ಕರ್ನಾಟಕ ಉಪಚುನಾವಣೆ; 15 ಕ್ಷೇತ್ರಗಳಿಗೆ ಮತದಾನ; 165 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Karnataka Assembly Bypolls: ಅಥಣಿ, ಕಾಗವಾಡ, ಗೋಕಾಕ್‌, ಯಲ್ಲಾಪುರ, ಹಿರೇಕೆರೂರು, ರಾಣೆ ಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮಿಲೇಔಟ್‌, ಶಿವಾಜಿನಗರ, ಹೊಸಕೋಟೆ, ಕೆ.ಆರ್‌.ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ.

G Hareeshkumar | news18-kannada
Updated:December 5, 2019, 7:04 AM IST
ಕರ್ನಾಟಕ ಉಪಚುನಾವಣೆ; 15 ಕ್ಷೇತ್ರಗಳಿಗೆ ಮತದಾನ; 165 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ
  • Share this:
ಬೆಂಗಳೂರು(ಡಿ.05) : ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದ್ದು, ರಾಜ್ಯ ಚುನಾವಣೆ ಆಯೋಗವೂ ಮತಗಟ್ಟೆ ಕೇಂದ್ರಗಳಲ್ಲಿ ಸಕಲ ಸಿದ್ದತೆ ಮಾಡಿಕೊಂಡಿದೆ. ಇಂದಿನ ಚುನಾವಣಾ ಅಖಾಡದಲ್ಲಿ ಒಟ್ಟು 165 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಅಥಣಿ, ಕಾಗವಾಡ, ಗೋಕಾಕ್‌, ಯಲ್ಲಾಪುರ, ಹಿರೇಕೆರೂರು, ರಾಣೇಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್‌, ಶಿವಾಜಿನಗರ, ಹೊಸಕೋಟೆ, ಕೆ.ಆರ್‌.ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಇಂದು ಮತದಾನವಾಗಲಿದೆ. ರಾಜ್ಯ ಸರ್ಕಾರವೂ ಶಾಲಾ-ಕಾಲೇಜು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದು ಮತದಾನ ಮಾಡುವ ಸಾಧ್ಯತೆ ಇದೆ.

ಚುಣಾವಣಾ ಅಖಾಡದಲ್ಲಿ 165 ಅಭ್ಯರ್ಥಿಗಳು 

ಬಿಜೆಪಿ -15, ಕಾಂಗ್ರೆಸ್‌ -15, ಜೆಡಿಎಸ್‌ -12, ಎನ್‌ಸಿಪಿ - 1, ಬಿಎಸ್‌ಪಿ 2, ನೋಂದಾಯಿತ ಪ್ರಾದೇಶಿಕ ಪಕ್ಷ - 45, ಪಕ್ಷೇತರ - 75 ಅಭ್ಯರ್ಥಿಗಳು ಸೇರಿದಂತೆ ಒಟ್ಟಾರೆ 165 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಹೊಸ ಮತದಾರರು 79714

ಉಪಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 37,82,681 ಮತದಾರರಿದ್ದು, ಈ ಪೈಕಿ 19,255,29-ಪುರುಷರು, 18,52,027-ಮಹಿಳೆಯರು, 414-ತೃತೀಯ ಲಿಂಗಿಗಳು, 79714 - ಹೊಸ ಮತದಾರರು ಕಣದಲ್ಲಿರುವ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ. ಮತದಾನಕ್ಕಾಗಿ ಒಟ್ಟು 4185 ಮತದಾನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.

ಇದನ್ನೂ ಓದಿ :  ಉಪ ಚುನಾವಣೆ: ತಪ್ಪದೇ ಮತದಾನ ಮಾಡುವಂತೆ 15 ಕ್ಷೇತ್ರಗಳ ಮತದಾರರಿಗೆ ಸಿಎಂ ಮನವಿಎಲ್ಲ 15 ಕ್ಷೇತ್ರಗಳ ಮತಗಟ್ಟೆಗಳಲ್ಲಿ ನಾಳೆ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಮತದಾನ ಕೊನೆಗೊಳ್ಳಲಿದೆ. ಡಿಸೆಂಬರ್​ 9 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.
First published:December 5, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading