Karnataka Bypoll Results: ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳು ಮಾತ್ರ ಕಾಂಗ್ರೆಸ್ ತೆಕ್ಕೆಗೆ?

ಅಥಣಿ, ಗೋಕಾಕ್, ಕಾಗವಾಡ, ರಾಣೆಬೆನ್ನೂರು, ಹಿರೇಕೆರೂರು, ಕೆಆರ್ ಪೇಟೆ, ಹೊಸಕೋಟೆ, ಯಲ್ಲಾಪುರ, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ ಮತ್ತು ಯಶವಂತಪುರ ಕ್ಷೇತ್ರಗಳು ಕಾಂಗ್ರೆಸ್ ಕೈ ತಪ್ಪಲಿವೆ.

news18
Updated:December 9, 2019, 10:52 AM IST
Karnataka Bypoll Results: ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳು ಮಾತ್ರ ಕಾಂಗ್ರೆಸ್ ತೆಕ್ಕೆಗೆ?
ಸಿದ್ದರಾಮಯ್ಯ
  • News18
  • Last Updated: December 9, 2019, 10:52 AM IST
  • Share this:
ಬೆಂಗಳೂರು(ಡಿ. 09): ರಾಜ್ಯ ಉಪಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಇರಾದೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಕೇವಲ ಎರಡರಲ್ಲಿ ಮಾತ್ರ ಸ್ಪಷ್ಟ ಮುನ್ನಡೆ ಸಿಕ್ಕಿದೆ. ಈ 15 ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 12ರಲ್ಲಿ ಗೆಲುವು ಸಾಧಿಸಿತ್ತು. ಈಗ 10 ಸ್ಥಾನಗಳನ್ನು ಕಳೆದುಕೊಳ್ಳುತ್ತಿದೆ. ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಖಾತ್ರಿಯಾದಂತಿದೆ.

ಹುಣಸೂರು ಕ್ಷೇತ್ರದಲ್ಲಿ ತ್ರಿಕೋನ ಹಣಾಹಣಿ ಮಧ್ಯೆ ಕಾಂಗ್ರೆಸ್​ನ ಹೆಚ್.ಪಿ. ಮಂಜುನಾಥ್ ಸ್ಪಷ್ಟ ಮುನ್ನಡೆ ಗಿಟ್ಟಿಸಿಕೊಂಡಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆ ಎರಡನೇ ಸ್ಥಾನಕ್ಕಾಗಿ ಪೈಪೋಟಿ ನಡೆದಿದೆ ಅಷ್ಟೇ. ಜೆಡಿಎಸ್​ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ಕ್ಷೇತ್ರದ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಎರಡನೇ ಸ್ಥಾನದಲ್ಲಿದ್ದಾರೆ.

 ಇದನ್ನೂ ಓದಿ: Karnataka Bypolls Results: ಉಪ ಚುನಾವಣಾ ಫಲಿತಾಂಶ; ನೆಲೆ ಕಳೆದುಕೊಳ್ಳುವ ಭೀತಿಯಲ್ಲಿ ಜೆಡಿಎಸ್​, ಕೆ.ಆರ್. ಪೇಟೆ ಕೈ ತಪ್ಪುವ ಸಾಧ್ಯತೆ..?

ಶಿವಾಜಿನಗರ ಕ್ಷೇತ್ರದಲ್ಲಿ ರೋಷನ್ ಬೇಗ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ನ ರಿಜ್ವಾನ್ ಅರ್ಷದ್ ಅವರು ದೊಡ್ಡ ಮುನ್ನಡೆ ಹೊಂದಿದ್ದಾರೆ. ಇಲ್ಲಿ ಕಾಂಗ್ರೆಸ್ ತನ್ನ ಸ್ಥಾನ ಉಳಿಸಿಕೊಳ್ಳುವತ್ತ ಸಾಗಿದೆ. ಬಿಜೆಪಿಯ ಕೆ. ಸರವಣ ಅವರು ಎರಡನೇ ಸ್ಥಾನದಲ್ಲಿದ್ಧಾರೆ. ಉಳಿದ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುವುದು ಸ್ಪಷ್ಟವಾಗಿದೆ.

ಇದೇ ವೇಳೆ, ಅಥಣಿ, ಗೋಕಾಕ್, ಕಾಗವಾಡ, ರಾಣೆಬೆನ್ನೂರು, ಹಿರೇಕೆರೂರು, ಕೆಆರ್ ಪೇಟೆ, ಹೊಸಕೋಟೆ, ಯಲ್ಲಾಪುರ, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ ಮತ್ತು ಯಶವಂತಪುರ ಕ್ಷೇತ್ರಗಳು ಕಾಂಗ್ರೆಸ್ ಕೈ ತಪ್ಪಲಿವೆ.

ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಹೊಸಕೋಟೆ ಮತ್ತು ಕೆಆರ್ ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ 3ನೇ ಸ್ಥಾನಕ್ಕೆ ದೂಡಲ್ಪಡುತ್ತಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published:December 9, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ