ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai Budget 2023) ಮಲೆನಾಡು ಅಭಿವೃದ್ಧಿಗೂ ಹಲವು ಯೋಜನೆಗಳನ್ನು (Karnataka Budget 2023) ಘೋಷಿಸಿದ್ದಾರೆ. ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಕಿದ್ವಾಯಿ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯನ್ನು ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ. ಮಲೆನಾಡಿನ ಅಡಿಕೆ (Arecanut Farmers) ಕೃಷಿಕರನ್ನು ಬಾಧಿಸುತ್ತಿರುವ ಎಲೆಚುಕ್ಕಿ ರೋಗವನ್ನು ನಿವಾರಿಸುವ ಕುರಿತು ಸಹ ಸಿಎಂ ಬೊಮ್ಮಾಯಿ (CM Basavaraj Bommai) ಬಜೆಟ್ನಲ್ಲಿ ಘೋಷಿಸಿದ್ದಾರೆ.
ಅಡಿಕೆ ಬೆಳೆಗಾರರಿಗೆ 10 ಕೋಟಿ ನೆರವು
ಅಡಿಕೆ ಬೆಳೆಯನ್ನು ಬಾಧಿಸುವ ರೋಗಗಳ ನಿರ್ವಹಣೆಗೆ ನೂತನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಜೊತೆಗೆ ಉತ್ಪಾದಕತೆ ಹೆಚ್ಚಿಸುವ ಅಗತ್ಯತೆಯಿದೆ. ಹೀಗಾಗಿ ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂ. ಗಳ ನೆರವು ನೀಡಲಾಗುವುದು ಎಂದು ಎಂದು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: Karnataka Budget 2023 Live Updates: ಕೊನೆಗೂ ನನಸಾದ ಉತ್ತರ ಕನ್ನಡ ಜನರ ಕನಸು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ
ಮಾನವ-ಆನೆ ಸಂಘರ್ಷ ತೆಡಯಲು ಅನುದಾನ
ಮಾನವ-ಆನೆ ಸಂಘರ್ಷವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ 12 ಕಿ.ಮೀ. ರೈಲ್ವೆ ಬ್ಯಾರಿಕೇಡ್, 36 ಕಿ.ಮೀ. ಆನೆ ನಿರೋಧಕ ಕಂದಕ, 186 ಕಿ.ಮೀ. ಸೌರಶಕ್ತಿ ಬೇಲಿ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. 2022-23ನೇ ಸಾಲಿನಲ್ಲಿ ಈ ಕಾಮಗಾರಿಗಳಿಗೆ ಒದಗಿಸಲಾಗಿದೆ. 150 ಕೋಟಿಗಳ ಅನುದಾನ ನೀಡಲಾಗಿದೆ.
9 ಲಕ್ಷ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ
ಸಮುದ್ರಕ್ಕೆ ಸೇರುವ ನೀರನ್ನು ತಡೆಹಿಡಿದು ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿಗೆ ಪಶ್ಚಿಮವಾಹಿನಿ ರೂಪಿಸಲಾಗಿರುವ ಯೋಜನೆಯನ್ನು ಅಭಿವೃದ್ಧಿಪಡಿಸಲಾಗುವುದು. ರಾಜ್ಯದ 9 ಲಕ್ಷ ಹಾಲು ಉತ್ಪಾದಕರಿಗೆ 1,067 ಕೋಟಿ ರೂ. ಪ್ರೋತ್ಸಾಹಧನವನ್ನು ನೇರ ನಗದು ಪಾವತಿ ಮೂಲಕ ವರ್ಗಾವಣೆ ಮಾಡಲಾಗಿದೆ.
ನಾರಾಯಣ ಗುರು ವಸತಿ ಶಾಲೆ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ