HOME » NEWS » State » KARNATAKA BYPOLLS BJP LEADER CT RAVI REACTION OVER MASKI BYPOLLS AND TAMIL NADU ASSEMBLY ELECTION 2021 SCT

Karnataka Bypolls: ಮಸ್ಕಿಯಲ್ಲಿ ಪ್ರತಾಪ ಗೌಡ ಪಾಟೀಲ್​ಗೆ ಬಿಜೆಪಿ ಟಿಕೆಟ್; ಸುಳಿವು ನೀಡಿದ ಸಿ.ಟಿ. ರವಿ

Karnataka By-Election: ಪ್ರತಾಪ್ ಗೌಡ ಪಾಟೀಲ್ 2 ವರ್ಷ ಅಜ್ಞಾತವಾಸದಲ್ಲಿದ್ದವರು. ಅವರಿಗೆ ಸ್ವಾಭಾವಿಕವಾಗಿ ನ್ಯಾಯ ಕೊಡಬೇಕು ಎನ್ನುವ ಮೂಲಕ ಪರೋಕ್ಷವಾಗಿ ಪ್ರತಾಪ್ ಗೌಡ ಪಾಟೀಲ್ ಗೆ ಮಸ್ಕಿಯಿಂದ ಉಪಚುನಾವಣಾ ಟಿಕೆಟ್ ನೀಡುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸುಳಿವು ಕೊಟ್ಟಿದ್ದಾರೆ.

news18-kannada
Updated:March 20, 2021, 1:08 PM IST
Karnataka Bypolls: ಮಸ್ಕಿಯಲ್ಲಿ ಪ್ರತಾಪ ಗೌಡ ಪಾಟೀಲ್​ಗೆ ಬಿಜೆಪಿ ಟಿಕೆಟ್; ಸುಳಿವು ನೀಡಿದ ಸಿ.ಟಿ. ರವಿ
ಸಿ ಟಿ ರವಿ
  • Share this:
ಬೆಂಗಳೂರು (ಮಾ. 20): ಮಸ್ಕಿಯಲ್ಲಿ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಅವರು ಎರಡು ವರ್ಷಗಳ ಕಾಲ ಅಜ್ಞಾತವಾಸದಲ್ಲಿದ್ದವರು. ಅವರಿಗೆ ಸ್ವಾಭಾವಿಕವಾಗಿ ನ್ಯಾಯ ಕೊಡಬೇಕು ಎನ್ನುವ ಮೂಲಕ ಪರೋಕ್ಷವಾಗಿ ಪ್ರತಾಪ್ ಗೌಡ ಪಾಟೀಲ್ ಗೆ ಮಸ್ಕಿಯಿಂದ ಉಪಚುನಾವಣಾ ಟಿಕೆಟ್ ನೀಡುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸುಳಿವು ಕೊಟ್ಟಿದ್ದಾರೆ.

ಬಿಜೆಪಿ ಕೋರ್ ಕಮಿಟಿ ಸಭೆ ನಂತರ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಕೋರ್ ಕಮಿಟಿ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆಯಾಯಿತು. ಪ್ರಚಲಿತ ರಾಜಕಾರಣದ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಏಪ್ರಿಲ್ 6ಕ್ಕೆ ಬಿಜೆಪಿ ಸ್ಥಾಪನೆಯಾಗಿ 41 ವರ್ಷವಾಗಲಿದೆ. ಹೀಗಾಗಿ ಕಾರ್ಯಕ್ರಮ ರೂಪಿಸುವ ಸಂಬಂಧ ಚರ್ಚೆ‌ ನಡೆದಿದೆ. ಉಪ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗಿದೆ. ಮತ್ತೊಮ್ಮೆ ರಾಜ್ಯಾಧ್ಯಕ್ಷರು ಸ್ಥಳೀಯ ಮಟ್ಟದ ಮುಖಂಡರ ಚರ್ಚಿಸಿ ಅವರ ಅಭಿಪ್ರಾಯ ಪಡೆಯಲಿದ್ದಾರೆ. ಅಂತಿಮವಾಗಿ ಅದನ್ನು ರಾಜ್ಯಾಧ್ಯಕ್ಷರು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿ ಕೊಡುತ್ತಾರೆ. ಆ ನಂತರ ಕೇಂದ್ರ ಚುನಾವಣಾ ಸಮಿತಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಹೇಳಿಕೆ ನೀಡಿದ್ದು, ತಮಿಳುನಾಡು ಚುನಾವಣೆ ರಂಗೇರಿದೆ. ಕೆ.ಅಣ್ಣಾಮಲೈ, ಖುಷ್ಬು ಸೇರಿದಂತೆ ಅನೇಕರು ಸ್ಪರ್ಧೆ ಮಾಡುತ್ತಿದ್ದಾರೆ. ಎಐಎಡಿಎಂಕೆ, ಡಿಎಂಕೆ ಸೇರಿದಂತೆ ಹಲವು ಪಕ್ಷಗಳಿವೆ. ಕಾಂಗ್ರೆಸ್ಸಿಗೆ ಹೋಲಿಸಿದರೆ ನಮ್ಮ ಪಕ್ಷ ಉತ್ತಮವಾಗಿದೆ. 234 ಕ್ಷೇತ್ರದಲ್ಲಿ ಬಿಜೆಪಿ ಸೇರಿದಂತೆ ಮೈತ್ರಿಯಲ್ಲಿ ಅಭ್ಯರ್ಥಿಗಳನ್ನ ಹಾಕಲಾಗಿದೆ. ಇದರ ಲಾಭ ಬಿಜೆಪಿಗೆ ಆಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹೋರಾಟ ನಡೆಸುತ್ತಿದ್ದೇವೆ. 2016ರಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದುಬಿಟ್ಟೆವು ಅಂತ ಅಂದುಕೊಂಡಿದ್ದರು. ಈಗಲೂ ಅದೇ ಆಶಯದಲ್ಲಿದ್ದಾರೆ. ಆದರೆ, ಅವರು ಅಧಿಕಾರಕ್ಕೆ ಬರೋದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿಯಿಂದ ಸುರೇಶ್ ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿ.ಟಿ. ರವಿ, ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಆದರೆ ಅಂತಿಮವಾಗಿ ಈ ಬಗ್ಗೆ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇವೆ. ಅವರೇ ಈ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದಿದ್ದಾರೆ.
Published by: Sushma Chakre
First published: March 20, 2021, 1:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories