Karnataka by election 2019: ಉಪ ಚುನಾವಣಾ ಕಾವು, ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ; ಚನ್ನರಾಯಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿ

Karnataka By Elections Latest news: ರಾಜ್ಯದಲ್ಲಿ ಇಂದು 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಪೈಕಿ ಕೆ.ಆರ್. ಪೇಟೆ ಮತ್ತು ಹುಣಸೂರು ಕ್ಷೇತ್ರ ಬಿಜೆಪಿ-ಜೆಡಿಎಸ್ ನಡುವೆ ಪ್ರತಿಷ್ಠೆಯ ಕಣವಾಗಿ ಬದಲಾಗಿದೆ. ಈ ಕ್ಷೇತ್ರಗಳ ಮತದಾರರಿಗೆ ಹಣ ಹಂಚಲು ಬಿಜೆಪಿ ಹಾಸನದ ಮೂಲಕ ಹಣವನ್ನು ಕ್ಷೇತ್ರಗಳಿಗೆ ಸಾಗಿಸುತ್ತಿದೆ ಎಂಬುದು ಜೆಡಿಎಸ್ ಆರೋಪ.

news18-kannada
Updated:December 5, 2019, 8:29 AM IST
Karnataka by election 2019: ಉಪ ಚುನಾವಣಾ ಕಾವು, ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ; ಚನ್ನರಾಯಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿ
ಸಾಂದರ್ಭಿಕ ಚಿತ್ರ.
  • Share this:
ಹಾಸನ (ಡಿಸೆಂಬರ್ 05); ನಿನ್ನೆ ರಾತ್ರಿ ಚನ್ನರಾಯಪಟ್ಟಣ ತಾಲೂಕಿನ ನಿಂಬೇಹಳ್ಳಿ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಹಿನ್ನೆಲೆ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ತಾಲೂಕಿನಾದ್ಯಂತ ಇಂದು ರಾತ್ರಿ 9.30ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಇಂದು 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಪೈಕಿ ಕೆ.ಆರ್. ಪೇಟೆ ಮತ್ತು ಹುಣಸೂರು ಕ್ಷೇತ್ರ ಬಿಜೆಪಿ-ಜೆಡಿಎಸ್ ನಡುವೆ ಪ್ರತಿಷ್ಠೆಯ ಕಣವಾಗಿ ಬದಲಾಗಿದೆ. ಈ ಕ್ಷೇತ್ರಗಳ ಮತದಾರರಿಗೆ ಹಣ ಹಂಚಲು ಬಿಜೆಪಿ ಹಾಸನದ ಮೂಲಕ ಹಣವನ್ನು ಕ್ಷೇತ್ರಗಳಿಗೆ ಸಾಗಿಸುತ್ತಿದೆ ಎಂಬುದು ಜೆಡಿಎಸ್ ಆರೋಪ.

ಇದೇ ಕಾರಣಕ್ಕೆ ಮಂಗಳವಾರ ರಾತ್ರಿಯೂ ಸಹ ಚನ್ನರಾಯಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ದೊಡ್ಡ ಮಟ್ಟದ ಗಲಾಟೆ ನಡೆದಿತ್ತು. ಇದರಲ್ಲಿ ಎರಡೂ ಪಕ್ಷದ ಕಾರ್ಯಕರ್ತರಿಗೆ ಗಾಯಗಳಾಗಿದ್ದವು. ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರ ಡಾ. ಸೂರಜ್ ರೇವಣ್ಣ ಸೇರಿದಂತೆ ಐವರ ವಿರುದ್ಧ ಚನ್ನರಾಯಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸೆಕ್ಷನ್​ 144 ವಿಧಿಸಲಾಗಿರುವ ಪ್ರತಿ.


ಪೊಲೀಸ್ ಇಲಾಖೆಯ ಈ ನಡೆಯ ವಿರುದ್ಧ ಸಚಿವ ಹೆಚ್.ಡಿ. ರೇವಣ್ಣ ಕಿಡಿಕಾರಿದ್ದರು. ಆದರೆ, ಚುನಾವಣಾ ಹಿಂದಿನ ದಿನವಾದ ನಿನ್ನೆ ರಾತ್ರಿಯೂ ಸಹ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಚನ್ನರಾಯಪಟ್ಟಣದಲ್ಲಿ ಮತ್ತೆ ಮಾರಾಮಾರಿ ನಡೆದಿದೆ. ಹೀಗಾಗಿ ಶಾಂತಿಯುತ ಮತದಾನಕ್ಕಾಗಿ ಜಿಲ್ಲಾಧಿಕಾರಿ ಆರ್. ಗಿರೀಶ್ ತಾಲೂಕಿನಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ : ಎಲ್ಲಾ 15 ಕ್ಷೇತ್ರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವಂತೆ ಉಸ್ತುವಾರಿಗಳಿಗೆ ಸಿಎಂ ಬಿಎಸ್​ವೈ ಖಡಕ್ ಸೂಚನೆ
First published:December 5, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading