ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ತಮ್ಮ ಎರಡನೇ ಬಜೆಟ್ ಮಂಡನೆ ಮಾಡಿದರು. ರಾಜ್ಯದ ವಿವಿಧ ರೈಲು ಯೋಜನೆಗೆ ಅನುದಾನ ಮೀಸಲಿರಿಸಿದ್ದಾರೆ. ರಾಜ್ಯ ಸರ್ಕಾರವು (Karnataka Government) ರೈಲ್ವೆ ಮಂತ್ರಾಲಯದೊಂದಿಗೆ 50:50 ರ ವೆಚ್ಚ ಹಂಚಿಕೆ ಆಧಾರದಲ್ಲಿ 9 ಹೊಸ ರೈಲ್ವೆ ಯೋಜನೆಗಳನ್ನು (New Railway Projects) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರ್ಕಾರವು ನಿರ್ಮಾಣ ವೆಚ್ಚದ ಪಾಲನ್ನು ಒದಗಿಸುವುದಲ್ಲದೇ, ಎಲ್ಲಾ ಯೋಜನೆಗಳಿಗೆ ಭೂ ಸ್ವಾಧೀನದ ವೆಚ್ಚವನ್ನು ಸಹ ಭರಿಸಲಿದೆ. ಈ ವರ್ಷದ ಕೇಂದ್ರ ಸರ್ಕಾರದ (Central Government) ಅಯವ್ಯಯದಲ್ಲಿ ಕರ್ನಾಟಕ ರೈಲು ಜಾಲವನ್ನು ಅಭಿವೃದ್ಧಿಪಡಿಸಲು 7,561 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದರು.
ಕೇಂದ್ರ ಸರ್ಕಾರವು ಈ ವರ್ಷದಲ್ಲಿ ತುಮಕೂರು-ಚಿತ್ರದುರ್ಗ ರೈಲ್ವೆ ಮಾರ್ಗಕ್ಕೆ 220 ಕೋಟಿ ರೂ., ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ 150 ಕೋಟಿ ರೂಪಾಯಿ, ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗಕ್ಕೆ 210 ಕೋಟಿ ರೂಪಾಯಿ ಒದಗಿಸಲಾಗಿದೆ.
1,537 ಕೋಟಿ ರೂಪಾಯಿ ಮೀಸಲು
ಮುನಿರಾಬಾದ್-ಗಿಣಿಗೇರಾ-ರಾಯಚೂರು ಮಾರ್ಗಕ್ಕೆ 150 ಕೋಟಿ ರೂಪಾಯಿ, ಗದಗ-ವಾಡಿ ಮಾರ್ಗ ರೈಲ್ವೆ ಮಾರ್ಗಕ್ಕೆ 200 ಕೋಟಿ ರೂಪಾಯಿ, ತುಮಕೂರು-ರಾಯದುರ್ಗ ರೈಲ್ವೆ ಮಾರ್ಗಕ್ಕೆ 225 ಕೋಟಿ ರೂಪಾಯಿ ಒಳಗೊಂಡಂತೆ ಎಲ್ಲಾ ಹೊಸ ರೈಲ್ವೆ ಕಾಮಗಾರಿಗಳಿಗೆ ಒಟ್ಟಾರೆಯಾಗಿ 1,537 ಕೋಟಿ ರೂಪಾಯಿಗಳನ್ನು ಪ್ರಸಕ್ತ ಸಾಲಿನ ಅಯವ್ಯಯದಲ್ಲಿ ಒದಗಿಸಲಾಗಿದೆ.
ಡಬ್ಲಿಂಗ್ ಕಾಮಗಾರಿಗಳಿಗೆ ಅದ್ಯತೆ
ಇದಲ್ಲದೇ, ಡಬ್ಲಿಂಗ್ ಕಾಮಗಾರಿಗಳಿಗೂ ಸಹ ಕೇಂದ್ರ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಬೈಯ್ಯಪನಹಳ್ಳಿ-ಹೊಸೂರು 100 ಕೋಟಿ ರೂಪಾಯಿ, ಹುಬ್ಬಳ್ಳಿ-ಚಿಕ್ಕಜಾಜೂರು 150 ಕೋಟಿ ರೂಪಾಯಿ, ಹೊಸಪೇಟೆ-ಹುಬ್ಬಳ್ಳಿ-ಲೋಂಡಾ-ವಾಸ್ಕೋ ಡ ಗಾಮಾ 400 ಕೋಟಿ ರೂಪಾಯಿ, ಗದಗ-ಹೋಟಗಿ 170 ಕೋಟಿ ರೂಪಾಯಿ, ಕೆಆರ್ ಪುರಂ-ವೈಟ್ಫೀಲ್ಡ್ 250 ಕೋಟಿ ರೂಪಾಯಿ ಒಳಗೊಂಡಂತೆ ಎಲ್ಲಾ ಡಬ್ಲಿಂಗ್ ಕಾಮಗರಿಗಳಿಗೆ ಈ ವರ್ಷದಲ್ಲಿ 1,4+0 ಕೋಟಿ ರೂಪಾಯಿ ಒದಗಿಸಲಾಗುತ್ತದೆ. ಈ ಎಲ್ಲಾ ಕಾಮಗಾರಿಗಳಿಗೆ ಅಗತ್ಯವಿರುವ ರಾಜ್ಯ ಸರ್ಕಾರದ ಪಾಲನ್ನು ನೀಡಲಾಗುವುದು.
ತುಮಕೂರು-ರಾಯದುರ್ಗ, ಗಿಣಿಗೇರಾ-ರಾಯಚೂರು, ಬಾಗಲಕೋಟೆ-ಕುಡಚಿ ಮತ್ತು ಚಿಕ್ಕಮಗಳೂರು-ಬೇಲೂರು ರೈಲ್ವೆ ಮಾರ್ಗಗಳ ಮೂಲ ಅಂದಾಜು 2,880 ಕೋಟಿ ರೂಪಾಯಿಗಳಿದ್ದು, ಕಳೆದ ವರ್ಷದಲ್ಲಿ ಇದನ್ನು 5,838 ಕೋಟಿ ರೂಪಾಯಿಗಳಿಗೆ ಪರಿಷ್ಕರಿಸಲಾಗಿದ್ದು, ಇದಕ್ಕೆ 960 ಕೋಟಿ ರೂ.ಗಳ ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರದ ವತಿಯಿಂದನ ಒದಗಿಸಲಾಗುವುದು. ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಮಾರ್ಗಕ್ಕಾಗಿ ಭೂಸ್ವಾಧೀನಕ್ಕಾಗಿ 150 ಕೋಟಿ ರೂಪಾಯಿ ಒದಗಿಸಲಾಗುತ್ತದೆ.
ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ರೈತರಿಗೆ ಬಂಪರ್ ಉಡುಗೊರೆ ನೀಡಲಾಗಿದೆ. ಇನ್ಮುಂದೆ ರೈತರಿಗೆ ಬಡ್ಡಿ ಇಲ್ಲದೇ 5 ಲಕ್ಷವರೆಗೆ ಸಾಲ ಕೊಡ್ತಾರಂತೆ. ಇದರಿಂದ ರಾಜ್ಯದ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಭೂಸಿರಿ ಎಂಬ ನೂತನ ಯೋಜನೆ ಅಡಿ ರೈತರಿಗೆ 10000 ರೂಪಾಯಿ ಸಹಾಯಧನ ನೀಡಲಾಗುತ್ತೆ.
ರೈತರ ಭೂಮಿಯನ್ನು ಹಸಿರನ್ನಾಗಿಸುವ ಉದ್ದೇಶದಿಂದ ಕೃಷಿ ಹೊಂಡವನ್ನು ನಿರ್ಮಿಸಲು ಉತ್ತೇಜನ ನೀಡುವ ಸಲುವಾಗಿ ಜಲನಿಧಿ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಕಳಸಾ ಬಂಡೂರಿ ನಾಲೆ ವಿಸ್ತರಣೆ ಯೋಜನೆಗೆ ಡಿಪಿಆರ್ಗೆ ಅನುಮೋದನೆ ಪಡೆಯಲಾಗಿದೆ.
ಇದನ್ನೂ ಓದಿ: Karnataka Budget 2023-24 Live: ನಿರುದ್ಯೋಗಿಗಳಿಗೆ ಸರ್ಕಾರದಿಂದ ಸಂಬಳ, ಬಜೆಟ್‌ನಲ್ಲಿ ಸಿಎಂ ಘೋಷಣೆ
ಯೋಜನೆ ಅನುಷ್ಠಾನಕ್ಕೆ 1,000 ಕೋಟಿ ಮೀಸಲಿಡಲಾಗಿದೆ. ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ 90 ಕೋಟಿ, ಚರ್ಮಗಂಟು ರೋಗ ತಡೆಯಲು 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. ಸೋಂಕಿನಿಂದ ಮರಣ ಹೊಂದಿದ ರಾಸುಗಳ ಮಾಲೀಕರಿಗೆ ಪರಿಹಾರ ನೀಡಲು 55 ಕೋಟಿ ಮಂಜೂರು ಮಾಡಲಾಗಿದೆ. ಅಡಿಕೆ ಬೆಳೆ ರೋಗ ನಿರ್ವಹಣೆ ತಂತ್ರಜ್ಞಾನ ಅಭಿವೃದ್ಧಿಗೆ 10 ಕೋಟಿ ಮೀಸಲಿಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ