ಕರ್ನಾಟಕದ ಕೊರೋನಾ ಅಕ್ರಮದ ಬಗ್ಗೆ ಸಿನಿಮಾವನ್ನೇ ಮಾಡಬಹುದು; ಡಿ.ಕೆ. ಶಿವಕುಮಾರ್ ಲೇವಡಿ

ಕೊರೊನಾ ಸಂದರ್ಭದಲ್ಲಿ ಎಲ್ಲಾ ವ್ಯವಸ್ಥೆ ಬದಲಾಗಿದೆ. ಮಂತ್ರಿಗಳನ್ನು ಬದಲಾವಣೆ ಮಾಡಬೇಕಿತ್ತು. ಆದರೆ ಯಡಿಯೂರಪ್ಪ ಅಧಿಕಾರಿಗಳನ್ನು ಬದಲಿಸಿದ್ದಾರೆ. ಯಡಿಯೂರಪ್ಪ ಅಸಹಾಯಕರಾಗಿದ್ದಾರೆ. ಸರ್ಕಾರ ತನ್ನ ವೈಫಲ್ಯ ಮುಚ್ಚಿಡಲು ಪ್ರಯತ್ನಿಸುತ್ತಿದೆ. ಎಂದು ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ.

ಡಿ.ಕೆ. ಶಿವಕುಮಾರ್

ಡಿ.ಕೆ. ಶಿವಕುಮಾರ್

  • Share this:
ನವದೆಹಲಿ (ಆ. 17): ಕರ್ನಾಟಕದಲ್ಲಿ ನಡೆದಿರುವ ಕೊರೋನಾ ಅಕ್ರಮದ ಬಗ್ಗೆ ಒಂದು ಸಿನಿಮಾವನ್ನೇ ಮಾಡಬಹುದು. ಜನರು ಸೈಕಲ್ ಮೇಲೆ ಹೆಣ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಕ್ಕೆ ಗೌರವಯುತವಾಗಿ ಅಂತಿಮ ಸಂಸ್ಕಾರ ನಡೆಸಲು ಸಾಧ್ಯವಿಲ್ಲವೇ? ಇದರಿಂದ ದೇಶದ ಗೌರವವೇ ಹಾಳಾಯಿತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿ ಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ಡಿ.ಕೆ. ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ನಾಯಕರ ಭೇಟಿಗಾಗಿ ದೆಹಲಿಗೆ ಬಂದಿದ್ದೇನೆ. ಹೈಕಮಾಂಡಿಗೆ ನಾಲ್ಕೈದು ತಿಂಗಳ ವರದಿ ಸಲ್ಲಿಸಲಿದ್ದೇನೆ. ಝೂಮ್ ಮೀಟಿಂಗ್ ಮುಖಾಂತರ ನಾಯಕರನ್ನು ಭೇಟಿ ಮಾಡುತ್ತೇನೆ. ರಾಹುಲ್ ಗಾಂಧಿ ಕೂಡ ಸೋನಿಯಾ ಗಾಂಧಿ ಮನೆಯಲ್ಲೇ ಇದ್ದಾರೆ. ಭೇಟಿ ಮಾಡೋಣ ಎಂದು ಕರೆಸಿದ್ದಾರೆ. ಆದರೆ, ಝೂಮ್ ಮೂಲಕ ಚರ್ಚೆ ನಡೆಸಲಿದ್ದೇನೆ. ನಾನು ಎಲ್ಲ ಕಡೆ ತಿರುಗುತ್ತಿರುತ್ತೇನೆ. ಹೀಗಾಗಿ, ನನ್ನಿಂದ ಅವರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವಿಡಿಯೋ ಕಾಲ್ ಮೂಲಕ ಚರ್ಚೆ ನಡೆಸಲಿದ್ದೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Rain: ಕೊಡಗು, ಕರಾವಳಿ, ಉತ್ತರ ಕರ್ನಾಟಕದಲ್ಲಿ 3 ದಿನ ಭಾರೀ ಮಳೆ; ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

ಡಿ.ಜೆ. ಹಳ್ಳಿ- ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರಿಗೆ ಅಧಿಕಾರಿಗಳ ಮೇಲೆ ವಿಶ್ವಾಸವಿಲ್ಲ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕಮಿಷನರ್ ಮೇಲೆ ತನಿಖೆ ಮಾಡುತ್ತಿದ್ದಾರೆ. ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ತನಿಖೆ ಮಾಡಲು ಹೊರಟಿದ್ದಾರೆ. ಇದಕ್ಕಿಂತ ಇನ್ನೊಂದು ದುರಂತ ಇನ್ನಿಲ್ಲ. ಸರ್ಕಾರದ ವೈಫಲ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ. ಸರ್ಕಾರ ತನ್ನ ವೈಫಲ್ಯ ಮುಚ್ಚಿಡಲು ಪ್ರಯತ್ನಿಸುತ್ತಿದೆ. ಅಧಿಕಾರಿಗಳನ್ನೇ ಒಳಗೆ ಬಿಡಲ್ಲ ಅಂದರೆ ಏನು? ಎಲ್ಲಿದೆ ಸರ್ಕಾರ? ಯಾರದು ನಾಯಕತ್ವ? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಎಲ್ಲಾ ವ್ಯವಸ್ಥೆ ಬದಲಾಗಿದೆ. ಮಂತ್ರಿಗಳನ್ನು ಬದಲಾವಣೆ ಮಾಡಬೇಕಿತ್ತು. ಆದರೆ ಯಡಿಯೂರಪ್ಪ ಅಧಿಕಾರಿಗಳನ್ನು ಬದಲಿಸಿದ್ದಾರೆ. ಯಡಿಯೂರಪ್ಪ ಅಸಹಾಯಕರಾಗಿದ್ದಾರೆ. ಡಿ.ಜೆ. ಹಳ್ಳಿ ಪ್ರಕರಣದಲ್ಲಿ ಯಾವ ರಾಜಕೀಯವೂ ಇಲ್ಲ. ಸರ್ಕಾರ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾರ್ಪೊರೇಟರ್​ಗಳಿಗೂ ಗಲಭೆಗೂ ಸಂಬಂಧ ಇಲ್ಲ. ಪ್ರಸನ್ನ ಕುಮಾರ್ -ಅಖಂಡ ಶ್ರೀನಿವಾಸ ಮೂರ್ತಿ ನಡುವೆ ಕೂಡ ದ್ವೇಷವಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Karnataka Dam Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕೊರೋನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಲೂಟಿ ಆಗಿದೆ ಅಂತ ನಾನು ಹೇಳುತ್ತಿಲ್ಲ. ಈ ಬಗ್ಗೆ ಮಾಧ್ಯಮದಲ್ಲಿ ದಾಖಲೆ ಸಮೇತ ವರದಿ ಬಂದಿದೆ. ಈ ಬಗ್ಗೆ ಒಂದು ಸಿನಿಮಾವನ್ನೇ ಮಾಡಬಹುದು. ಬಳ್ಳಾರಿಯಲ್ಲಿ ಹೆಣ ಬಿಸಾಕಿದರು, ಬೆಳಗಾವಿಯಲ್ಲಿ ಸೈಕಲ್ ಮೇಲೆ ಹೆಣ ಸಾಗಿಸಿದರು. ಇದರಿಂದ ದೇಶದ ಗೌರವ ಎಲ್ಲಿಗೆ ಬಂತು? ಬಿಜೆಪಿ ಆಡಳಿತದಲ್ಲಿ ದೇಶದ ಗೌರವ ಹಾಳಾಯಿತು. ನಿಮ್ಮ ಹೆಣ, ನಮ್ಮ ಹೆಣ ಹೀಗಾಗಿದ್ದರೆ ಸಹಿಸುತ್ತಿದ್ದೆವಾ? ಸರ್ಕಾರಕ್ಕೆ ಗೌರವಯುತ ಅಂತಿಮ ಸಂಸ್ಕಾರ ಮಾಡಲು ಸಾಧ್ಯವಿಲ್ಲವೇ? ಎಂದು ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸೈಕಲ್ ಮೇಲೆ ಹೆಣ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ವಿರುದ್ಧ ಹರಿಹಾಯ್ದ ಡಿ.ಕೆ. ಶಿವಕುಮಾರ್, ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಇರಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದರೆ, ಬೆಳಗಾವಿಯಲ್ಲಿ ಸೈಕಲ್ ಮೇಲೆ ಹೆಣ ಸಾಗಿಸುವಂತಹ ಪರಿಸ್ಥಿತಿ ಇದೆ. ಇದಕ್ಕೆ ಏನಂತೀರಿ? ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಹರಿಹಾಯ್ದಿದ್ದಾರೆ.
Published by:Sushma Chakre
First published: