ವಿಜಯನಗರ ಜಿಲ್ಲೆಗೆ 6 ತಾಲೂಕು ಸೇರ್ಪಡೆ; ಶಿವಮೊಗ್ಗ ವಿಮಾನ ನಿಲ್ದಾಣದ ಅನುದಾನ 384 ಕೋಟಿ ರೂ.ಗೆ ಏರಿಕೆ
ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಅಸ್ತಿತ್ವಕ್ಕೆ ಬರಲಿದೆ. ವಿಜಯನಗರಕ್ಕೆ 6 ತಾಲೂಕುಗಳನ್ನು ಸೇರ್ಪಡೆ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಾಗೇ, ಶಿವಮೊಗ್ಗ ವಿಮಾನ ನಿಲ್ದಾಣದ ಅನುಮೋದನೆಯನ್ನು 384 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ.
news18-kannada Updated:November 27, 2020, 1:23 PM IST

ಸಚಿವ ಜೆಸಿ ಮಾಧುಸ್ವಾಮಿ
- News18 Kannada
- Last Updated: November 27, 2020, 1:23 PM IST
ಬೆಂಗಳೂರು (ನ. 27): ವಿಜಯನಗರವನ್ನು ಬಳ್ಳಾರಿಯಿಂದ ವಿಭಜಿಸಿ, ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂಬ ಬೇಡಿಕೆಗೆ ಕೊನೆಗೂ ಒಪ್ಪಿಗೆ ಸಿಕ್ಕಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಇಂದು ಚರ್ಚೆ ನಡೆಸಿ, ಅನುಮೋದನೆ ಪಡೆಯಲಾಗಿದೆ. ಈ ಮೂಲಕ ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಅಸ್ತಿತ್ವಕ್ಕೆ ಬರಲಿದೆ ಎಂದು ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಘೋಷಿಸಿದ್ದಾರೆ. ನೂತನ ಜಿಲ್ಲೆಯಾದ ವಿಜಯನಗರಕ್ಕೆ 6 ತಾಲೂಕುಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರ ಜೊತೆಗೆ ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಈ ಮೊದಲು ನಿಗದಿಯಾಗಿದ್ದಕ್ಕಿಂತ ಹೆಚ್ಚುವರಿಯಾಗಿ 160 ಕೋಟಿ ರೂ.ಗಳನ್ನು ಘೋಷಿಸಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲಾಗುವುದು. ಹರಪ್ಪನಹಳ್ಳಿ, ಹೂವಿನ ಹಡಗಲಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿಯನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲಾಗುವುದು ಎಂದಿದ್ದಾರೆ. ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಮಲೆನಾಡಿಗರ ಬಹುಕಾಲದ ಬೇಡಿಕೆಯಾದ ವಿಮಾನ ನಿಲ್ದಾಣದ ಕಾಮಗಾರಿಯನ್ನು ಶಿವಮೊಗ್ಗದಲ್ಲಿ ಆರಂಭಿಸಲಾಗಿದೆ. ಈ ಶಿವಮೊಗ್ಗ ವಿಮಾನ ನಿಲ್ದಾಣ ಅಭಿವೃದ್ಧಿಗೆ 220 ಕೋಟಿ ರೂ. ಅನುಮೋದನೆ ನೀಡಲಾಗಿತ್ತು. ಆದರೆ, ಆ ಮೊತ್ತವನ್ನು ಸಚಿವ ಸಂಪುಟದ ಅನುಮತಿ ಪಡೆದು ಹೆಚ್ಚಿಸಲಾಗಿದ್ದು, ಹೆಚ್ಚುವರಿಯಾಗಿ 164 ಕೋಟಿ ರೂ. ನೀಡುವ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಒಟ್ಟು 384 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತಕ್ಕೆ ನೀಡಲು ಅನುಮೋದನೆ ನೀಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಘೋಷಿಸಿದ್ದಾರೆ.
ಇದನ್ನೂ ಓದಿ: ಸಿಎಂ ವಿರುದ್ಧ ಹೆಚ್ಚಿದ ಮುನಿಸು; ವರಿಷ್ಠರೂ ಕೆಂಗಣ್ಣು; ಇಕ್ಕಟ್ಟಿನಲ್ಲಿ ಯಡಿಯೂರಪ್ಪ
ಯಡಿಯೂರಪ್ಪ ಈಗಲೂ ಲಿಂಗಾಯತರ ಪ್ರಶ್ನಾತೀತ ನಾಯಕ. ಆದರೆ, ಅವರನ್ನು ಒಂದು ಜಾತಿಗೆ ಸಿಮೀತ ಮಾಡಬೇಡಿ. ಲಿಂಗಾಯತರನ್ನು ಒಬಿಸಿ ಮಾಡಬೇಕು ಎಂದು ಹೇಳಲಾಗಿತ್ತು. ಇದರಲ್ಲಿ 16 ಉಪಜಾತಿಗಳು ಇವೆ. ಇದರಲ್ಲಿ ಇನ್ನೂ ಮೇಜರ್ ಕಮ್ಯುನಿಟಿ ಇದ್ದಾರೆ. ಜೊತೆಗೆ ಒಕ್ಕಲಿಗರಲ್ಲಿ ಕುಂಚಿಟಿಗರು, ಸರ್ಪ ಒಕ್ಕಲಿಗರನ್ನು ಕೂಡ ಒಬಿಸಿಗೆ ಸೇರಿಸಬೇಕು ಅಂತ ಇದೆ. ಅದೆಲ್ಲವನ್ನೂ ಪರಿಶೀಲನೆ ಮಾಡಬೇಕು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
1994ರಲ್ಲಿ ಲಿಂಗಾಯತ ಸಮುದಾಯವನ್ನು ಓಬಿಸಿಗೆ ಸೇರಿಸಲು ಮನವಿ ಕೊಟ್ಟಿದ್ದರು. ಒಕ್ಕಲಿಗರಲ್ಲೂ ಕುಂಚಿಟಿಗ ಒಕ್ಕಲಿಗರು ಬಿಟ್ಟು ಹೋಗಿದ್ದಾರೆ. ಹೀಗಾಗಿ ಎಲ್ಲರನ್ನೂ ಸೇರಿಸಿ ಒಂದು ನಿರ್ಧಾರ ಕೈಗೊಳ್ಳಬೇಕಿದೆ. ಹೀಗಾಗಿ, ಆ ಬಗ್ಗೆ ಇವತ್ತು ಚರ್ಚಿಸುವುದು ಬೇಡ ಅಂತ ನಿರ್ಧಾರ ಮಾಡಿದ್ದೇವೆ. ಲಿಂಗಾಯತ 16 ಉಪಜಾತಿಗಳು ಈಗಾಗಲೇ ಒಬಿಸಿ ಅಡಿಯಲ್ಲಿ ಬಂದಿವೆ. ಕುಂಚಿಟಿಗರು ಚಿಕ್ಕನಾಯಕನಹಳ್ಳಿ ಭಾಗದಲ್ಲಿ ಮೇಜರ್ ಅವರನ್ನು ಒಬಿಸಿಗೆ ಸೇರಿಸಬೇಕು ಅಂತ ನಾನು ಹೇಳಿದೆ. ಲಿಂಗಾಯತರು ಮತ್ತು ಒಕ್ಕಲಿಗರನ್ನ ಹಿಂದುಳಿದ ವಗ೯ಕ್ಕೆ ಮತ್ತು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದರಿಂದ ಕನ್ನಡಿಗರಿಗೆ ಕೇಂದ್ರದಿಂದ ಹೆಚ್ಚಿನ ಉದ್ಯೋಗ ಅವಕಾಶಗಳು ಸಿಕ್ಕುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ ವೈದ್ಯಕೀಯ ಮತ್ತು ಐಐಟಿಗಳಲ್ಲಿ ಕನ್ನಡದ ವಿದ್ಯಾರ್ಥಿಗಳಿಗೆ ಅವಕಾಶಗಳು ಹೆಚ್ಚು ಸೀಟುಗಳು ದೊರಕುತ್ತವೆ. ರೈಲ್ವೆ, ಬ್ಯಾಂಕ್ , ನಾಗರಿಕ ಸೇವೆಗಳು, ಅರಸೇನಾ ಸೇವೆಯಲ್ಲಿಯೂ ಕನ್ನಡಿಗರಿಗೆ ಅವಕಾಶಗಳು ಹೆಚ್ಚುತ್ತವೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ: ಹೈಕಮಾಂಡ್ ಮೂಲಕ ಯೋಗೇಶ್ವರ್ಗೆ ಮಂತ್ರಿ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಸರ್ಕಸ್ಇದರ ಜೊತೆಗೆ, ಧಾರವಾಡ ರೈಲ್ವೆ ಸ್ಟೇಷನ್ ಯಾರ್ಡ್ ನಲ್ಲಿ 16.48 ಕೋಟಿ ಅಂದಾಜು ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಎಸ್ ಸಿ/ ಎಸ್ಟಿ ಬ್ಯಾಕ್ಲಾಗ್ ಹುದ್ದೆ ಭರ್ತಿಗೆ ಸಚಿವ ಸಂಪುಟ ಉಪಸಮಿತಿ ಪುನಾರಚನೆ ಮಾಡಲಾಗಿದೆ. ಶ್ರೀರಾಮುಲು ಅವರಿಗೆ ಉಪಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಗೆ ಕಟ್ಟಡಗಳ ನಿರ್ಮಾಣಕ್ಕೆ 42.93 ಕೋಟಿ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ 98 ವಸತಿ ಯೋಜನೆಗಳನ್ನು 2,275 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಅನುಮತಿ ನೀಡಲಾಗಿದೆ. ಕರ್ನಾಟಕ ಗೆಜೆಟೆಡ್ ಪ್ರೊಭೆಷನರಿ ನೇಮಕಾತಿ 1:15 ಅನುಪಾತ ನಿಗದಿ ಪಡಿಸಿ ನಿಯಮಾವಳಿ ತಿದ್ದುಪಡಿ ಮಾಡಲಾಗಿದೆ. ಜಿಂದಾಲ್ ಅವರಿಗೆ 2,000 ಎಕರೆ ಜಮೀನು ಕೊಡುವುದನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವಿಷಯಕ್ಕೆ ಕೇಂದ್ರದ ಬಿಜೆಪಿ ವರಿಷ್ಟರು ವಿಳಂಬ ಮಾಡಿರುವುದಕ್ಕೂ, ವೀರಶೈವ ಲಿಂಗಾಯಿತರನ್ನು ಓಬಿಸಿ ಪಟ್ಟಿಗ ಸೇರಿಸಲು ಶಿಫಾರಸು ಮಾಡುವುದಕ್ಕೂ ಸಂಬಂಧವಿಲ್ಲ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
(ವರದಿ: ಚಿದಾನಂದ ಪಟೇಲ್)
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲಾಗುವುದು. ಹರಪ್ಪನಹಳ್ಳಿ, ಹೂವಿನ ಹಡಗಲಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿಯನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲಾಗುವುದು ಎಂದಿದ್ದಾರೆ. ಈ ಮೂಲಕ ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.