• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Karnataka Budget 2023: ತವರು ಕ್ಷೇತ್ರಕ್ಕೆ ಸಿಎಂ ಬಂಪರ್ ಗಿಫ್ಟ್​; ಹಳ್ಳಿಗಳಲ್ಲಿ ಆರೋಗ್ಯ ಶಿಬಿರ

Karnataka Budget 2023: ತವರು ಕ್ಷೇತ್ರಕ್ಕೆ ಸಿಎಂ ಬಂಪರ್ ಗಿಫ್ಟ್​; ಹಳ್ಳಿಗಳಲ್ಲಿ ಆರೋಗ್ಯ ಶಿಬಿರ

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು.

 • News18 Kannada
 • 4-MIN READ
 • Last Updated :
 • Haveri, India
 • Share this:

ಬೆಂಗಳೂರು: ಇಂದು ಬಜೆಟ್ ಮಂಡಿಸಿದ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನಲ್ಲಿ (Savanuru, haveri) ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು. ಮನೆ ಮನೆಗೆ ಆರೋಗ್ಯ ಯೋಜನೆಯಡಿ ಪ್ರತಿ ಹಳ್ಳಿಯಲ್ಲಿ ವರ್ಷದಲ್ಲಿ ಎರಡು ಬಾರಿ ಆರೋಗ್ಯ ಶಿಬಿರವನ್ನು (Health Camps) ಸ್ಥಳೀಯ ಕೇಂದ್ರಗಳ ಮೂಲಕ ಆಯೋಜನೆ ಮಾಡಲಾಗುವುದು. ತೀವ್ರವಾದ ಖಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ ಚಿಕಿತ್ಸೆ (Treatment) ಕೊಡಲು ಯೋಜನೆ ರೂಪಿಸಲಾಗುವದು. ಜೊತೆಗೆ ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿ ತಲುಪಿಸಲು ಯೋಜನೆಯಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದರು.


ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಬಂಕಾಪುರದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನ್ನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​​ನ್ನಾಗಿ ಉನ್ನತೀಕರಣ ಮಾಡಲಾಗುತ್ತದೆ ಎಂದು ಹೇಳಿದರು.


ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು.


ಪಂಗಡಗಳು, ಅಂತೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ಜೊತೆಗೆ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.


ವಿದ್ಯಾನಿಧಿ ಯೋಜನೆ


ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂಪಾಯಿ ಮೊತ್ತವನ್ನು ಬಜೆಟ್​ನಲ್ಲಿ ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್​ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದೆ.


ಇದನ್ನೂ ಓದಿ:  Karnataka Budget 2023 Live Updates: ಚುನಾವಣೆಗೆ ದಿನಗಣನೆ, ಜನಸ್ನೇಹಿ ಬಜೆಟ್ ಘೋಷಣೆಯ ನಿರೀಕ್ಷೆ


ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ಈ ವರ್ಷದಲ್ಲಿ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.ರೈಲು ಜಾಲಕ್ಕೆ 7 ಸಾವಿರ ಕೋಟಿ


ರಾಜ್ಯ ಸರ್ಕಾರವು (Karnataka Government) ರೈಲ್ವೆ ಮಂತ್ರಾಲಯದೊಂದಿಗೆ 50:50 ರ ವೆಚ್ಚ ಹಂಚಿಕೆ ಆಧಾರದಲ್ಲಿ 9 ಹೊಸ ರೈಲ್ವೆ ಯೋಜನೆಗಳನ್ನು (New Railway Projects) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರ್ಕಾರವು ನಿರ್ಮಾಣ ವೆಚ್ಚದ ಪಾಲನ್ನು ಒದಗಿಸುವುದಲ್ಲದೇ, ಎಲ್ಲಾ ಯೋಜನೆಗಳಿಗೆ ಭೂ ಸ್ವಾಧೀನದ ವೆಚ್ಚವನ್ನು ಸಹ ಭರಿಸಲಿದೆ.


ಈ ವರ್ಷದ ಕೇಂದ್ರ ಸರ್ಕಾರದ (Central Government) ಅಯವ್ಯಯದಲ್ಲಿ ಕರ್ನಾಟಕ ರೈಲು ಜಾಲವನ್ನು ಅಭಿವೃದ್ಧಿಪಡಿಸಲು 7,561 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದರು.
ಕೇಂದ್ರ ಸರ್ಕಾರವು ಈ ವರ್ಷದಲ್ಲಿ ತುಮಕೂರು-ಚಿತ್ರದುರ್ಗ ರೈಲ್ವೆ ಮಾರ್ಗಕ್ಕೆ 220 ಕೋಟಿ ರೂ., ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ 150 ಕೋಟಿ ರೂಪಾಯಿ, ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗಕ್ಕೆ 210 ಕೋಟಿ ರೂಪಾಯಿ ಒದಗಿಸಲಾಗಿದೆ.


1,537 ಕೋಟಿ ರೂಪಾಯಿ ಮೀಸಲು


ಮುನಿರಾಬಾದ್-ಗಿಣಿಗೇರಾ-ರಾಯಚೂರು ಮಾರ್ಗಕ್ಕೆ 150 ಕೋಟಿ ರೂಪಾಯಿ, ಗದಗ-ವಾಡಿ ಮಾರ್ಗ ರೈಲ್ವೆ ಮಾರ್ಗಕ್ಕೆ 200 ಕೋಟಿ ರೂಪಾಯಿ, ತುಮಕೂರು-ರಾಯದುರ್ಗ ರೈಲ್ವೆ ಮಾರ್ಗಕ್ಕೆ 225 ಕೋಟಿ ರೂಪಾಯಿ ಒಳಗೊಂಡಂತೆ ಎಲ್ಲಾ ಹೊಸ ರೈಲ್ವೆ ಕಾಮಗಾರಿಗಳಿಗೆ ಒಟ್ಟಾರೆಯಾಗಿ 1,537 ಕೋಟಿ ರೂಪಾಯಿಗಳನ್ನು ಪ್ರಸಕ್ತ ಸಾಲಿನ ಅಯವ್ಯಯದಲ್ಲಿ ಒದಗಿಸಲಾಗಿದೆ.

Published by:Mahmadrafik K
First published: