• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Budget 2023: ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಅಸ್ತು, ಆರೋಗ್ಯ ಕ್ಷೇತ್ರಕ್ಕೆ ಬೊಮ್ಮಾಯಿ 'ಬೂಸ್ಟರ್ ಡೋಸ್'!

Karnataka Budget 2023: ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಅಸ್ತು, ಆರೋಗ್ಯ ಕ್ಷೇತ್ರಕ್ಕೆ ಬೊಮ್ಮಾಯಿ 'ಬೂಸ್ಟರ್ ಡೋಸ್'!

ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?

ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?

ಉತ್ತರ ಕನ್ನಡ ಜಿಲ್ಲೆ (Uttara Kannada) ಜನರ ಬಹು ದಿನಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ (multi-speciality hospital) ಈ ಬಾರಿ ಬಜೆಟ್‌ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. 'ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ' ಎಂಬ ಧೈಯದೊಂದಿಗೆ ಹಲವು ಆರೋಗ್ಯ ಯೋಜನೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮುಂದೆ ಓದಿ ...
  • News18 Kannada
  • 5-MIN READ
  • Last Updated :
  • Karnataka, India
  • Share this:

ಬೆಂಗಳೂರು: ಕರ್ನಾಟಕ ಬಜೆಟ್‌ನಲ್ಲಿ ಈ ಬಾರಿ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಆರೋಗ್ಯ ಕ್ಷೇತ್ರಕ್ಕೆ (Health Sector) ಬೂಸ್ಟರ್ ಡೋಸ್ ಕೊಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ (Uttara Kannada) ಜನರ ಬಹು ದಿನಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ (multi-speciality hospital) ಈ ಬಾರಿ ಬಜೆಟ್‌ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. 'ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ' ಎಂಬ ಧೈಯದೊಂದಿಗೆ ಹಲವು ಆರೋಗ್ಯ ಯೋಜನೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇನ್ನು 'ಆಯುಷ್ಮಾನ್ ಭಾರತ್’ (Ayushman Bharat) ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಅಂತ ಬಸವರಾಜ್ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ.


ಉತ್ತರ ಕನ್ನಡದ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ


ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಅಂತ ಜಿಲ್ಲೆಯ ಜನರು ಬಹಳ ದಿನಗಳಿಂದ ನಿರೀಕ್ಷೆ ಮಾಡಿದ್ದರು. ಇದಕ್ಕಾಗಿ ಹಲವು ಹೋರಾಟಗಳೂ ನಡೆದಿತ್ತು. ಇದೀಗ ಕುಮಟಾದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಹಾಗೆಯೇ ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಅಟಲ್ ಬಿಹ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.


ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ


'ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ' ಎಂಬ ಧೈಯದೊಂದಿಗೆ ಆರೋಗ್ಯ ಸೇವೆ ವಿಸ್ತರಿಸುವುದಾಗಿ ಸಿಎಂ ಘೋಷಿಸಿದ್ದಾರೆ. 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ 53 ಸಮುದಾಯ ಆರೋಗ್ಯ ಕೇಂದ್ರಗಳು, 26 ತಾಲ್ಲೂಕು ಆಸ್ಪತ್ರೆ ಹಾಗೂ ಒಂದು ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸಿ, ಲೋಕಾರ್ಪಣೆ ಮಾಡಲಾಗಿದ್ದು, ಉಳಿದ ಕಾಮಗಾರಿಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿವೆ. ಇದಕ್ಕಾಗಿ ಒಟ್ಟು 781 ಕೋಟಿ ರೂ. ಗಳನ್ನು ಒದಗಿಸಲಾಗಿದೆ. ರಾಜ್ಯದ 45 ತಾಲ್ಲೂಕು ಆಸ್ಪತ್ರೆಗಳನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಮ್ಯಾಪಿಂಗ್‌ ಮಾಡುವ ಮೂಲಕ ಸ್ಥಳೀಯವಾಗಿ ಹೃದ್ರೋಗ ಚಿಕಿತ್ಸೆ ಒದಗಿಸಲು ಕ್ರಮ ವಹಿಸಿದ್ದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.


ಇದನ್ನೂ ಓದಿ: Karnataka Budget 2023-24 Live: ಸರ್ಕಾರಿ ಉದ್ಯೋಗಿಗಳ ಆಸೆಗೆ ತಣ್ಣೀರೆರಚಿದ ಬಜೆಟ್​, 7ನೇ ವೇತನ ಆಯೋಗದ ಬಗ್ಗೆ ಸಿಎಂ ಮೌನ


ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?


  • ತಾಲ್ಲೂಕು ಆಸ್ಪತ್ರೆಗಳಿಲ್ಲದ ಖಾನಾಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುಹಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಕೆ.

  • PM-ABHIM ಅಡಿಯಲ್ಲಿ ತೃತೀಯ ಹಂತದ ಆರೈಕೆಯನ್ನು ಒದಗಿಸಲು ಕೋಲಾರ, ಬಾಗಲಕೋಟೆ, ಯಾದಗಿರಿ, ಗದಗ, ಚಿಕ್ಕಮಗಳೂರು, ರಾಮನಗರ, ವಿಜಯನಗರ ಮತ್ತು ದೊಡ್ಡಬಳ್ಳಾಪುರ, ಆಸ್ಪತ್ರೆಗಳಲ್ಲಿ 50 ಹಾಸಿಗೆಯ ಕ್ರಿಟಿಕಲ್ ಕೇರ್ ಬ್ಲಾಕ್ ಗಳನ್ನು ಹಾಗೂ ತುಮಕೂರು ಮತ್ತು ಬೆಂಗಳೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್ ಗಳ ಸ್ಥಾಪನೆ..

  • ಗರ್ಭಿಣಿಯರಿಗೆ, ತಾಯಂದಿರಿಗೆ ಮತ್ತು ನವಜಾತ ಶಿಶುಗಳಿಗೆ ಉತ್ತಮ ಗುಣಮಟ್ಟದ ಆರೈಕೆಯನ್ನು ನೀಡುವ ದೃಷ್ಟಿಯಿಂದ ರಾಜ್ಯದಲ್ಲಿ 10 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು 165 ಕೋಟಿ

  • ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಹೊಸದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸ್ಥಾಪನೆ.

  • ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಲ್ಲಿ ಮತ್ತು ಸಂತಾನೋತ್ಪತ್ತಿ ವಯಸ್ಸಿನ (15-49 ವರ್ಷಗಳು) ಮಹಿಳೆಯರಲ್ಲಿ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ನಿವಾರಿಸಲು ಉದ್ದೇಶಿತ ಪರೀಕ್ಷೆ, ಚಿಕಿತ್ಸೆ, ಜನಜಾಗೃತಿ ಹಾಗೂ ತರಬೇತಿಗೆ 100 ಕೋಟಿ ರೂಪಾಯಿ ಮೀಸಲು

  • 'ಮನೆ ಮನೆಗೆ ಆರೋಗ್ಯ' ಎಂಬ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಗ್ರಾಮೀಣ ಜನತೆಗೆ 2023-24ನೇ ಸಾಲಿನಲ್ಲಿ ಎರಡು ಬಾರಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಆಯೋಜನೆ

  • ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಔಷಧಿಗಳನ್ನು ಒದಗಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆಯನ್ನು ರಾಜ್ಯಾದ್ಯಂತ ಇನ್ನಷ್ಟು ಹೆಚ್ಚಳ.

  • ಜನಸಾಮಾನ್ಯರ ಮೆದುಳಿನ ಆರೋಗ್ಯ ಕಾಪಾಡಲು ಮತ್ತು ಅದರ ಬಗ್ಗೆ ಅರಿವು ಮೂಡಿಸಲು ನಿಮ್ಹಾನ್ಸ್ ಸಹಯೋಗದೊಂದಿಗೆ ಕರ್ನಾಟಕ ಮೆದುಳು ಆರೋಗ್ಯ ಯೋಜನೆಯನ್ನು 25 ಕೋಟಿ ರೂ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಣೆ

  • ಎಲ್ಲಾ ಜಿಲ್ಲೆಗಳಲ್ಲಿ Hand Held X-ray ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ ಸಮುದಾಯ ಆಧಾರಿತ ತಪಾಸಣೆ ಚಟುವಟಿಕೆ ನಡೆಸಲು 12.50 ಕೋಟಿ ರೂ. ಪ್ರಸ್ತಾಪ





  • ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಚ್ಚಲು 'ಜೀವಸುಧೆ' ಎಂಬ ವ್ಯಾಪಕ ತಪಾಸಣಾ (Testing and Screening) 320 ರಾಜ್ಯಾದ್ಯಂತ ಆಯೋಜನೆ

  • ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ

  • ಹಿಂದಿನ ಆಯವ್ಯಯದಲ್ಲಿ ಘೋಷಿಸಿದಂತೆ ಉಚಿತ ಡಯಾಲಿಸಿಸ್‌ ಸೇವೆಯನ್ನು 30,000 ಡಯಾಲಿಸಿಸ್ ಸೈಕಲ್ ಗಳಿಂದ 60,000 ಸೈಕಲ್ ಗಳಿಗೆ ಹೆಚ್ಚಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 1 ಲಕ್ಷ ಡಯಾಲಿಸಿಸ್ ಸೈಕಲ್ ಗಳಿಗೆ ಹೆಚ್ಚಳ.

  • ರಾಜ್ಯದ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆರಿಗೆಯಾದ ತಾಯಂದಿರು ಮತ್ತು ನವಜಾತ ಶಿಶುಗಳಿಗೆ ಸುರಕ್ಷಿತವಾಗಿ ಮನೆಗೆ ತಲುಪಿಸಲು ಸಾರಿಗೆ ಸೌಲಭ್ಯ ಕಲ್ಪಿಸಲು 12.5 ಕೋಟಿ ರೂ. ವೆಚ್ಚದಲ್ಲಿ ಹೊಸ 'ನಗು ಮಗು' ವಾಹನಗಳನ್ನು ಒದಗಿಸಲಾಗುವುದು.

  • ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಹಾಗೂ ಸ್ಥಳೀಯವಾಗಿಯೇ ಪ್ರಯೋಗಾಲಯಗಳ ಸೇವೆಗಳನ್ನು ಒದಗಿಸಲು 129 ತಾಲ್ಲೂಕು ಪ್ರಯೋಗಾಲಯಗಳನ್ನು, ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಪ್ರಯೋಗಾಲಯಗಳನ್ನು ಹಾಗೂ ಬೆಂಗಳೂರಿನಲ್ಲಿ ರಾಜ್ಯ ರೆಫರಲ್ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.

  • ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಆರೋಗ್ಯ ಸುಧಾರಣೆಗಾಗಿ 720 ಕೋಟಿ ರೂ. ವೆಚ್ಚದಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು.

  • ಪ್ರಸಕ್ತ ವರ್ಷದಲ್ಲಿ 25 ತಾಲ್ಲೂಕುಗಳಲ್ಲಿ 28 ಹೊಸ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆ 345 ಕೋಟಿ ರೂ. ಗಳನ್ನು ಒದಗಿಸಲು ಕ್ರಮ.

Published by:Annappa Achari
First published: