• Home
  • »
  • News
  • »
  • state
  • »
  • PM Modi: ರಾಜ್ಯಕ್ಕೆ ಆಗಮಿಸ್ತಿರೋ ಪ್ರಧಾನಿ ಮುಂದೆ 15 ಪ್ರಶ್ನೆ ಇರಿಸಿದ ಕಾಂಗ್ರೆಸ್

PM Modi: ರಾಜ್ಯಕ್ಕೆ ಆಗಮಿಸ್ತಿರೋ ಪ್ರಧಾನಿ ಮುಂದೆ 15 ಪ್ರಶ್ನೆ ಇರಿಸಿದ ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಡಬಲ್ ಎಂಜಿನ್ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆಗಳನ್ನು ಕೇಳಿದೆ.

  • News18 Kannada
  • Last Updated :
  • Karnataka, India
  • Share this:

ಇದೇ ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಕೆಂಪೇಗೌಡರ ಪ್ರತಿಮೆ (Kempegowda Statude), ವಂದೇ ಭಾರತ್ ರೈಲು (Vande Bharat Railway) ಮತ್ತು ಏರ್​ಪೋರ್ಟ್​​ 2ನೇ ಟರ್ಮಿನಲ್ (Airport 2nd Terminal) ಉದ್ಘಾಟನೆ ಮಾಡಲಿದ್ದಾರೆ.  ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿಗಳಿಗೆ ಕಾಂಗ್ರೆಸ್ (Congress) ಸಾಲು ಸಾಲು ಪ್ರಶ್ನೆಗಳನ್ನು ಕೇಳಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಡಬಲ್ ಎಂಜಿನ್ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆಗಳನ್ನು ಕೇಳಿದೆ.


ಕಾಂಗ್ರೆಸ್ ಕೇಳಿರುವ ಪ್ರಶ್ನೆಗಳು ಹೀಗಿವೆ


1.ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಕಡೆ ತಲೆ ಹಾಕದ ನಿಮಗೆ ಈಗ ಚುನಾವಣೆ ಬಂದ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನೆರೆಯಿಂದಾಗಿ 2.62 ಲಕ್ಷ ಮನೆಗಳು, 1.5 ಲಕ್ಷ ಕಿ.ಮೀ ರಸ್ತೆಗಳು 30 ಸಾವಿರ ಸೇತುವೆಗಳು, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾಲಕಾ ಬೆಳೆ ನಾಶವಾಗಿದೆ. ಒಟ್ಟು 93,648 ಕೋಟಿ ರೂಪಾಯಿಯಷ್ಟು ನಷ್ಟವಾಗಿದ್ದು, ರಾಜ್ಯಕ್ಕೆ ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?


2.ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸುತ್ತೇವೆ ಎಂದಿದ್ದೀರಿ ನೆನಪಿದೆಯೆ? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಸ್ಮಾರ್ಟ್ ಸಿಟಿ, ಜಲ್ ಜೀವನ ಮಿಷನ್ , 2 ಕೋಟಿ ಉದ್ಯೋಗ, ರೈತರ ಆದಾಯ ಡಬಲ್ (2022 ಒಳಗೆ), ಎಲ್ಲರಿಗೂ ಸ್ವಂತ ಸೂರು (2022 ಒಳಗೆ) ಯಾವ ಒಂದು ಯೋಜನೆ ಸಂಪೂರ್ಣವಾಗಿದೆ ಹೇಳಿ?


3.ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ಜಿಎಸ್ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 2ನೇ ರಾಜ್ಯ ಎಂದು ನಿಮ್ಮದೇ ಸರ್ಕಾರ ಟ್ವಿಟ್ ಮಾಡಿತ್ತು. ಇದು ನಿಮ್ಮ ಸಾಧನೆ ಅಲ್ಲ, ಅದು ಈ ರಾಜ್ಯದ ಜನರ ಬೆವರಿನ ಪರಿಶ್ರಮ, ಆದರೆ ನೀವು ಕಲೆಹಾಕಿದ ಜಿಎಸ್ಟಿ ಹಣದಲ್ಲಿ ರಾಜ್ಯಗಳಿಗೆ ಹಂಚಿಕೆ ಆಗುವ ಅನುದಾನದ ಪಟ್ಟಿಯಲ್ಲಿ ರಾಜ್ಯಸ್ಥ ಎಷ್ಟನೇ ಸ್ಥಾನ ಇದೆ ಎಂದು ಹೇಳುತ್ತೀರಾ? ಆ ಮೂಲಕ ನಿಮ್ಮ ಸಾಧನೆ ಏನು ಎಂದು ಹೇಳುತ್ತೀರಾ?


4.ಮೊನ್ನೆಯಷ್ಟೇ ರಾಜ್ಯ ಪ್ರವಾಸ ಮಾಡಿ ಕಾಂಗ್ರೆಸ್‌ ಸರ್ಕಾರ ಮಾಡಿದ್ದ ಯೋಜನೆಗಳನ್ನು ಅನಾವರಣ ಮಾಡಿ ಕ್ಯಾಮೆರಾಗೆ ಪೋಸ್ ಕೊಟ್ಟು ಹೋದಿರಿ. ಈ ಸಂದರ್ಭದಲ್ಲಿ ಸಬ್ ಅರ್ಬನ್ ರೈಲಿಗೆ 40 ತಿಂಗಳು ಗಡವು ನೀಡಿದ್ದೀರಿ.  ಈ ಯೋಜನೆಗೆ ಕೇಂದ್ರ ಜಡುಗಡೆ ಮಾಡಬೇಕಾಗಿದ್ದ ಹಣ ಎಷ್ಟು? ಈವರೆಗೂ ಎಷ್ಟು ಬಿಡುಗಡೆ ಮಾಡಿದ್ದೀರಿ?


5.ನೀವು ಬಂದಾಗ ನಿಮ್ಮನ್ನು ಮೆಚ್ಚಿಸಲು ಬೆಂಗಳೂರು ನಗರಲ್ಲಿ ಸಿಂಗಾರ ಮಾಡಲು ರಾಜ್ಯ ಸರ್ಕಾರ 23 ಕೋಟ ವೆಚ್ಚದಲ್ಲಿ ರಸ್ತೆ ಹಾಕಿದರು. ನೀವು ರಾಜ್ಯ ಏಡುತ್ತಿದ್ದಂತೆ ರಸ್ತೆಯ ಡಾಂಬರು ಕೂಡ ಕಿತ್ತು ಬಂದವು, ಡಬಲ್ ಇಂಜನ್ ಸರ್ಕಾರದ ಈ ಮಹಾನ್ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯ ಏನು?


6.ಭಷ್ಟಾಚಾರದ ವಿರುದ್ಧ ಉದ್ದುದ್ದ ಭಾಷಣ ಬಣದು ನಾ ಖಾವೂಂಗಾ ನಾ ಖಾನೆದೂಂಗಾ ಎಂದ ನೀವು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ 40% ಕಮಿಷನ್ ಕುಲತ ದೂರು, ಖಣಜಖಂ ಸಂಸ್ಥೆ ನೀಡಿರುವ ದೂರು, ಬಿಡಲಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್' ಆತ್ಮಹತ್ಯೆ ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್‌ ಅವರ ದಯಾಮರಣ ಅರ್ಜಿ ಬಗ್ಗೆ ಬಾಯಿಗೆ ಬೀಗ ಜಡಿದು ಕೊಂಡಿರುವುದು ಏಕೆ?


7.ವರ್ಷಕ್ಕೆ 2 ಕೋಟಿ ಉದ್ಯೋಗ ಎಂದವರು, ಈಗ 70 ಸಾಏರ ನೇಮಕಾತಿಯನ್ನೇ ದೊಡ್ಡ ಸಾಧನೆ ಎಂದು ಪ್ರಚಾರ ಪಡೆಯುತ್ತಿಲ, ಪಿಎಸ್‌ಐ, ಶಿಕ್ಷಕರು, ಅರೋಗ್ಯ ಇಲಾಖೆ ಸೇಲದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಟಿಐ, ಇಡಿ, ಅದಾಯ ತೆಲಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದು ಮಾತ್ರವೇ?


ಇದನ್ನೂ ಓದಿ:  Murugha Swamy: ಹೆಣ್ಮಕ್ಕಳು ಸ್ವಾಮಿಗಳ ಬಳಿ ಹೋಗದ ಪರಿಸ್ಥಿತಿ ನಿರ್ಮಾಣ: ಶಾಸಕ ಶಾಮನೂರು ಶಿವಶಂಕರಪ್ಪ


8.ನಿಮ್ಮಣ್ಣ ಮುಖ್ಯಮಂತ್ರಿ ಕುರ್ಚಿಯನ್ನು 2500 ಕೋಟಿಗೆ, ಮಂತ್ರಿಸ್ಥಾನವನ್ನು 100 ಕೊಗೆ ಮಾರಾಟ ಮಾಡಲಾಗಿದೆ ಎಂದು ನಿಮ್ಮದೇ ಶಾಸಕರು ಹೇಳಿದ್ದಾರೆ. ನಿಮ್ಮ ಈ ಅಮೋಘ ಸಾಧನೆ ಬಗ್ಗೆ ಏನು ಹೇಳುತ್ತೀರಿ?


9.ಸಿಲಿಕಾನ್ ಸಿಟಿ, ಐಟಿ ರಾಜಧಾನಿ ಎಂದು ಮನ್ನಣಿ ಗಳಿಸಿದ್ದ ಬೆಂಗಳೂರು ನಗರ ನಿಮ್ಮ ಡಬಲ್ ಇಂಜನ್ ಆಡಳಿತದಲ್ಲಿ ಪಾಟರಿ, ಗಾರ್ಬೇಜ್ ಸಿಟಿ ಆದೆ, ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು? SHRINKING CITY


10.ಬೆಂಗಳೂಲಿನಲ್ಲಿ ಕಳೆದ ಎರಡು ವರ್ಷಗಳಿಂದ ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂಏ ಗಾಯಗೊಂಡಿದ್ದಾರೆ. ಇದರ ಜವಾಬ್ದಾಲಿಯನ್ನು ನಿಮ್ಮ ಡಬಲ್ ಇಂಜನ್ ಸರ್ಕಾರ


11.ನಾವು ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದೇವೆ. ಅದಕ್ಕೆ ಹೆದಲದ ನಿಮ್ಮ ಸರ್ಕಾರ ಬಜೆಟ್ ನಲ್ಲ ಯೋಜನೆಗೆ 1 ಸಾವಿರ ಕೋಟಿ ಎಂದು ಘೋಷಣಿ ಮಾಡಿತು, ಮೇಕೆದಾಟು ಯೋಜನೆ ಜಾಲ ವಿಚಾರ ಎಲ್ಲಿಯವರೆಗೂ


12.ಅದೇ ರೀತಿ ಮಹದಾಯಿ ವಿಚಾರದಲ್ಲೂ ರಾಜ್ಯ ಸರ್ಕಾರ 1 ಸಾವಿರ ಕೋಟಿ ರು ಅನುದಾನ ಘೋಷಣೆ ಮಾಡಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಒಟ್ಟು ನಾಲ್ಕು ಇಂಜನ್ ಸರ್ಕಾರ ನಿಮ್ಮದೇ ಇದೆ, ಮಹದಾಯಿ ಯೋಜನೆ ಜಾಲ ಯಾವಾಗ?


13ಕೋಏಡ್ ನಿಂದ ಸತ್ತವರಲ್ಲಿ ಎಷ್ಟು ಕುಟುಂಬಕ್ಕೆ ಫಲಹಾರ ನೀಡಿದ್ದೀರಿ?


14.ನಿಮ್ಮ ಈ ರಾಜ್ಯ ಪ್ರವಾಸದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡದೇ, ನಿಮ್ಮ ಡಬಲ್ ಇಂಜಿನ್ ಸರ್ಕಾರದ ಯಾವುದಾದರೂ ಐದು ಕೊಡುಗೆಗಳನ್ನು ಹೇಳಿ ಜನಲಂದ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಸಾಧ್ಯವೇ?


ಇದನ್ನೂ ಓದಿ: Murugha Swamy: ಮುರುಘಾ ಸ್ವಾಮಿ ಇಷ್ಟು ಕೀಳು ಮಟ್ಟಕ್ಕೆ ಇಳಿತಾರೆ ಅಂದುಕೊಂಡಿರಲಿಲ್ಲ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಿಡಿಕಿಡಿ


15.ನಾಡಪ್ರಭು ಕೆಂಪೇಗೌಡರು ಈ ನಗರ ಕಟ್ಟುವಾಗ ಎಲ್ಲಾ ಸಮುದಾಯದವಲಗೂ ಅನುಕೂಲ ಆಗಲೆಂದು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ಅದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಆದರೆ ನಿಮ್ಮ ಡಬಲ್ ಇಂಜನ್ ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸಲ?

Published by:Mahmadrafik K
First published: