CT Scan: ಖಾಸಗಿ ಆಸ್ಪತ್ರೆ, ಲ್ಯಾಬ್​ಗಳಲ್ಲಿನ್ನು ಸಿಟಿ ಸ್ಕ್ಯಾನ್​ಗೆ 1,500 ರೂ. ನಿಗದಿ; ಹೆಚ್ಚು ಹಣ ಪಡೆದರೆ ಸರ್ಕಾರದಿಂದ ಕಠಿಣ ಕ್ರಮ

CT Scan Price: ಇನ್ನುಮುಂದೆ ಖಾಸಗಿ ಲ್ಯಾಬ್​ಗಳಲ್ಲಿ ಸಿಟಿ ಸ್ಕ್ಯಾನ್​ಗೆ 1,500 ರೂ. ಮಾತ್ರ ನಿಗದಿ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಖಾಸಗಿ ಲ್ಯಾಬ್​ಗಳಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು (ಮೇ 7): ಕರ್ನಾಟಕದಲ್ಲಿ ಕೊರೋನಾ ರೋಗಿಗಳಿಗೆ ಆಸ್ಪತ್ರೆಗಳು ಭಾರೀ ಸುಲಿಗೆ ಮಾಡುತ್ತಿದ್ದು, ಬೆಡ್​ಗಳಿದ್ದರೂ ಇಲ್ಲವೆಂದು ಸುಳ್ಳು ಹೇಳಿ ಹಗಲು ದರೋಡೆ ಮಾಡುತ್ತಿರುವ ಅನೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ಖಾಸಗಿ ಲ್ಯಾಬ್​ಗಳು ಕೂಡ ಲೂಟಿ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇದಕ್ಕೆಲ್ಲ ಕರ್ನಾಟಕ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದೆ. ಇನ್ನುಮುಂದೆ ಖಾಸಗಿ ಲ್ಯಾಬ್​ಗಳಲ್ಲಿ ಸಿಟಿ ಸ್ಕ್ಯಾನ್​ಗೆ 1,500 ರೂ. ಮಾತ್ರ ನಿಗದಿ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಖಾಸಗಿ ಲ್ಯಾಬ್​ಗಳಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ.

  ಒಂದುವೇಳೆ ಈ ನಿಯಮವನ್ನು ಮೀರಿ ಖಾಸಗಿ ಆಸ್ಪತ್ರೆ ಮತ್ತು ಲ್ಯಾಬ್​ಗಳು ನಿಗದಿಗಿಂತ ಹೆಚ್ಚು ಹಣ ಪಡೆದರೆ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಹೀಗಾಗಿ, ಇನ್ನು ಮುಂದೆ ಖಾಸಗಿ ಆಸ್ಪತ್ರೆ ಹಾಗೂ ಲ್ಯಾಬ್​ಗಳಲ್ಲಿ ಸಿಟಿ ಸ್ಕ್ಯಾನ್​ಗೆ 1,500 ರೂ.ಗಿಂತ ಹೆ ಚ್ಚು ಹಣ ಪಡೆಯುವಂತಿಲ್ಲ.

  ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೊರೋನಾ ಕೇಸುಗಳು ದಾಖಲಾಗುತ್ತಿರುವುದರಿಂದ ಇನ್ನೂ 14 ದಿನಗಳ ಕಾಲ ಕರ್ನಾಟಕದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಮೇ 12ರವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ಇದರಿಂದಲೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಕರ್ನಾಟಕದಲ್ಲಿ ನಿನ್ನೆ 49,058 ಕೊರೋನಾ ಕೇಸುಗಳು ಪತ್ತೆಯಾಗಿದ್ದು, 24 ಗಂಟೆಗಳಲ್ಲಿ 328 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 23 ಸಾವಿರ ದಾಟಿದ್ದು, ನಿನ್ನೆ 23,706 ಕೊರೋನಾ ಕೇಸುಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 139 ಕೊರೋನಾ ರೋಗಿಗಳು ಸಾವನ್ನಪ್ಪಿದ್ದಾರೆ.

  ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮೇ 10ರಿಂದ 2 ವಾರಗಳ ಕಾಲ ಕಠಿಣ ಲಾಕ್​ಡೌನ್ ಜಾರಿಗೊಳಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಈಗಾಗಲೇ ಸಚಿವರು, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಸಿಎಂ ಯಡಿಯೂರಪ್ಪ ಲಾಕ್​ಡೌನ್ ಜಾರಿಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲವೇ ಹೊತ್ತಿನಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.
  Published by:Sushma Chakre
  First published: