒಟ್ಟು ಗಾತ್ರ ₹ 2,46,207 ಕೋಟಿ (₹ 2.46 ಲಕ್ಷ ಕೋಟಿ) ಆಗಿತ್ತು. 2022-23 ನೇ ಸಾಲಿನ ಬಜೆಟ್ ಹಿಂದಿನ ಬಜೆಟ್​ಗಿಂತ ಹೆಚ್ಚಿನ ಗಾತ್ರ ಹೊಂದಿದ್ದು ಈವರ್ಷದ ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ.

ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳು!
ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು ಕೃಷಿಗೆ 33,700 ಕೋಟಿ ಅನುದಾನ ನೀಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ 3,102 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ: Karnataka Budget 2022: ಯಡಿಯೂರಪ್ಪರನ್ನು ಹಿಂದಿಕ್ಕಿದ ಬೊಮ್ಮಾಯಿ! ಈವರ್ಷದ ಬಜೆಟ್ ಗಾತ್ರ 2,65,720 ಕೋಟಿ

ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್‌ ಇಂಡಿಯಾ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಇಲಾಖೆಯ ದೇವಾಲಯಗಳಲ್ಲಿ ಪಾರದರ್ಶಕತೆ, ದೇವಾಲಯದ ಹಣಕಾಸಿನ ಉತ್ತರದಾಯಿತ್ವ, ಡಿಜಿಟಲ್‌ ಪೇಮೆಂಟ್ಸ್‌ ಸೌಲಭ್ಯ, ಇತಿಹಾಸ, ಸೇವೆ, ಉತ್ಸವ ಇತ್ಯಾಧಿ ಮಾಹಿತಿಗಳನ್ನು ಆನ್‍ಲೈನ್ ಮುಖಾಂತರ ಭಕ್ತಾದಿಗಳಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಐ.ಟಿ.ಎಂ.ಎಸ್ (Integrated Temple Management System) ತಂತ್ರಾಂಶ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
Published by:guruganesh bhat
First published: