• Home
  • »
  • News
  • »
  • state
  • »
  • Karnataka Dams Water Level: ಕಡಿಮೆ ಆಗಿದೆ ಜಲಾಶಯಗಳ ಒಳಹರಿವು, ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

Karnataka Dams Water Level: ಕಡಿಮೆ ಆಗಿದೆ ಜಲಾಶಯಗಳ ಒಳಹರಿವು, ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Dam Water Level: ರಾಜ್ಯದ ಬಹುತೇಕ ಜಲಾಶಯಗಳು ಈ ವರ್ಷ ಭರ್ತಿಯಾಗಿದ್ದು, ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಅನುಕೂಲವಾಗಲಿದೆ.

  • Share this:

ರಾಜ್ಯದಲ್ಲಿ ಮಳೆ (Rain) ಕಡಿಮೆಯಾಗಿದ್ದು, ಚಳಿಗಾಲ (winter) ಆರಂಭವಾಗಿದೆ. ಹಾಗಾದರೆ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ ಬಳಿಕ ಡ್ಯಾಂಗಳಲ್ಲಿ (Dams) ನೀರಿನ ಮಟ್ಟ ಎಷ್ಟಿದೆ ಅನ್ನೋದನ್ನ ಇಲ್ಲಿ ನೋಡೋಣ. ಈ ವರ್ಷ ವರುಣನ ಕೃಪೆ ರಾಜ್ಯದ ಮೇಲೆ ಉತ್ತಮವಾಗಿದ್ದು, ಈ ಹಿನ್ನೆಲೆಯಿಂದಾಗಿ ಜಲಾಶಯಗಳು ತುಂಬಿ ಹರಿದಿವೆ. ಈಗ ಕೆಲ ದಿನಗಳಿಂದ ಹೊರಹರಿವು ಹೆಚ್ಚಾಗಿ ಡ್ಯಾಂಗಳಲ್ಲಿ ನೀರಿನ ಮಟ್ಟ ಕೊಂಚ ತಗ್ಗುತ್ತಿವೆ. ರಾಜ್ಯದ ಬಹುತೇಕ ಜಲಾಶಯಗಳು ಈ ವರ್ಷ ಭರ್ತಿಯಾಗಿದ್ದು, ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ (Agricultural Activities) ಮುಂಬರುವ ದಿನಗಳಲ್ಲಿ ಅನುಕೂಲವಾಗಲಿದೆ.


ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.
ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ. .


ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (15 -11-2022 ರಂತೆ)
ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 47.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 49.45 ಟಿಎಂಸಿ
ಇಂದಿನ ಒಳಹರಿವು - 3,706 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6,981 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 99 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 97.62 ಟಿಎಂಸಿ
ಇಂದಿನ ಒಳಹರಿವು - 4,228 ಕ್ಯೂಸೆಕ್ಸ್​
ಇಂದಿನ ಹೊರಹರಿವು - 8,296 ಕ್ಯೂಸೆಕ್ಸ್​


ಕಬಿನಿ ಜಲಾಶಯ - Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 16.26 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 19.52 ಟಿಎಂಸಿ
ಇಂದಿನ ಒಳಹರಿವು - 541 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,500 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ - Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.31 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 104.37 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,025 ಕ್ಯೂಸೆಕ್ಸ್​


ಭದ್ರಾ ಜಲಾಶಯ - Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 68.14 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 71.12 ಟಿಎಂಸಿ
ಇಂದಿನ ಒಳಹರಿವು- 125 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3,088 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ - Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 50.69 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 44.83 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 4,516 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ - Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 36.55 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 33.15 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,716 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ - Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 33.32 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 25.93 ಟಿಎಂಸಿ
ಇಂದಿನ ಒಳಹರಿವು - 753 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 2,800 ಕ್ಯೂಸೆಕ್ಸ್​


ಇದನ್ನೂ ಓದಿ: ಹೆಬ್ಬಾವು, ಕಾಳಿಂಗ, ನಾಗರ ಎಲ್ಲಾ ಹಾವುಗಳಿಗೂ ಇವರೇ ಫ್ರೆಂಡ್!


ವರಾಹಿ ಜಲಾಶಯ - Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31 ಟಿಎಂಸಿ
ಇಂದಿನ ನೀರಿನ ಮಟ್ಟ- 20.52 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 18.07 ಟಿಎಂಸಿ
ಇಂದಿನ ಒಳಹರಿವು - 66 ಕ್ಯೂಸೆಕ್ಸ್​
ಇಂದಿನ ಹೊರಹರಿವು - 77 ಕ್ಯೂಸೆಕ್ಸ್​


ಹಾರಂಗಿ ಜಲಾಶಯ - Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 5.14 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.09 ಟಿಎಂಸಿ
ಇಂದಿನ ಒಳಹರಿವು - 60 ಕ್ಯೂಸೆಕ್ಸ್​
ಇಂದಿನ ಹೊರಹರಿವು - 416 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ - Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 123.53 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 134.3 ಟಿಎಂಸಿ
ಇಂದಿನ ಒಳಹರಿವು - 81 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,704 ಕ್ಯೂಸೆಕ್ಸ್


ಸೂಪಾ ಜಲಾಶಯ - Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 101.63 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 110.56 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,040 ಕ್ಯೂಸೆಕ್ಸ್​


ಇದನ್ನೂ ಓದಿ: ಮತದಾರರ ಮಾಹಿತಿ ಕಳವು; ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆ


ನಾರಾಯಣಪುರ ಜಲಾಶಯ - Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 24.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 30ಟಿಎಂಸಿ
ಇಂದಿನ ಒಳಹರಿವು - 843 ಕ್ಯೂಸೆಕ್ಸ್​
ಇಂದಿನ ಹೊರಹರಿವು - 9,620 ಕ್ಯೂಸೆಕ್ಸ್

Published by:Sandhya M
First published: