• Home
  • »
  • News
  • »
  • state
  • »
  • KCET 2022: ಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್​ ಬಿಡುಗಡೆ; ಇಲ್ಲಿದೆ ಪ್ರವೇಶ ಪತ್ರ ಡೌನ್​ಲೋಡ್ ಮಾಡುವ ವಿಧಾನ

KCET 2022: ಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್​ ಬಿಡುಗಡೆ; ಇಲ್ಲಿದೆ ಪ್ರವೇಶ ಪತ್ರ ಡೌನ್​ಲೋಡ್ ಮಾಡುವ ವಿಧಾನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಎಂಜಿನಿಯರಿಂಗ್, ಫಾರ್ಮಸಿ ಮತ್ತು ಇತರ ಕೆಲವು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ KCET ಪರೀಕ್ಷೆಯ ಹಾಲ್​ ಟಿಕೆಟ್ ಬಿಡುಗಡೆಯಾಗಿದೆ. ಅಧಿಕೃತ ವೆಬ್​ ಸೈಟ್​ನಲ್ಲಿ ಹಾಲ್​ ಟಿಕೆಟ್​ ಡೌನ್​ ಲೋಡ್​ ಮಾಡಿಕೊಳ್ಳಬಹುದು.

  • Share this:

ಬೆಂಗಳೂರು (ಜೂ 4): ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority - KEA) ಎಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶ ಕಲ್ಪಿಸಿಕೊಡುವ  KCET 2022ರ ಪರೀಕ್ಷೆಯ ಪ್ರವೇಶ ಪತ್ರ ಅಥವಾ ಹಾಲ್ ಟಿಕೆಟ್ (Hall Ticket) ಬಿಡುಗಡೆ ಮಾಡಿದೆ. ಜೂನ್​ 2 ಗುರುವಾರದಂದೇ ಪರೀಕ್ಷಾ ಪ್ರಾಧಿಕಾರವೂ ಆನ್​ ಲೈನ್​ನಲ್ಲಿ ಹಾಲ್​ ಟಿಕೆಟ್​ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು  ಕೆಇಎ ಅಧಿಕೃತ ವೆಬ್‌ಸೈಟ್‌ kea.kar.nic.in ಅಥವಾ cetonline.karnataka.gov.in/kea ಗೆ ಭೇಟಿ ನೀಡಿ ಸಿಇಟಿ ಪರೀಕ್ಷೆಯ ಹಾಲ್ ಟಿಕೆಟ್  ಡೌನ್‌ಲೋಡ್ (Download) ಮಾಡಿಕೊಳ್ಳಬಹುದು.

KCET 2022 ಹಾಲ್​ ಟಿಕೆಟ್​ನನ್ನು ಡೌನ್‌ಲೋಡ್ ಮಾಡುವ ವಿಧಾನ


ಸಿಇಟಿ ಅಧಿಕೃತ ವೆಬ್​ ಸೈಟ್​ kea.kar.nic.in ಗೆ ಹೋಗಿ


ಹೋಮ್​ ಪೇಜ್​ನಲ್ಲಿರೋ  Admission 2022 section ವಿಭಾಗದಡಿಯಲ್ಲಿ, UG CET ಆಯ್ಕೆಮಾಡಿ


Admit Card Link ಮೇಲೆ ಕ್ಲಿಕ್ ಮಾಡಿ


ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ


ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ


KCET ಪದವಿ ಪೂರ್ವ ಎಂಜಿನಿಯರಿಂಗ್, ಫಾರ್ಮಸಿ ಮತ್ತು ಇತರ ಕೆಲವು ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಇನ್ನು ವೃತ್ತಿಶಿಕ್ಷಣಕ್ಕೆ (Vocational Education) ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (Common Entrance Test - CET) ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ. ಜೂನ್ 18 ರಂದು ಕನ್ನಡ ಪರೀಕ್ಷೆ ನಡೆಯಲಿದೆ.


ಹಾಲ್​ ಟಿಕೆಟ್​ ಡೌನ್​ ಲೋಡ್​ ಮಾಡಿಕೊಳ್ಳಲು ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ


https://cetonline.karnataka.gov.in/onlineappugcethallticket2022/forms/hallticket.aspx


ಜೂನ್​ 16 ರಿಂದ ಸಿಇಟಿ ಪರೀಕ್ಷೆ


ಪ್ರವೇಶ ಪರೀಕ್ಷೆಯನ್ನು ಜೂನ್ 16, 17 ಮತ್ತು 18 ರಂದು ನಡೆಯಲಿದ್ದು, ಸರಕಾರ ಈಗಾಗಲೇ ಬೇಕಾದ ತಯಾರಿಯನ್ನು ನಡೆಸುತ್ತಿದೆ. ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ನಡೆಸಲು ಉದ್ದೇಶಿಸಲಾಗಿದೆ.


ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ


ನೀಟ್ ಪರೀಕ್ಷೆ ಮಾದರಿಯಲ್ಲೇ ಸಿಇಟಿ ನಡೆಸಲಾಗುವುದು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾಂಗಲ್ಯ ಸರ, ಮೂಗುತಿ, ಓಲೆ, ಸರ, ಬಳೆ ಸೇರಿದಂತೆ ಯಾವುದೇ ರೀತಿಯ ಆಭರಣ ಧರಿಸಿ ಬರುವಂತಿಲ್ಲ. ವಾಚ್, ಕ್ಯಾಲ್ಕುಲೇಟರ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ. ಮಾತ್ರವಲ್ಲ ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಮೆಟಲ್ ಡಿಟೆಕ್ಟರ್​​ಗಳನ್ನು ಅಳವಡಿಕೆ ಮಾಡಲಾಗುತ್ತಿದೆ.


ಪರೀಕ್ಷೆ ಬರೆಯಲಿದ್ದಾರೆ 2.11 ಲಕ್ಷ ವಿದ್ಯಾರ್ಥಿಗಳು


ಒಟ್ಟು 2.11 ಲಕ್ಷ ವಿದ್ಯಾರ್ಥಿಗಳು ಸಿಇಟಿಗೆ ನೋಂದಣಿ ಮಾಡಿಸಿದ್ದಾರೆ. ಇದರಲ್ಲಿ 1.4 ಲಕ್ಷ ಪುರುಷರು ಹಾಗೂ 1.7 ಲಕ್ಷ ಮಹಿಳಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.


ಯಾವುದೇ ಅಕ್ರಮ ನಡೆಯದಂತೆ ಬಿಗಿಭದ್ರತೆ


ಸಿಇಟಿಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿಡಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಅದೇ ರೀತಿ ಪರೀಕ್ಷೆ ನಡೆಯುವ ದಿನಗಳಲ್ಲಿ ಸುತ್ತಮುತ್ತಲ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ವಿವರಿಸಿದ್ದಾರೆ.


ಇದನ್ನೂ ಓದಿ: Explained: ಮಕ್ಕಳು ಓದುವ ಪುಸ್ತಕದಲ್ಲೂ ಯಾಕೆ ವಿವಾದ? ಪರಿಷ್ಕರಣೆಗೆ ವಿರೋಧ ವ್ಯಕ್ತವಾಗಿದ್ದೇಕೆ?


ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ


ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ನಡೆಯುವ ಸಿಇಟಿ ಪರೀಕ್ಷೆಗೂ ಹಿಜಾಬ್‍ ಧರಿಸುವುದಕ್ಕೆ ನಿಷೇಧ ಹೇರಲಾಗಿದೆ. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಹಿಜಾಬ್ ತೆಗೆದಿಡಬೇಕು. ಒಂದು ವೇಳೆ ಹಿಜಾಬ್ ಧರಿಸಿ ಬಂದರೆ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Published by:Pavana HS
First published: