ಹುಬ್ಬಳ್ಳಿ (ಜು. 7): ಹುಬ್ಬಳ್ಳಿಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿರುವ 33 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಸೋಂಕಿತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೈಗಾರಿಕಾ ಭದ್ರತಾ ಪಡೆಯ ಐವತ್ತು ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ಓರ್ವ ಕಾನ್ಸ್ಟೇಬಲ್ಗೆ ಸೋಂಕು ದೃಢಪಟ್ಟಿದೆ. ಇನ್ನುಳಿದವರ ವರದಿ ನೆಗೆಟಿವ್ ಬಂದಿದೆ.
ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಸಂಪರ್ಕಿತರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆತಂಕ ಮನೆಮಾಡಿದೆ.
ಇನ್ನೊಂದೆಡೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಇನ್ನೊಬ್ಬ ಕಾನ್ಸ್ಟೇಬಲ್ಗೆ ಕಳ್ಳತನದ ಆರೋಪಿಯಿಂದ ಕೊರೋನಾ ಸೋಂಕು ತಗುಲಿದೆ. ಕಳ್ಳತನ ಅರೋಪದಡಿ ಬಂಧಿಸಲಾಗಿದ್ದ ವ್ಯಕ್ತಿಯಿಂದ ಈಗಾಗಲೇ ಓರ್ವ ಪೊಲೀಸ್ ಕಾನ್ಸ್ಟೇಬಲ್ಗೆ ಕೊರೊನಾ ಬಂದಿತ್ತು. ಈಗ ಮತ್ತೊಬ್ಬ ಕಾನ್ಸ್ಟೇಬಲ್ಗೆ ಕೊರೋನಾ ಸೋಂಕು ಖಚಿತವಾಗಿದ್ದು, ಉಪನಗರ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಇದನ್ನೂ ಓದಿ: Bangalore Coronavirus: ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣೆಯ 12 ಸಿಬ್ಬಂದಿಗೆ ಕೊರೋನಾ!
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ