ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಬೆನ್ನಲ್ಲೇ ಕೆಸಿ ವೇಣುಗೋಪಾಲ್ ಕೂಡ ರಾಜೀನಾಮೆಗೆ ನಿರ್ಧಾರ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್​ನ ಪ್ರಮುಖರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತಿದ್ದಾರೆ.

ಕೆ.ಸಿ ವೇಣುಗೋಪಾಲ್​​

ಕೆ.ಸಿ ವೇಣುಗೋಪಾಲ್​​

  • News18
  • Last Updated :
  • Share this:
ಬೆಂಗಳೂರು(ಡಿ. 10): ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅನಿರೀಕ್ಷಿತ ಸೋಲು ಕಂಡ ಹಿನ್ನೆಲೆಯಲ್ಲಿ ಆ ಪಕ್ಷದಲ್ಲಿ ರಾಜೀನಾಮೆ ಪರ್ವ ಪ್ರಾರಂಭವಾದಂತಿದೆ. ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರು ತಮ್ಮ ಹುದ್ದೆಗಳಿಗೆ ನಿನ್ನೆಯೇ ರಾಜೀನಾಮೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ಧಾರೆಂಬ ಸುದ್ದಿ ಇದೆ. ಉಪಸಮರದಲ್ಲಿ ಕಾಂಗ್ರೆಸ್ ಸೋಲಿಗೆ ನೈತಿಕ ಹೊಣೆ ಹೊತ್ತು ಇವರು ಉಸ್ತುವಾರಿ ಸ್ಥಾನದಿಂದ ಹಿಂಸರಿಯಲು ನಿರ್ಧರಿಸಿದ್ಧಾರೆ. ತಾನು ರಾಜೀನಾಮೆ ಕೊಡಲು ನಿರ್ಧರಿಸಿರುವುದಾಗಿ ಕೆಸಿವಿ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟ ಬಳಿಕ ಕೆಸಿ ವೇಣುಗೋಪಾಲ್ ಅವರು ಮಲ್ಲಿಕಾರ್ಜುನ ಖರ್ಗೆಯೊಂದಿಗೆ ಚರ್ಚೆ ಮಾಡಿದ್ದರು. ಅವರ ಅಭಿಪ್ರಾಯ ಪಡೆದು ಇಂದು ಅಥವಾ ನಾಳೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅವರೂ ಕೂಡ ರಾಜೀನಾಮೆ ಪತ್ರ ಕೊಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಸಿದ್ದರಾಮಯ್ಯ-ದಿನೇಶ್​ ರಾಜೀನಾಮೆ ಅಂಗೀಕರಿಸುವಂತೆ ರಾಜ್ಯ ನಾಯಕರಿಂದ ಹೈಕಮಾಂಡ್​ ಮೇಲೆ ಒತ್ತಡ

ಮತ್ತೊಂದು ಮೂಲದ ಪ್ರಕಾರ, ಕೆ.ಸಿ. ವೇಣುಗೋಪಾಲ್ ಅವರು ಬಹಳ ಹಿಂದೆಯೇ ರಾಜೀನಾಮೆ ಕೊಟ್ಟಿದ್ದರು. ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ನೆಮಕವಾದಾಗಲೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸಿ ಎಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬಳಿ ವೇಣುಗೋಪಾಲ್ ಬಿನ್ನವಿಸಿಕೊಂಡಿದ್ದರೆಂದು ಹೇಳಲಾಗುತ್ತಿದೆ.

ನಿನ್ನೆ ಉಪಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಸೋಲಿಗೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ವಿಪಕ್ಷ ನಾಯಕನ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ದಿನೇಶ್ ಗುಂಡೂರಾವ್ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಹಾಗೆಯೇ, ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಕೂಡ ರಾಜೀನಾಮೆ ಕೊಡುವ ನಿರ್ಧಾರಕ್ಕೆ ಬಂದಿದ್ದಾರೆ. ಸಿದ್ದರಾಮಯ್ಯ, ಖರ್ಗೆ ಹಾಗೂ ತಾವೆಲ್ಲಾ ಒಟ್ಟಿಗೆ ಕೆಲಸ ಮಾಡಿದ್ದೇವೆ. ಸಿದ್ದರಾಮಯ್ಯ ಜೊತೆಗೆ ತಾವೆಲ್ಲಾ ಇದ್ದೇವೆ ಎಂದು ಖಂಡ್ರೆ ತಮ್ಮ ಇರಾದೆ ಸ್ಪಷ್ಟಪಡಿಸಿದ್ಧಾರೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

First published: