ಸರೋಜಿನಿ ಮಹಿಷಿ ವರದಿ ಜಾರಿಗೆ ವಿಪಕ್ಷಗಳ ಜೊತೆ ಚರ್ಚಿಸಿ ಕ್ರಮ; ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ

ಕಾನೂನು ಚೌಕಟ್ಟಿನ ಅಡಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗದೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧವೂ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ.

ಸಿಎಂ ಬಿ.ಎಸ್.ಯಡಿಯೂರಪ್ಪ.

  • Share this:
ಬೆಂಗಳೂರು (ಫೆಬ್ರವರಿ 13); ಕರ್ನಾಟಕದಲ್ಲಿ ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಶೇ.100 ರಷ್ಟು ಉದ್ಯೋಗಾವಕಾಶ ನೀಡಬೇಕು ಎಂಬ ಸರೋಜಿನಿ ಮಹಿಷಿ ವರದಿಯ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

1986 ರಲ್ಲಿ ಅಂದಿನ ರಾಜ್ಯ ಸರ್ಕಾರಕ್ಕೆ ಡಾ. ಸರೋಜಿನಿ ಮಹಿಷಿ ನೀಡಿದ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸುಮಾರು 500ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್​ಗೆ ಕರೆ ನೀಡಿವೆ.

ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸುವಂತೆ ಕರ್ನಾಟಕ ಬಂದ್ ಹಾಗೂ ಕನ್ನಡ ಪರ ಸಂಘಟನೆಗಳ ಒತ್ತಾಯದ ಬೆನ್ನಿಗೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, “ಸರೋಜಿನಿ ಮಹಿಷಿ ವರದಿಯಲ್ಲಿ 53 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಪೈಕಿ ನಮ್ಮ ಇತಿಮಿತಿಯಲ್ಲಿ ಏನೇನು ಜಾರಿಗೆ ತರಬೇಕು? ಏನೇನು ಬದಲಾವಣೆ ಮಾಡಬೇಕು ಎಂದು ವಿಪಕ್ಷಗಳ ಜೊತೆಗೂ ಚರ್ಚಿಸಿ ಶೀಘ್ರದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ.

ಹಾಗೂ ಕಾನೂನು ಚೌಕಟ್ಟಿನ ಅಡಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗದೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧವೂ ಚರ್ಚೆ ನಡೆಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ : Karnataka Bandh: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ; ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
First published: