ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರು ಇಂದು ರಾಜ್ಯ ಬಜೆಟ್ (Karnataka State Budget 2023-24) ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆ ಹಂತದಲ್ಲಿ ಮಂಡಿಸಲಾಗುವ ಸಿಎಂ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿದೆ. ಈ ಬಜೆಟ್ನಲ್ಲಿ ಮಹಿಳಾ (Women) ವರ್ಗವನ್ನು ಓಲೈಸಲು ಬೊಮ್ಮಾಯಿ ಸರ್ಕಾರ ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಬಜೆಟ್ ಬಗ್ಗೆ ಜನಸಾಮಾನ್ಯರ ನಿರೀಕ್ಷೆಗಳೂ ಗರಿಗೆದರಿವೆ.
ಕಳೆದ ಬಾರಿ ಸಿಎಂ ಬೊಮ್ಮಾಯಿ 2 ಲಕ್ಷದ 65 ಸಾವಿರದ 720 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ವರ್ಷದ ತೆರಿಗೆ ಆದಾಯ ಹೆಚ್ಚಳವಾಗಿರುವುದರಿಂದ ಸಹಜವಾಗಿಯೇ ಬಜೆಟ್ ಗಾತ್ರವೂ ಹೆಚ್ಚಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಆರಂಭಿಸಿದ್ದು, ಬಜೆಟ್ಗು ಮುನ್ನ ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ. 7 ನೇ ವೇತನ ಜಾರಿಯಾಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಸರ್ಕಾರಿ ಉದ್ಯೋಗಿಗಳ ಆಸೆ ಹುಸಿಯಾಗಿದ್ದು, ಈ ಬಾರಿಯ ಬಜೆಟ್ನಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದರಿಂದ ಬಹಳ ಖುಷಿಯಿಂದ ಕಾಯುತ್ತಿದ್ದ ಉದ್ಯೋಗಿಗಳಿಗೆ ನಿರಾಸೆ ಆಗಿದೆ, ಹೀಗಿರುವಾಗ ರಾಜ್ಯ ಬಜೆಟ್ 2023-24ರ ಕ್ಷಣ ಕ್ಷಣದ ಮಾಹಿತಿ ನಿಮ್ಮ ನ್ಯೂಸ್18 ಕನ್ನಡದಲ್ಲಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ