ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ (CLP leader) ಸಿದ್ದರಾಮಯ್ಯ (Siddaramaiah) ಆಯ್ಕೆಯಾಗಿದ್ದಾರೆ. ಸಿಎಲ್‌ಪಿ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯಗೆ ಹೂಗುಚ್ಚ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಶುಭಾಶಯ ಕೋರಿದ್ದಾರೆ. ಸಿಎಲ್‌ಪಿ ಸಭೆ ಆರಂಭವಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಅವರು, ಸಿದ್ದರಾಮಯ್ಯರನ್ನ ಸಿಎಲ್‌ಪಿ ನಾಯಕರಾಗಿ ಆಯ್ಕೆ ಮಾಡುವ ಬಗ್ಗೆ ಡಿಕೆಶಿ ಪ್ರಸ್ತಾವನೆ ಮಂಡನೆ ಮಾಡಿದರು. ಈ ಪ್ರಸ್ತಾವನೆಗೆ ಪರಮೇಶ್ವರ್ (Parameshwar), ಹೆಚ್‌ಕೆ ಪಾಟೀಲ್, ಎಂಬಿ ಪಾಟೀಲ್, ಆರ್.ವಿ.ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಅನುಮೋಧನೆ ಮಾಡಿದರು. ಇದರೊಂದಿಗೆ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆಗೆ ಸಭೆ ಸರ್ವಾನುಮತದಿಂದ ಅನುಮೋಧನೆ ನೀಡಿತು.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವೀಕ್ಷಕರಾದ ಸುಶೀಲ್ ಕುಮಾರ್ ಶಿಂದೆ, ಜೀತೇಂದ್ರ ಸಿಂಗ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ, ನಿಯೋಜಿತ ಸಿಎಂ ಸಿದ್ದರಾಮಯ್ಯ, ನಿಯೋಜಿತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಾಯಕ ಬಿ ಕೆ ಹರಿಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ: CM Siddaramaiah: ಬೆಂಗಳೂರಿಗೆ ಟಗರು-ಬಂಡೆ ಗ್ರ್ಯಾಂಡ್ ಎಂಟ್ರಿ!
ಶಾಸಕಾಂಗ ಸಭೆ ಆರಂಭದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಿರುವ ಸುರ್ಜೇವಾಲಾ ಅವರು, ಹೈಕಮಾಂಡ್ ನಿರ್ಧಾರದಂತೆ ಸಿದ್ದರಾಮಯ್ಯರನ್ನ ಸಿಎಂ ಎಂದು ಘೋಷಿಸಲಾಗಿದೆ. ಡಿಕೆ ಶಿವಕುಮಾರ್ ಅವರನ್ನು ಡಿಸಿಎಂ ಎಂದು ಘೋಷಿಸಲಾಗಿದೆ. ಇಬ್ಬರೂ ನಾಯಕರಿಗೆ ನೀವೆಲ್ಲಾ ಸಹಕಾರ ನೀಡಬೇಕು. ಇಬ್ಬರೂ ನಿಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಾರೆ. ಕರ್ನಾಟಕ ಸರ್ಕಾರ ಇಡೀ ದೇಶದಲ್ಲಿ ನಂಬರ್ 1 ಆಗಬೇಕು ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ