ಸೋಮವಾರ ಸಚಿವ ಸಂಪುಟ ವಿಸ್ತರಣೆ; 11 ಮಂದಿ ಶಾಸಕರು ರಾಜ್ಯ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ?

ಮುಂದಿನ ಸೋಮವಾರ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದ್ದು, ಯಾರಿಗೆ ಯಾವ ಖಾತೆ? ಎಂಬ ಕುರಿತ ಮಾಹಿತಿ ನ್ಯೂಸ್​18ಗೆ ಲಭ್ಯವಾಗಿದೆ.

MAshok Kumar | news18-kannada
Updated:December 11, 2019, 1:22 PM IST
ಸೋಮವಾರ ಸಚಿವ ಸಂಪುಟ ವಿಸ್ತರಣೆ; 11 ಮಂದಿ ಶಾಸಕರು ರಾಜ್ಯ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ?
ಸಿಎಂ ಬಿ.ಎಸ್​​ ಯಡಿಯೂರಪ್ಪ, ಅರ್ಹತೆ ಗೆಟ್ಟಿಸಿರುವ ಅನರ್ಹ ಶಾಸಕರು.
  • Share this:
ಬೆಂಗಳೂರು (ಡಿಸೆಂಬರ್​ 11); ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ಮುಂದಿನ ಸೋಮವಾರ ವಿಸ್ತರಣೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಪ್ರಸ್ತುತ 16 ಸಚಿವ ಸ್ಥಾನಗಳು ಖಾಲಿ ಇದ್ದು, ಈ ಪೈಕಿ 11 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಉಪ ಚುನಾವಣೆ ಮುಕ್ತಾಯಗೊಂಡು ಫಲಿತಾಂಶ ಹೊರಬಿದ್ದ ದಿನದಿಂದ ಬಿಜೆಪಿ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಲ್ಲದೆ, ಕಮಲ ಪಾಳಯದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಭಿ ಮುಗಿಲುಮುಟ್ಟಿದೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ನೀಡುವುದು? ಯಾರಿಗೆ ಯಾವ ಖಾತೆ ? ಎಂಬ ಪ್ರಶ್ನೆ ಮುಖ್ಯಮಂತ್ರಿ ಬಿಎಸ್​ವೈ ಅವರ ಚಿಂತೆಗೂ ಕಾರಣವಾಗಿರುವುದು ಸುಳ್ಳಲ್ಲ.

ಈ ನಡುವೆ ಮುಂದಿನ ಸೋಮವಾರ ರಾಜ್ಯ ಸರ್ಕಾರ ಸಂಪುಟ ವಿಸ್ತರಣೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದ್ದು, ಯಾರಿಗೆ ಯಾವ ಖಾತೆ? ಎಂಬ ಕುರಿತ ಮಾಹಿತಿ ನ್ಯೂಸ್​18ಗೆ ಲಭ್ಯವಾಗಿದೆ.

ಸಂಪುಟಕ್ಕೆ ಯಾರ್ಯಾರು ಸೇರ್ಪಡೆ:

ಉಪಚುನಾವಣೆಯಲ್ಲಿ ಗೆದ್ದಿರುವ ರಮೇಶ್ ಜಾರಕಿ ಹೊಳಿ(ಗೋಕಾಕ್), ಮಹೇಶ್ ಕುಮಟಳ್ಳಿ (ಅಥಣಿ), ಶ್ರೀಮಂತಪಾಟೀಲ್(ಕಾಗವಾಡ), ಬಿ.ಸಿ.ಪಾಟೀಲ್(ಹಿರೇಕೆರೂರು), ಆನಂದ್‍ಸಿಂಗ್(ವಿಜಯನಗರ), ಕೆ.ಗೋಪಾಲಯ್ಯ (ಮಹಾಲಕ್ಷ್ಮಿ ಲೇಔಟ್), ಭೈರತಿ ಬಸವರಾಜ್(ಕೆ.ಆರ್.ಪುರಂ), ಎಸ್.ಟಿ.ಸೋಮಶೇಖರ್ (ಯಶವಂತಪುರ), ಕೆ.ಸಿ.ನಾರಾಯಣಗೌಡ (ಕೆ.ಆರ್.ಪೇಟೆ), ಶಿವರಾಂ ಹೆಬ್ಬಾರ್(ಯಲ್ಲಾಪುರ), ಡಾ.ಕೆ.ಸುಧಾಕರ್(ಚಿಕ್ಕಬಳ್ಳಾಪುರ) ಸಂಪುಟಕ್ಕೆ ಸೇರ್ಪಡೆಯಾಗುವುದು ಖಚಿತ ಎನ್ನಲಾಗುತ್ತಿದೆ.

ಇದಲ್ಲದೆ 5 ಸಚಿವ ಸ್ಥಾನಗಳನ್ನು ಬಿಎಸ್​ವೈ ಉಳಿಸಿಕೊಂಡಿದ್ದು ಚುನಾವಣೆಯಲ್ಲಿ ಸೋಲನುಭವಿಸಿದ ಎಂಟಿಬಿ ನಾಗರಾಜ್ ಅವರಿಗೂ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಸಿದ್ದರಾಮಯ್ಯ ರಾಜೀನಾಮೆಯನ್ನು ಅಂಗೀಕರಿಸದ ಹೈಕಮಾಂಡ್; ವಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರೆಯುವಂತೆ ಒತ್ತಾಯ
First published: December 11, 2019, 1:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading