ರಾಜ್ಯ ಉಪ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು ಜೆಡಿಎಸ್ ಪಾಲಿಗೆ ಜಿದ್ದಾ ಜಿದ್ದಿ ಕಣವಾಗಿದ್ದ ಕೆ.ಆರ್. ಪೇಟೆ ಹಾಗೂ ಯಶವಂತಪುರದಲ್ಲಿ ನಾಲ್ಕೂ ಸುತ್ತಿನ ಮತ ಎಣಿಕೆಯಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದ ಜೆಡಿಎಸ್ ಇದೀಗ ದಿಢೀರ್ ಹಿನ್ನಡೆ ಅನುಭವಿಸಿದ್ದು, ನೆಲೆ ಕಳೆದುಕೊಳ್ಳುವ ಭೀತಿಯಲ್ಲಿದೆ.
ರಾಜ್ಯದ 15 ಕ್ಷೇತ್ರಗಳ ಪೈಕಿ ಯಶವಂತಪುರ ಮತ್ತು ಮಂಡ್ಯದ ಕೆ.ಆರ್. ಪೇಟೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿತ್ತು. ಅಂಚೆ ಮತ ಸೇರಿದಂತೆ ಆರಂಭದಿಂದಲೂ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರು. ಹೀಗಾಗಿ ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಟಿ. ಜವರಾಯಿ ಗೌಡ ಹಾಗೂ ಕೆ.ಆರ್. ಪೇಟೆಯಲ್ಲಿ ಬಿ.ಎಲ್. ದೇವರಾಜ್ ಗೆಲುವು ಸಾಧಿಸುವುದು ಖಚಿತ ಎನ್ನಲಾಗುತ್ತಿತ್ತು. ಆದರೆ, ಇದೀಗ ಈ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಇನ್ನೂ ಮತ ಎಣಿಕೆ ನಡೆಯುತ್ತಿದ್ದು, ಒಂದು ವೇಳೆ ಈ ಎರಡೂ ಕ್ಷೇತ್ರದಲ್ಲಿ ಜೆಡಿಎಸ್ ಸೋಲನುಭವಿಸಿದರೆ ಚುನಾವಣೆಯಲ್ಲಿ ನೆಲೆ ಕಳೆದುಕೊಳ್ಳುವ ಭೀತಿ ಜೆಡಿಎಸ್ ಮುಂದಿದೆ. ಅಲ್ಲದೆ, ಮಂಡ್ಯದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ ಕೀರ್ತಿ ಸಿಎಂ ಬಿಎಸ್ವೈ ಪಾಲಾಗಲಿದೆ.
ಇದನ್ನೂ ಓದಿ : ರಾಜ್ಯ ಉಪ ಚುನಾವಣೆ ಮತ ಎಣಿಕೆ ಆರಂಭ; ಅಂಚೆ ಮತ, 10 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ