ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕವಾದರೆ ಪಕ್ಷ ಸಂಘಟನೆಗೆ ಅನುಕೂಲ; ಎಚ್​ ಸಿ ಮಹದೇವಪ್ಪ

ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವುದರಿಂದ ಅಧಿಕಾರ ಹಂಚಿಕೆಯಾಗಲಿದ್ದು, ಇದರಿಂದ ಪಕ್ಷ ಬಲವರ್ಧನೆಗೆ ಸಹಾಯಕವಾಗಲಿದೆ

news18-kannada
Updated:January 22, 2020, 2:01 PM IST
ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕವಾದರೆ ಪಕ್ಷ ಸಂಘಟನೆಗೆ ಅನುಕೂಲ; ಎಚ್​ ಸಿ ಮಹದೇವಪ್ಪ
ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವುದರಿಂದ ಅಧಿಕಾರ ಹಂಚಿಕೆಯಾಗಲಿದ್ದು, ಇದರಿಂದ ಪಕ್ಷ ಬಲವರ್ಧನೆಗೆ ಸಹಾಯಕವಾಗಲಿದೆ
  • Share this:
ಮೈಸೂರು (ಜ.22): ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕಾತಿ ವಿಚಾರ ಕುರಿತಂತೆ ಕಾಂಗ್ರೆಸ್​ ನಾಯಕರು ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಕುರಿತು ಮಾತನಾಡಿರುವ ಕಾಂಗ್ರೆಸ್​ ಹಿರಿಯ ನಾಯಕ ಎಚ್​ ಸಿ ಮಹದೇವಪ್ಪ, ಹೈ ಕಮಾಂಡ್​ನ ಈ ನಿರ್ಧಾರವನ್ನು ಸ್ವಾಗತಿಸಿದ್ದು, ಇದರಿಂದ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ಬರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ನಗರದಲ್ಲಿ ಮಾತನಾಡಿದ ಅವರು, ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವುದರಿಂದ ಅಧಿಕಾರ ಹಂಚಿಕೆಯಾಗಲಿದ್ದು, ಇದರಿಂದ ಪಕ್ಷ ಬಲವರ್ಧನೆಗೆ ಸಹಾಯಕವಾಗಲಿದೆ ಎಂದರು.

ಇನ್ನು ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಆಗಿಲ್ಲ. ಯಾರಿಗೆ ಯಾವ ಹುದ್ದೆ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ನಿರ್ಧಾರವನ್ನು ಹೈ ಕಮಾಂಡ್​ ಪ್ರಕಟಿಸಲಿದೆ ಎಂದ ಅವರು, ಇದೇ ವೇಳೆ ತಾವು ಯಾವುದೇ ಹುದ್ದೆ ಆಕಾಂಕ್ಷಿಯಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.

ಇದನ್ನು ಓದಿ: ಭಯೋತ್ಪಾದಕರನ್ನು ಮಟ್ಟ ಹಾಕಲು ಒಂದಾಗೋಣ; ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಈಶ್ವರಪ್ಪ ಮನವಿ

ಇನ್ನು ದೇಶದಲ್ಲಿ ನಡೆಯುತ್ತಿರುವ ಸಿಎಎ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಇಡೀ ದೇಶದಲ್ಲಿ ಪ್ರಜಾಪ್ರಭುತ್ವವೇ ಬುಡಮೇಲಾಗುತ್ತಿದೆ. ಅದರ ವಿರುದ್ಧ ಹೋರಾಟ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಇದ್ದೇವೆ. ಆದ್ದರಿಂದ ಎಲ್ಲರು ಸಂಘಟಿತರಾಗಿ ಹೋರಾಟ ಮಾಡಬೇಕಿದೆ ಎಂದರು.
First published: January 22, 2020, 2:01 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading