Karnataka CM: ಮುಖ್ಯಮಂತ್ರಿಯಾಗುತ್ತಿರುವ ಸಿದ್ದರಾಮಯ್ಯರಿಂದ ಅಪರೂಪದ ದಾಖಲೆ!

ಸಿದ್ದರಾಮಯ್ಯ

ಸಿದ್ದರಾಮಯ್ಯ

ಕರ್ನಾಟಕ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರತುಪಡಿಸಿ ಇನ್ನಿಬ್ಬರು ಮಾತ್ರ ಪೂರ್ಣಾವಧಿ ಅಧಿಕಾರ ನಡೆಸಿದ್ದಾರೆ. ಇನ್ನುಳಿದಂತೆ ಎಲ್ಲ ಮುಖ್ಯಮಂತ್ರಿಗಳು ಅವಧಿ ಮುಗಿಯುವುದಕ್ಕೂ ಮುನ್ನ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ.

  • Share this:

ಬೆಂಗಳೂರು(ಮೇ.20): ಏ.10 - 1956ರಲ್ಲಿ ರಾಜ್ಯವಾಗಿ ರೂಪುಗೊಂಡ ಕರ್ನಾಟಕ (Karnataka) ಈವರೆಗೆ 35 ಮುಖ್ಯಮಂತ್ರಿಗಳನ್ನು (Chief Ministers) ಕಂಡಿದೆ. ಹಲವಾರು ಮಂದಿ ಪೂಣಾರ್ವಧಿ ಪೂರೈಸುವುದಕ್ಕೂ ಮುನ್ನ ಅಧಿಕಾರದಿಂದ ಕೆಳಗಿಳಿದಿದ್ದರೆ, ಇನ್ನು ಕೆಲವರು ಪೂರ್ಣಾವಧಿ ಮುಗಿಸುವುದಕ್ಕೂ ಮೊದಲೇ ಚುನಾವಣೆ ಘೋಷಣೆಯಾದ ಕಾರಣ ಈ ಅವಕಾಶದಿಂದ ವಂಚಿತರಾಗಿದ್ದಾರೆ.


ಕರ್ನಾಟಕ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರತುಪಡಿಸಿ ಇನ್ನಿಬ್ಬರು ಮಾತ್ರ ಪೂರ್ಣಾವಧಿ ಅಧಿಕಾರ ನಡೆಸಿದ್ದಾರೆ. ಇನ್ನುಳಿದಂತೆ ಎಲ್ಲ ಮುಖ್ಯಮಂತ್ರಿಗಳು ಅವಧಿ ಮುಗಿಯುವುದಕ್ಕೂ ಮುನ್ನ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ.


ಕರ್ನಾಟಕ ಮುಖ್ಯಮಂತ್ರಿಗಳ ಕುರಿತು ಮಾಹಿತಿ:


ಪ್ರಸ್ತುತ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರತುಪಡಿಸಿದರೆ 5 ವರ್ಷ ಪೂರ್ಣಾವಧಿ ಪೂರೈಕೆ ಮಾಡಿದ್ದು ಕೇವಲ ಇಬ್ಬರು ಮುಖ್ಯಮಂತ್ರಿಗಳು ಮಾತ್ರ. ಅವರುಗಳಲ್ಲಿ ಎಸ್. ನಿಜಲಿಂಗಪ್ಪ ಅವರು 5 ವರ್ಷಕ್ಕೂ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರ ನಂತರ ದಿ. ದೇವರಾಜ ಅರಸು ಪೂರ್ಣ ಪ್ರಮಾಣದ ಅವಧಿಯವರೆಗೆ ಮುಖ್ಯಮಂತ್ರಿಯಾಗಿದ್ದರು.


ಇದನ್ನೂ ಓದಿ:  Congress Cabinet: ಮೊದಲ ಸಚಿವ ಸಂಪುಟದಲ್ಲಿ ಆರು ಸಮುದಾಯಕ್ಕೆ ಅವಕಾಶ


ನಿಜಲಿಂಗಪ್ಪ ಅವರು ಮೊದಲ ಬಾರಿಗೆ 1956 ರಲ್ಲಿ ಮುಖ್ಯಮಂತ್ರಿಯಾದರು, ಎರಡು ವರ್ಷಗಳಿಗಿಂತ ಕಡಿಮೆ ಕಾಲ ರಾಜ್ಯಕ್ಕೆ ಸೇವೆ ಸಲ್ಲಿಸಿದರು. ಆದರೆ ಅವರು 1962 ರಲ್ಲಿ ಮರು ಆಯ್ಕೆಯಾದರು ಮತ್ತು ಸುಮಾರು ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದರು.


ರಾಮಕೃಷ್ಣ ಹೆಗ್ಡೆಯವರು ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು ವಿವಿಧ ಅವಧಿಗಳಲ್ಲಿ ಒಟ್ಟು 1,967 ದಿನಗಳಷ್ಟು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ಹೊಸ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಲ್ಲಿ ಐದು ವರ್ಷಗಳ ಪೂರ್ಣ ಅವಧಿಯನ್ನು ಪೂರೈಸಿದ ಕರ್ನಾಟಕದ ಮೊದಲ ಸಿಎಂ ಆಗಿದ್ದಾರೆ.


ವಾಸ್ತವವಾಗಿ, ಅವರು ದಕ್ಷಿಣ ರಾಜ್ಯದ ಇತಿಹಾಸದಲ್ಲಿ ದೇವರಾಜ್ ಅರಸ್ ನಂತರ ಪೂರ್ಣ ಅವಧಿಯನ್ನು ಪೂರೈಸಿದ ಎರಡನೇ ಮುಖ್ಯಮಂತ್ರಿಯಾಗಿದ್ದಾರೆ. ಮೇ 2013 ರಲ್ಲಿ, ಸಿದ್ದರಾಮಯ್ಯ ಅವರು ಕರ್ನಾಟಕದ 28 ನೇ ಮುಖ್ಯಮಂತ್ರಿಯಾದರು ಮತ್ತು ಅವರ ಅವಧಿ 15 ಮೇ 2018 ರಂದು ಕೊನೆಗೊಂಡಿತು. ಅವರು ಈ ಹಿಂದೆ ಉಪಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.


ಒಂಬತ್ತು ಮುಖ್ಯಮಂತ್ರಿಗಳು ದಕ್ಷಿಣದ ರಾಜ್ಯಗಳಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯನ್ನು ಪೂರೈಸಿದ್ದಾರೆ. ಇವರಲ್ಲಿ ಕಡಿದಾಳ್ ಮಂಜಪ್ಪ ಕಡಿಮೆ ದಿನ ಸೇವೆ ಸಲ್ಲಿಸಿದ ಮಾಜಿ ಸಿಎಂ. ಆಗಸ್ಟ್ 19, 1956 ರಂದು ಪ್ರಮಾಣವಚನ ಸ್ವೀಕರಿಸಿದರು ಹಾಗೂ ಮುಖ್ಯಮಂತ್ರಿಯಾಗಿ ಕೇವಲ 73 ದಿನಗಳ ಸೇವೆ ಸಲ್ಲಿಸಿದರು. ಕರ್ನಾಟಕದ ಅರ್ಧಕ್ಕಿಂತ ಹೆಚ್ಚು ಮುಖ್ಯಮಂತ್ರಿಗಳು ಎರಡು ವರ್ಷಕ್ಕಿಂತ ಕಡಿಮೆ ಅವಧಿಯನ್ನು ಪೂರೈಸಿದ್ದಾರೆ.




ದೇವರಾಜ ಅರಸು ಅಧಿಕಾರ ಹಾಗೂ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡ ಬಳಿಕ ಸುಮಾರು 36 ವರ್ಷಗಳ ಅವಧಿಯಲ್ಲಿ ಕರ್ನಾಟಕ್ಕೆ 14 ಜನ ಮುಖ್ಯಮಂತ್ರಿಗಳು ಹಾಗೂ ಐದು ಬಾರಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.


1999ರ ಅಕ್ಟೋಬರ್‍ನಲ್ಲಿ ರಾಜ್ಯದಲ್ಲಿ ಎಸ್.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿ ಸರ್ಕಾರ ರಚಿಸಿ, ಉತ್ತಮ ಆಡಳಿತ ನೀಡಿತ್ತು. ಆದರೆ ಇನ್ನೇನು ಪೂರ್ಣಾವಧಿ ಮುಗಿಸಲು ಕೇವಲ 5 ತಿಂಗಳು ಇದೆ ಎನ್ನುವಾಗಲೇ ಲೋಕಸಭಾ ಚುನಾವಣೆ ಎದುರಾಗಿತ್ತು. ಹೀಗಾಗಿ ವಿಧಾನಸಭೆ ಚುನಾವಣೆಯೂ ಒಟ್ಟಿಗೇ ನಡೆಯಲಿ ಎಂಬ ಉದ್ದೇಶದಿಂದ ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಾನಸಭೆಯನ್ನು ವಿಸರ್ಜಿಸಿದ್ದರು.


ಹೀಗಾಗಿ ಪೂರ್ಣಾವಧಿ ಸಿಎಂ ಪಟ್ಟಿಗೆ ಎಸ್‍ಎಂಕೆ ಹೆಸರು ಸೇರ್ಪಡೆಯಾಗಲಿಲ್ಲ. ಹೀಗಾಗಿ ಎಸ್.ನಿಜಲಿಂಗಪ್ಪ, ಡಿ.ದೇವರಾಜ ಅರಸು ಹೊರತುಪಡೆಸಿದರೆ ಸಿದ್ದರಾಮಯ್ಯ ಮಾತ್ರ ತಮ್ಮ ಅಧಿಕಾರವನ್ನು ಐದು ವರ್ಷ ಪೂರೈಸಿದ್ದಾರೆ.


ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷ ಜೆಡಿಎಸ್ ಪಕ್ಷಗಳು ಹಲವು ಬಾರಿ ಅಧಿಕಾರದ ಗದ್ದುಗೆ ಹಿಡಿದಿದ್ದವು. ಆದರೂ ಪೂರ್ಣಾವಧಿ ಪೂರೈಸಿದ ಮುಖ್ಯಮಂತ್ರಿಗಳು ಕಾಂಗ್ರೆಸ್ ಪಕ್ಷದವರು ಮಾತ್ರ ಎಂಬುದನ್ನು ಸ್ಮರಿಸಬಹುದಾಗಿದೆ.


ಇದನ್ನೂ ಓದಿ: Karnataka Politics: ಸಿದ್ದರಾಮಯ್ಯ-ಡಿಕೆಶಿ ಪ್ರಮಾಣವಚನಕ್ಕೆ 8 ರಾಜ್ಯದ ಸಿಎಂ, ಘಟಾನುಘಟಿ ನಾಯಕರಿಗೆ ಆಹ್ವಾನ!


ಮೇ 20 ರಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಉನ್ನತ ನಾಯಕತ್ವವನ್ನು ಹೊರತುಪಡಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮೆಹಬೂಬಾ ಮುಫ್ತಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಡಿ ರಾಜಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

First published: