ಬೆಂಗಳೂರು: ಕಳೆದ ನಾಲ್ಕು ದಿನಗಳ ನಿರಂತರ ಕಾಯುವಿಕೆ ಫುಲ್ಸ್ಟಾಪ್ ಬಿದ್ದಿದೆ. ಹಠ ಬಿಡದ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಪಟ್ಟು ಬಿಡದ ಸಿದ್ದರಾಮಯ್ಯ (Siddaramaiah) ಅವರನ್ನು ಮನವೊಲಿಸಲು 120 ಗಂಟೆ ಬೇಕಾಯಿತು. ಕೊನೆಗೂ ಅಂದುಕೊಂಡಿದ್ದನ್ನು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಾಧಿಸಿಬಿಟ್ಟರು. ಸಿದ್ದರಾಮಯ್ಯರನ್ನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ರನ್ನ ಉಪಮುಖ್ಯಮಂತ್ರಿ ಅಂತ ಕಾಂಗ್ರೆಸ್ (Congress) ಅಧಿಕೃತ ಘೋಷಣೆ ಮೊಳಗಿಸಿ, ಸರ್ಕಾರದ ರಚನೆಗೆ ಗವರ್ನರ್ಗೆ ಕಾಂಗ್ರೆಸ್ ನಿಯೋಗ ಹಕ್ಕು ಮಂಡನೆಯನ್ನು ಮಾಡಿದೆ.
ಕರ್ನಾಟಕ ರಾಜ್ಯದ ಎಲ್ಲರಿಗೂ ಅಭಿನಂದನೆ
ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಡಿ.ಕೆ ಶಿವಕುಮಾರ್ ಒಬ್ಬರೇ ಉಪಮುಖ್ಯಮಂತ್ರಿಯಾಗುತ್ತಿದ್ದಾರೆ. ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಲೋಕಸಭೆ ಎಲೆಕ್ಷನ್ವರೆಗೂ ಮುಂದುವರೆಯಲಿದ್ದಾರೆ.
ಇದನ್ನೂ ಓದಿ: Karnataka CM: CLP ನಾಯಕರಾಗಿ ಸಿದ್ದರಾಮಯ್ಯ, DCM ಆಗಿ ಡಿಕೆಶಿ ಆಯ್ಕೆ; ಗವರ್ನರ್ ಬಳಿ ಸರ್ಕಾರ ರಚನೆ ಹಕ್ಕು ಮಂಡನೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಕರ್ನಾಟಕ ರಾಜ್ಯದ ಎಲ್ಲರಿಗೂ ಅಭಿನಂದನೆ. ನಮ್ಮ ಮೇಲೆ ನಂಬಿಕೆಯಿಟ್ಟು ಕೊಟ್ಟ ಸಂಖ್ಯೆಯನ್ನು ಅದನ್ನ ತುಂಬುತ್ತನೆ. ಮೇ 20ರಂದು ಮಧ್ಯಾಹ್ನ 12:30ಕ್ಕೆ ನೂತನ ಸರ್ಕಾರ ರಚನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಇದಕ್ಕೂ ಮುನ್ನ, ದೆಹಲಿಯಿಂದ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್ ಸೇರಿ ಹಲವರು ಹೆಚ್ಎಎಲ್ಗೆ ಬಂದಿಳಿದರು. ಏರ್ಪೋರ್ಟ್ ಒಳಗೂ ಮುಖಂಡರು ದಂಡು ನೆರೆದಿತ್ತು. ಏರ್ಪೋರ್ಟ್ ಹೊರಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಕಾರ್ಯಕರ್ತರ ಭವ್ಯ ಸ್ವಾಗತ ಸಿಕ್ತು. ಹೂವಿನ ಸುರಿಮಳೆ ಸುರಿಸಿ ಇಬ್ಬರನ್ನೂ ವೆಲ್ಕಂ ಮಾಡಿದ್ದರು.
ಶನಿವಾರ ಮಧ್ಯಾಹ್ನ 12:30ಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಶನಿವಾರದ ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ನ ಘಟಾನುಘಟಿಗಳು ಆಗಮಿಸಲಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ವಾದ್ರಾ ಸಾಕ್ಷಿಯಾಗಲಿದ್ದಾರೆ.
ಇದರೊಂದಿಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೂರೇನ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್ಗಢ ಸಿಎಂ ಭೂಪೇಶ್, ಬಿಹಾರ ಸಿಎಂ ನಿತೀಶ್ ಕುಮಾರ್, ಡಿಸಿಎಂ ತೇಜಸ್ವಿ ಯಾದವ್ ಕೂಡ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹಿಮಾಚಲ ಸಿಎಂ ಸುಖ್ವಿಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ ಕೂಡ ಪ್ರಮಾಣ ವಚನಕ್ಕೆ ಸಾಕ್ಷಿ ಆಗಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ