• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Budget 2023: ಬಜೆಟ್​ನಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಭಾರೀ ಪ್ರೋತ್ಸಾಹ, ನರೇಗಾ ಸಹಕಾರದಿಂದ ಕ್ರೀಡಾ ಮೈದಾನಗಳ ಕೊಡುಗೆ

Karnataka Budget 2023: ಬಜೆಟ್​ನಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಭಾರೀ ಪ್ರೋತ್ಸಾಹ, ನರೇಗಾ ಸಹಕಾರದಿಂದ ಕ್ರೀಡಾ ಮೈದಾನಗಳ ಕೊಡುಗೆ

ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ

ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ

Karnataka Budget 2023: ಈ ಬಾರಿಯ ರಾಜ್ಯ ಬಜೆಟ್​ ನಲ್ಲಿ ಸಿಎಂ ಬೊಮ್ಮಾಯಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ಈ ಮೂಲಕ ಬೆಂಗಳೂರಿನ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಬಜೆಟ್​ ಮಂಡಿಸಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರು ಇಂದು ರಾಜ್ಯ ಬಜೆಟ್ (Karnataka State Budget 2023-24) ಮಂಡಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಹಂತದಲ್ಲಿ ಮಂಡಿಸಲಾಗುವ ಸಿಎಂ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಸಾಕಷ್ಟು ನಿರೀಕ್ಷೆಗಳಿವೆ. ಈ ಬಜೆಟ್​ನಲ್ಲಿ ಬೊಮ್ಮಾಯಿ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಸಾಕಷ್ಟು ಹಣಕಾಸಿನ ನೆರವನ್ನು ನೀಡಿದ್ದಾರೆ. ಈ ಮೂಲಕ ಅನೇಕ ಗ್ರಾಮೀಣ ಕ್ರೀಡೆಗಳಿಗೂ ಬಜೆಟ್​ನಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ಅಲ್ಲದೇ ಕಾಂತಾರ ಬಳಿಕ ಕಂಬಳ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ.


ಕ್ರೀಡಾ ಕ್ಷೇತ್ರಕ್ಕೂ ಪ್ರೋತ್ಸಾಹ:


ಈ ಬಾರಿಯ ರಾಜ್ಯ ಬಜೆಟ್​ ನಲ್ಲಿ ಸಿಎಂ ಬೊಮ್ಮಾಯಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ಈ ಮೂಲಕ ಬೆಂಗಳೂರಿನ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಬಜೆಟ್​ ಮಂಡಿಸಿದ್ದಾರೆ. ಜೊತೆಗೆ ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃಧಿಗೆ ಕ್ರಮ. ಈ ಕ್ರೀಡಾಂಗಣದಲ್ಲಿ ಮಹಿಳೆಯರು ಮತ್ತು ವಿಶೇಷ ಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಕರಿಗೆ ಹೊರಂಗಣ ಜಿಮ್​ ಸೌಲಭ್ಯ ನೀಡಿದ್ದಾರೆ. ಈ ಉದ್ದೇಶಕ್ಕಾಗಿ ಪ್ರಸಕ್ತ ವರ್ಷದಲ್ಲಿ ಬರೋಬ್ಬರಿ 100 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ.


ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ:


ಇನ್ನು, ಬಜೆಟ್​ನಲ್ಲಿ ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದ ಕ್ರೀಡೆಗಳನ್ನು ಮಕ್ಕಳಿಗೆ ಪರಿಚಯಿಸಲು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟಗಳ ಆಯೋಜಿಸಲಾಗುವುದು. ಅಲ್ಲದೇ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.


ಇದನ್ನೂ ಓದಿ: Karnataka Budget 2023 Live Updates: ಕೊನೆಗೂ ನನಸಾದ ಉತ್ತರ ಕನ್ನಡ ಜನರ ಕನಸು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ


ಕ್ರೀಡಾ ಲೋಕಕ್ಕೆ ಹೆಚ್ಚು ಆದ್ಯತೆ:


ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಖಾಸಗಿ ಸಂಸ್ಥೆಗಳಿಗೆ 25 ಲಕ್ಷ ರೂ. ಗಳವರೆಗೆ ಪ್ರೀತ್ಸಾಹಧನ ನೀಡಿದ್ದಾರೆ. ಜೊತೆಗೆ ಬಾಸ್ಕೆಟ್ ಬಾಲ್​ ಮತ್ತು ವಾಲಿಬಾಲ್​ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಮೈದಾನ ಮತ್ತು ವಿಶೇಷ ತರಬೇತಿ ಕೇಂದ್ರ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.
ರಾಜ್ಯ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಯುವ ಜನರಿಗೆ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಜೊತೆಗೆ ಒಲಂಪಿಕ್ಸ್ ಮತ್ತು ಇತರ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವರಚ್ಚದಲ್ಲಿ ಕರ್ನಾಟಕ ಒಲಂಪಿಕ್​ ಕನಸಿನ ಯೋಜನೆಗೆ ಚಾಲನೆ.


ಬೃಹತ್​ ಗಾತ್ರದ ಬಜೆಟ್​:


ಕಳೆದ ಬಾರಿ ಸಿಎಂ ಬೊಮ್ಮಾಯಿ 2 ಲಕ್ಷದ 65 ಸಾವಿರದ 720 ಕೋಟಿ ರೂಪಾಯಿ ಗಾತ್ರದ ಬಜೆಟ್​ ಮಂಡಿಸಿದ್ದರು. ಈ ವರ್ಷದ ತೆರಿಗೆ ಆದಾಯ ಹೆಚ್ಚಳವಾಗಿರುವುದರಿಂದ ಸಹಜವಾಗಿಯೇ ಬಜೆಟ್ ಗಾತ್ರವೂ ಹೆಚ್ಚಿಸಿದ್ದಾರೆ. 3 ಲ್ಕಷದ 20 ಸಾವಿರ ಕೋಟಿಯ ದೊಡ್ಡ ಬಜೆಟ್​ ಮಂಡಿಸುತ್ತಿದ್ದಾರೆ.  ಇನ್ನು,  ಉತ್ತರ ಕನ್ನಡ  ಜಿಲ್ಲೆ ಜನರ ಬಹುದಿನಗಳ ಕನಸು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊನೆಗೂ ನನಸಾಗಿದ್ದು, ಕುಮುಟಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡಲಾಗಿದೆ.

Published by:shrikrishna bhat
First published: