ಬೆಂಗಳೂರು (ಡಿ. 9): ಅನರ್ಹ ಶಾಸಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಮತ್ತು ಬಿಜೆಪಿ ಸರ್ಕಾರದ ಅಳಿವು, ಉಳಿವಿಗೆ ಕಾರಣವಾಗಿದ್ದ ಈ ಬಾರಿಯ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ನಿಟ್ಟುಸಿರು ಬಿಟ್ಟಿದೆ. ಈಗಾಗಲೇ ಒಟ್ಟು 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಯಲ್ಲಾಪುರದ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಗೆಲುವು ನಿಶ್ಚಿತವಾಗಿದೆ. 31 ಸಾವಿರ ಮತಗಳ ಅಂತರದಿಂದ ಶಿವರಾಮ್ ಹೆಬ್ಬಾರ್ ಗೆಲುವು ಸಾಧಿಸಿದ್ದಾರೆ.
ತೀವ್ರ ಕುತೂಹಲ ಮೂಡಿಸಿದ್ದ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶಿವರಾಮ್ ಹೆಬ್ಬಾರ್ ಭಾರೀ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರನ್ನು ಹಿಂದಿಕ್ಕಿ ಶಿವರಾಮ್ ಹೆಬ್ಬಾರ್ ಭಾರೀ ಅಂತರ ಕಾಯ್ದುಕೊಂಡಿದ್ದರು. ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಅವರು 80,440 ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದಾರೆ. ಸಮೀಪದ ಸ್ಪರ್ಧಿ ಕಾಂಗ್ರೆಸ್ ಪಕ್ಷದ ಭೀಮಣ್ಣ ನಾಯ್ಕ ಅವರನ್ನು 31,406 ಮತಗಳ ಅಂತರದಿಂದ ಸೋಲಿಸಿ ಮತ್ತೊಮ್ಮೆ ವಿಜಯದ ನಗೆ ಬೀರಿದ್ದಾರೆ
Karnataka ByElection Results 2019 Live: ರಾಜ್ಯ ಉಪ ಚುನಾವಣೆ ಮತ ಎಣಿಕೆ ಆರಂಭ; ಅಂಚೆ ಮತ, 10 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. 13 ಅನರ್ಹ ಶಾಸಕರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ಬೆಳಗ್ಗೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಖಚಿತ ಫಲಿತಾಂಶ ಹೊರಬೀಳಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ