Seema.RSeema.R
|
news18-kannada Updated:March 5, 2020, 1:16 PM IST
ಸಿಎಂ ಬಿಎಸ್ ಯಡಿಯೂರಪ್ಪ
ಬೆಂಗಳೂರು (ಮಾ.05): ಸಿಎಂ ಬಿಎಸ್ ಯಡಿಯೂರಪ್ಪ ಇಂದು 2020-21ನೇ ಆಯವ್ಯಯ ಮಂಡಿಸಿದ್ದು, ಉತ್ತರ ಕರ್ನಾಟಕ ಮಂದಿಯ ಬಹುನಿರೀಕ್ಷಿತ ಮಹದಾಯಿ ಯೋಜನೆ ಕಾಮಗಾರಿಗೆ ಚಾಲನೆ ನೀಡಿ 500 ಕೋಟಿ ಹಣವನ್ನು ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಇದರ ಜೊತೆ ಎತ್ತಿನಹೊಳೆ ಯೋಜನೆಗೆ 1500 ಕೋಟಿ ಒದಗಿಸುವುದಾಗಿ ತಿಳಿಸಿದ್ದಾರೆ.
ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ ಬೆನ್ನಲ್ಲೇ ಯೋಜನೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ಹಣ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆಯನ್ನು ತ್ವರಿತವಾಗಿ ಮುಂದುವರೆಸಲು ನಮ್ಮ ಸರ್ಕಾರವು ಬದ್ಧವಾಗಿರುತ್ತದೆ. ಈ ಹಿನ್ನೆಲೆ ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಅದರಂತೆ ನಾಲಾಗಳ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಅವರು ಅಭಿನಂದನೆ ಸಲ್ಲಿಸಿದರು.
ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರಕ್ಕೆ ನೀರಿನ ಒದಗಿಸುವ ಮಹತ್ವಕಾಂಕ್ಷಿ ಎತ್ತಿನ ಹೊಳೆಗ ಯೋಜನೆಗೆ 1500 ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದರು.
ಎತ್ತಿನ ಹೊಳೆ ಯೋಜನೆ ಮೂಲಕ ಈ ಪ್ರದೇಶಗಳಿಗೆ ನೀರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈಗಾಗಲೇ ನೀರು ಎತ್ತುವ ಕಾಮಗಾರಿ ಪೂರ್ಣಗೊಂಡಿದೆ, ಮುಂದಿನ ಮುಂಗಾರಿನಲ್ಲಿ ಪ್ರಯೋಗಿಕವಾಗಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪರ್ಯಾಯ ಜಲಾಶಯಕ್ಕೆ 20 ಕೋಟಿ:
ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿದ ಪರಿಣಾಮ ನೀರಿನ ಸಂಗ್ರಹಣೆಯಾಗದ ಹಿನ್ನೆಲೆ ಇದಕ್ಕೆ ಪರ್ಯಾಯವಾಗಿ ನಾಲೆ ಮೂಲಕ ನೀರು ಹರಿಸಲು ನಿರ್ಧರಿಸಲಾಗಿದೆ, ಇದಕ್ಕಾಗಿ ನವಲೆ ಹತ್ತಿರ ಸಮತೋಲನಾ ಜಲಾಶಯ ಯೋಜನೆ ನಿರ್ಮಿಸುವ ವರದಿ ತಯಾರಿಸಲು 20 ಕೋಟಿ ಅನುದಾನ ನೀಡುವುದಾಗಿ ತಿಳಿಸಿದರು.
ಇದನ್ನು ಓದಿ: Karnataka Budget Highlights - ಬಜೆಟ್ ಗಾತ್ರ 2.38 ಲಕ್ಷ ಕೋಟಿ; ಸಿದ್ದರಾಮಯ್ಯರ ಬಹುತೇಕ ಯೋಜನೆಗಳ ಮುಂದುವರಿಕೆ
ಏತ ನೀರಾವರಿಗೆ 5000 ಕೋಟಿ: ರಾಜ್ಯದ ವಿವಿಧ ಭಾಗಗಳಲ್ಲಿಏತನೀರಾವರಿ ಯೋಜನೆ ಅನುಷ್ಠಾನ ಗೊಳಿಸಲು 5000 ಕೋಟಿ ನೀಡಲಾಗುವುದು ಎಂದು ಯಡಿಯೂರಪ್ಪ ಅಧಿವೇಶನದಲ್ಲಿ ಬಜೆಟ್ ಮಂಡಿಸುವ ವೇಳೆ ತಿಳಿಸಿದರು.
First published:
March 5, 2020, 12:33 PM IST