Congress Tweet: ಹೆಣ ಕಂಡ್ರೆ ಓಡೋಡಿ ಬರೋ ಶೋಭಾ ಕರಂದ್ಲಾಜೆ ಸಮಸ್ಯೆಗಳಿಗೆ ಬಾಯಿ ಬಿಡಲ್ಲ ಯಾಕೆ?

ಹೆಣ ಕಂಡರೆ ಓಡೋಡಿ ಬರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ?’ ಎಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿ ಆಕ್ರೋಶ ಹೊರಹಾಕಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

  • Share this:
ಬೆಂಗಳೂರು (ಆ.07): ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ಧ ಕಾಂಗ್ರೆಸ್​  ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ. ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ ಮೇಲಿಂದ ಮೇಲೆ ಅನ್ಯಾಯವೆಸಗುತ್ತಿದೆ ಎಂದು ಕಾಂಗ್ರೆಸ್ (Congress) ಆಕ್ರೋಶ ವ್ಯಕ್ತಪಡಿಸಿದೆ. ಪತ್ರಿಕೆಯೊಂದರ ‘ರೈತರಿಗೂ ಬಡ್ಡಿ ಬರೆ’ ಎಂಬ ವರದಿಯ ತುಣುಕೊಂದನ್ನು  ಟ್ವೀಟ್ (Tweet) ಮಾಡಿರುವ ಕಾಂಗ್ರೆಸ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಹೆಣ ಕಂಡರೆ ಓಡೋಡಿ ಬರ್ತಾರೆ, ಸಮಸ್ಯೆ ಕೇಳಲ್ಲ ಯಾಕೆ?

‘ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ ಮೇಲಿಂದ ಮೇಲೆ ಅನ್ಯಾಯವೆಸಗುತ್ತಿದೆ. ನೆರೆ ಪರಿಹಾರವಿಲ್ಲ, ಗೊಬ್ಬರವೂ ಸಿಗುತ್ತಿಲ್ಲ, ಬೆಳೆ ಸಾಲಕ್ಕೂ ಪರದಾಟ, ಸಾಲದ ಮೇಲಿನ ಬಡ್ಡಿಯೂ ದುಬಾರಿ. ಬಿಜೆಪಿಗೆ ರೈತರ ಮೇಲಿರುವುದು ದ್ವೇಷವೇ, ತಾತ್ಸಾರವೇ? ಹೆಣ ಕಂಡರೆ ಓಡೋಡಿ ಬರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ?’ ಎಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿ ಆಕ್ರೋಶ ಹೊರಹಾಕಿದೆ.





ಇದನ್ನೂ ಓದಿ: DK Brothers: ಸಿದ್ದರಾಮೋತ್ಸವ ಬಳಿಕ ಅಖಾಡಕ್ಕಿಳಿದ ಅಣ್ತಮ್ಮಾಸ್! ಒಂದೇ ಕಲ್ಲಿಗೆ 2 ಹಕ್ಕಿ

ಬಿಜೆಪಿ ಭ್ರಷ್ಟೋತ್ಸವದಲ್ಲಿ ಲೂಟಿ

ನಿರುದ್ಯೋಗ ಹೋಗಲಾಡಿಸಲು, ಗ್ರಾಮೀಣ ಆರ್ಥಿಕತೆಯನ್ನು ಸಶಕ್ತಗೊಳಿಸಲು ಕಾಂಗ್ರೆಸ್ ಉದ್ಯೋಗ ಖಾತ್ರಿ ಎಂಬ ಕ್ರಾಂತಿಕಾರಿ ಯೋಜನೆ ಜಾರಿಗೊಳಿಸಿತ್ತು. ಕೋವಿಡ್ ಸಂದರ್ಭದಲ್ಲಿ ಜನರ ಸಂಪಾದನೆಯ ಆಸರೆಯಾಗಿದ್ದ ನರೇಗಾವನ್ನು ಬಿಜೆಪಿ ಭ್ರಷ್ಟೋತ್ಸವದಲ್ಲಿ ಲೂಟಿ ಯೋಜನೆಯಾಗಿಸಿದ ಬಿಜೆಪಿ ಸರ್ಕಾರ ಬಡವರ ಉದ್ಯೋಗದ ಆಸರೆಯನ್ನು ಕಿತ್ತುಕೊಂಡಿದೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

ಶೇ 40 ಕಮಿಷನ್ ಸೋಂಕು ಕೋವಿಡ್‌ಗಿಂತಲೂ ಅಪಾಯಕಾರಿ


ಜಾತಿವಾರು ನಿಗಮಗಳಲ್ಲಿ ಹೆಚ್ಚಿದ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಸರ್ಕಾರದಲ್ಲಿ ಶೇ 40 ಕಮಿಷನ್ ಭ್ರಷ್ಟಾಚಾರದ ಸೋಂಕು ಕೋವಿಡ್‌ಗಿಂತಲೂ ಅಪಾಯಕಾರಿಯಾಗಿ ವ್ಯಾಪಿಸಿದೆ ಎಂದು ಕೆಪಿಸಿಸಿ ಹರಿಹಾಯ್ದಿದೆ.

ನಿಗಮ, ಮಂಡಳಿಗಳಲ್ಲಿ ಬಿಜೆಪಿ ಭ್ರಷ್ಟೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಬಡವರ, ಹಿಂದುಳಿದವರ ಏಳಿಗೆಯ ಬದಲು ಭ್ರಷ್ಟರ ಏಳಿಗೆಯಾಗುತ್ತಿದೆ. ಬಡವರನ್ನು ತಲುಪಬೇಕಾದ ನೂರಾರು ಕೋಟಿ ಅನುದಾನ ಬಿಜೆಪಿ ಭ್ರಷ್ಟರ ತಿಜೋರಿ ಸೇರುತ್ತಿದೆ’ ಎಂದು ವಾಗ್ದಾಳಿ ನಡೆಸಿದೆ.

ಸಮಾಜ ಕಲ್ಯಾಣ ಇಲಾಖೆ ಸ್ವಯಂ ಕಲ್ಯಾಣ ಇಲಾಖೆಯಾಗಿದೆ. ಗಂಗಾ ಕಲ್ಯಾಣದಲ್ಲಿ ಭ್ರಷ್ಟರ ಕಲ್ಯಾಣ ಆಗುತ್ತಿರುವುದರಲ್ಲಿ ಆಶ್ಚರ್ಯವಿಲ್ಲ. ಇಲಾಖಾ ತನಿಖೆಯಲ್ಲಿ ಮೇಲ್ನೋಟದಲ್ಲೇ ಹಗರಣ ಸಾಬೀತಾಗಿದೆ. ಇದನ್ನು ಉನ್ನತ ತನಿಖೆಗೆ ವಹಿಸದೆ ಸರ್ಕಾರ ಹಿಂದೇಟು ಹಾಕುತ್ತಾ ದಲಿತರಿಗೆ ಅನ್ಯಾಯವೆಸಗುತ್ತಿದೆ’ ಎಂದು ಟ್ವೀಟ್‌ ಮಾಡಿದೆ.

ಬಿಜೆಪಿಯಿಂದ ಪರಿಹಾರದಲ್ಲೂ ತಾರತಮ್ಯ- M B ಪಾಟೀಲ್​


 ಮಳೆಯಿಂದ ನೆರೆ ಉಂಟಾಗಿ ಬೆಳೆ, ಮನೆ ಮತ್ತು ಸಾರ್ವಜನಿಕ ಮೂಲಸೌಲಭ್ಯಕ್ಕೆ ಹಾನಿಯಾಗಿದೆ. ಈ ಕುರಿತು ತುರ್ತು ಪರಿಹಾರ ನೀಡಲು ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 200 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ಅನುದಾನವನ್ನು ಹಂಚಿಕೆ ಸಹ ಮಾಡಲಾಗಿದೆ. ಆದರೆ, ಇದರಲ್ಲಿ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿರುವುದು ಆಶ್ಚರ್ಯ ತಂದಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ ಬಿ ಪಾಟೀಲ್​ ತಿಳಿಸಿದ್ದಾರೆ.




ವಿಜಯಪುರ ಜಿಲ್ಲೆಗೆ ಅಭಿವೃದ್ಧಿ ಕಾರ್ಯಗಳ ಅನುದಾನ ಬಿಡುಗಡೆ ಮಾಡುವಲ್ಲಿ ಸದಾ ತಾರತಮ್ಯ ತೋರುತ್ತಿರುವ ಬಿಜೆಪಿ ಸರ್ಕಾರ, ಇದೀಗ ನೆರೆ ಹಾವಳಿಯಂತಹ ಗಂಭೀರ ವಿಷಯದಲ್ಲಿಯೂ ತಾರತಮ್ಯ ತೋರಿದೆ. ಬಿಜೆಪಿ ಸರ್ಕಾರದ ಈ ಭಾಗದ ಮಂತ್ರಿಗಳಿಗೆ ಕಿಂಚಿತ್ತು ಮಾನ, ಮರ್ಯಾದೆ ಇದ್ದರೆ, ತಕ್ಷಣ ಜಿಲ್ಲಾಧಿಕಾರಿಗಳಿಂದ ಜಿಲ್ಲೆಯಲ್ಲಿ ಮಳೆಯಿಂದ, ನೆರೆಯಿಂದ ಹಾನಿಯಾಗಿರುವ ಬಗ್ಗೆ ಮಾಹಿತಿ ಪಡೆಯಬೇಕು ಎಂದಿದ್ದಾರೆ.

Published by:Pavana HS
First published: