Bangalore Coronavirus: ಕೊರೋನಾ ಚಿಕಿತ್ಸೆಗೆ ಬೆಡ್ ಮೀಸಲಿಡುವ ವಿಚಾರ; ನಾಳೆ ಖಾಸಗಿ ಆಸ್ಪತ್ರೆಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ

Bangalore Coronavirus Updates: ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಮೆಡಿಕಲ್ ಕಾಲೇಜುಗಳು 5,000 ಬೆಡ್ ನೀಡುವ ಭರವಸೆ ನೀಡಿದ್ದವು. ಆದರೆ, ಅದರಲ್ಲಿ 2,500 ಬೆಡ್ ಮಾತ್ರ ನೀಡಿರುವ ಖಾಸಗಿ ಆಸ್ಪತ್ರೆಗಳ ಜೊತೆಗೆ ಸರ್ಕಾರ ಮಾತುಕತೆ ನಡೆಸಲಿದೆ.

news18-kannada
Updated:July 17, 2020, 7:53 PM IST
Bangalore Coronavirus: ಕೊರೋನಾ ಚಿಕಿತ್ಸೆಗೆ ಬೆಡ್ ಮೀಸಲಿಡುವ ವಿಚಾರ; ನಾಳೆ ಖಾಸಗಿ ಆಸ್ಪತ್ರೆಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ
ಬಿಎಸ್​ ಯಡಿಯೂರಪ್ಪ
  • Share this:
ಬೆಂಗಳೂರು (ಜು. 17): ಬೆಂಗಳೂರಿನಲ್ಲಿ ಕೊರೋನಾ ಅಟ್ಟಹಾಸ ಹೆಚ್ಚಾಗಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್​ಗಳನ್ನು ಮೀಸಲಿಡಬೇಕೆಂದು ರಾಜ್ಯ ಸರ್ಕಾರ ಸೂಚಿಸಿತ್ತು. ಆದರೆ, ಮಾತು ಕೊಟ್ಟಂತೆ ಖಾಸಗಿ ಆಸ್ಪತ್ರೆಗಳು ಬೆಡ್ ಕೊಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾನೇ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆಗೆ ಮುಂದಾಗಿದ್ದಾರೆ.

ನಾಳೆ ಖಾಸಗಿ ಆಸ್ಪತ್ರೆಗಳ ಮಾಲೀಕರ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ನಾಳೆ ಸಂಜೆ‌ 4ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಬೆಡ್ ಪಡೆಯುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಮೆಡಿಕಲ್ ಕಾಲೇಜುಗಳು 5,000 ಬೆಡ್ ನೀಡುವ ಭರವಸೆ ನೀಡಿದ್ದವು. ಆದರೆ, ಅದರಲ್ಲಿ 2,500 ಬೆಡ್ ಮಾತ್ರ ನೀಡಿರುವ ಖಾಸಗಿ ಆಸ್ಪತ್ರೆಗಳ ಜೊತೆಗೆ ಸರ್ಕಾರ ಮಾತುಕತೆ ನಡೆಸಲಿದೆ.

5 ಸಾವಿರ ಬೆಡ್​ಗಳ ಬದಲಾಗಿ 2,500 ಬೆಡ್​ಗಳನ್ನು ಮಾತ್ರ ಖಾಸಗಿ ಆಸ್ಪತ್ರೆಗಳು ಮೀಸಲಿಟ್ಟಿವೆ. ಈ ಹಿನ್ನೆಲೆಯಲ್ಲಿ ಬಾಕಿ ಉಳಿದ 2500 ಬೆಡ್ ಗಳ ಪಡೆಯುವ ಬಗ್ಗೆ ಚರ್ಚೆ ನಡೆಯಲಿದೆ. ಒಂದು ವೇಳೆ ಕೇಳಿದಷ್ಟು ಕೊಟ್ಟಿಲ್ಲ ಅಂದರೆ ಸಿಎಂ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ. ಮೂಲಭೂತ ಸೌಕರ್ಯ ಸ್ಥಗಿತ ಸೇರಿದಂತೆ ಕಠಿಣ ಕಾನೂನು ಕ್ರಮದ ಬಗ್ಗೆ ಎಚ್ಚರಿಕೆ ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಜನಸಂಖ್ಯೆ ಕೋಟಿಗೂ ಹೆಚ್ಚು; ವೆಂಟಿಲೇಟರ್ಸ್ 500, ಆಕ್ಸಿಜನ್ ಬೆಡ್ ಸಾವಿರ; ಇದು ಬೆಂಗಳೂರು ದುರವಸ್ಥೆ

ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಈ ಹಿಂದೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದರು.

ಸರ್ಕಾರ ಸೇರಿ ಪ್ರತಿಯೊಬ್ಬರೂ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿರುವಾಗ ಕೆಲವರು ಮಾತ್ರ ಹಾಸಿಗೆಗಳನ್ನು ನೀಡದೇ ಸತಾಯಿಸುತ್ತಿರುವುದು ಸರಿಯಲ್ಲ. ಇವರಿಗೆ ಕಾನೂನಿನ ಬಿಸಿ ಮುಟ್ಟಿಸಬೇಕಾಗಿದೆ ಎಂದ ಅವರು, ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರಹಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಲಾಗುತ್ತಿದೆ. ಅದರಲ್ಲೂ ಉಸಿರಾಟದ ತೊಂದರೆ, ಮತ್ತಿತರ ತುರ್ತು ಸಮಸ್ಯೆಗಳಿರುವ ಹಿರಿಯ ನಾಗರಿಕರಿಗೆ ಅಂಥ ಕಡೆ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ಅಂಶವನ್ನು ಡಿಸಿಎಂ ಅಶ್ವಥ್ ನಾರಾಯಣ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು.
Published by: Sushma Chakre
First published: July 17, 2020, 7:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading