ಇಂದು ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ (Swearing-in Ceremony) ಸ್ವೀಕರಿಸಿದ್ದು ಈ ಹಿಂದೆಯೂ ಇವರು ಪೂರ್ಣಾವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ನಿಭಾಯಿಸಿ ಯಶಸ್ವಿಯಾಗಿದ್ದರು, ಇದೀಗ ಎರಡನೇ ಭಾರಿ ಮತ್ತೆ ಮುಖ್ಯ ಮಂತ್ರಿಯಾಗಿದ್ದಾರೆ.
ಸಚಿವ ಸ್ಥಾನ ಸಿಕ್ಕಿಲ್ಲ ಅಂತ ಮಧು ಬಂಗಾರಪ್ಪ ಬೇಸರ ಗೊಂಡಿದ್ದಾರೆ. ವರಿಷ್ಠರ ನಡೆಯಿಂದ ಮಧು ಬಂಗಾರಪ್ಪ ಮುನಿಸಿಕೊಂಡಿದ್ದು, ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಇಂದು ಸಿದ್ದರಾಮಯ್ಯ ಹೊರತುಪಡಿಸಿ ಬೇರಾವ ಹಿಂದುಳಿದ ವರ್ಗಕ್ಕೂ ಸ್ಥಾನಮಾನ ನೀಡಿಲ್ಲ.
ನೂತನ ಸಿಎಂ ಹಾಗೂ ನೂತನ ಡಿಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ. ನನಗೆ ಸಚಿವ ಸ್ಥಾನ ಸಿಗೋದು ಹೈಕಮಾಂಡ್ಗೆ ಬಿಟ್ಟದ್ದು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ರಸ್ತೆಯಲ್ಲಿ ಹೋಗುವವರಿಗೆಲ್ಲಾ ಗ್ಯಾರೆಂಟಿ ಕೊಡಲು ಆಗಲ್ಲ. ಯಾರಿಗೆ ಕೊಡಬೇಕು, ಅವರ ಹೆಸರಿನಲ್ಲಿ ಖಾತೆ ಇದೆಯಾ ಎಂದು ನೋಡಿ ನಂತರ ಆದೇಶ ಹೊರಡಿಸಲಾಗುತ್ತೆ ಎಂದು ಕಾಂಗ್ರೆಸ್ ಗ್ಯಾರೆಂಟಿ ಕುರಿತಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಗ್ಯಾರಂಟಿ ಘೋಷಣೆಗೆ ಒಪ್ಪಿಗೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಪ್ಪಿಗೆಗೂ ಮೊದಲು ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ, ಯೋಜನೆಗಳಿಗೆ ಹಣಕಾಸು ಹೊಂದಿಸುವ ಕುರಿತು ಚರ್ಚೆ ನಡೆಸಲಾಗಿದೆ.
ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಂಪುಟ ಸಭೆ ಆರಂಭಗೊಂಡಿದೆ.
ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಂಟು ಸಚಿವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಸಚಿವರ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಕಾರ್ಯಕ್ರಮ ಮುಕ್ತಾಯವಾಗಿದೆ.
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ಬಿಝೆಡ್ ಜಮೀರ್ ಅಹ್ಮದ್ ಖಾನ್ ಪ್ರಮಾಣವಚನ ಸ್ವೀಕರಿಸಿದ್ದಾರೆ
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ರಾಮಲಿಂಗಾ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ಪ್ರಿಯಾಂಕ್ ಖರ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕರಿಸಿದ್ದಾರೆ
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ಎಂ ಬಿ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ಕೆ. ಜೆ ಜಾರ್ಜ್ ಪ್ರಮಾಣವಚನ ಸ್ವೀಕರಿಸಿದ್ದಾರೆ
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ಕೆ. ಎಚ್ ಮುನಿಯಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ
ಕಾಂಗ್ರೆಸ್ ಸರ್ಕಾರದ ಮೊದಲ ಸಚಿವರಾಗಿ ಡಾ.ಜಿ ಪರಮೇಶ್ವರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಪ್ರಮಾಣವಚನ ಹಿನ್ನೆಲೆ ತಮಿಳುನಾಡು ಎಂಪಿಗಳು ವಿಶೇಷ ಬಸ್‌ನಲ್ಲಿ ಆಗಮಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾರ್ಯಕ್ರಮ ಆರಂಭವಾಗಿದೆ.