ಕರ್ನಾಟಕ ಭವನ ಶಂಕುಸ್ಥಾಪನೆಗಾಗಿ ನಾಳೆ ತಿರುಮಲಕ್ಕೆ ತೆರಳಲಿರುವ ಸಿಎಂ ಬಿಎಸ್ ಯಡಿಯೂರಪ್ಪ
ತಿರುಮಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕದಿಂದ ಭಕ್ತರು ತೆರಳುತ್ತಾರೆ. ಇವರಲ್ಲಿ ಅನೇಕರು ಕರ್ನಾಟಕ ಭವನದ ಸೌಲಭ್ಯ ಸಿಗದೆ ವಂಚಿತರಾಗಿದ್ದಾರೆ. ಈ ಕಾಮಗಾರಿಯಿಂದ ಅವರಿಗೆ ಲಾಭಾ ಸಿಗಲಿದೆ.
ಬೆಂಗಳೂರು (ಸೆ.22): ಮುಂಗಾರು ಅಧಿವೇಶನ ನಡೆಯುತ್ತಿರುವ ನಡುವೆಯೇ ಕೃಷಿ ಕಾಯ್ದೆ ವಿರೋಧಿಸಿ ಕಳೆದೆರಡು ದಿನಗಳಿಂದ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಈ ಹೋರಾಟ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಈ ನಡುವೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಳೆ ತಿರುಪತಿಗೆ ತೆರಳಲಿದ್ದು, ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ. ಅಧಿಕೃತ ಕಾರ್ಯಕ್ರಮದೊಂದಿಗೆ ಸಿಎಂ ನಾಳೆ ಈ ಪ್ರವಾಸ ಬೆಳಸಲಿದ್ದಾರೆ. ಇದಾದ ಬಳಿಕ ಗುರುವಾರ ಬೆಳಗ್ಗೆ ರಾಜಧಾನಿಗೆ ಮರಳಲಿದ್ದಾರೆ. ಈ ವೇಳೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಜೊತೆ ಅವರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ. ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದಾಗಿ ಕರ್ನಾಟಕ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಕರ್ನಾಟಕ ಭವನ ನಿರ್ಮಾಣ ಶಂಕು ಸ್ಥಾಪನೆಗಾಗಿ ಅವರು ಅಲ್ಲಿಗೆ ತೆರಳಲಿದ್ದಾರೆ.
ಇದೇ ಸಂದರ್ಭದಲ್ಲಿ ಗುರುವಾರ ಬೆಳಗ್ಗೆ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ.
ತಿರುಪತಿಯಲ್ಲಿ ಹಾಲಿ ಇರುವ ಕರ್ನಾಟಕ ಭವನ ಜೊತೆ ವಸತಿ ನಿರ್ಮಾಣ ಮಾಡಲು ಮುಂದಾಗಿದೆ. 7.5ಎಕರೆ ಜಾಗದಲ್ಲಿ ಈ ವಸತಿ ಗೃಹ ನಿರ್ಮಾಣ ವಾಗುತ್ತಿದೆ. ತಿರುಮಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕದಿಂದ ಭಕ್ತರು ತೆರಳುತ್ತಾರೆ. ಇವರಲ್ಲಿ ಅನೇಕರು ಕರ್ನಾಟಕ ಭವನದ ಸೌಲಭ್ಯ ಸಿಗದೆ ವಂಚಿತರಾಗಿದ್ದಾರೆ. ಈ ಕಾಮಗಾರಿಯಿಂದ ಅವರಿಗೆ ಲಾಭಾ ಸಿಗಲಿದೆ.
Published by:Seema R
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ