• Home
  • »
  • News
  • »
  • state
  • »
  • Karnataka Dams Water Level: ಮಳೆ ಕಡಿಮೆ ಆಗುತ್ತಿದ್ದಂತೆ ಇಳಿದ ಜಲಾಶಯಗಳ ಒಳಹರಿವು, ನಿಮ್ಮ ಊರಿನ ಡ್ಯಾಂ ನೀರಿನ ಮಟ್ಟ ಎಷ್ಟಿದೆ ನೋಡಿ

Karnataka Dams Water Level: ಮಳೆ ಕಡಿಮೆ ಆಗುತ್ತಿದ್ದಂತೆ ಇಳಿದ ಜಲಾಶಯಗಳ ಒಳಹರಿವು, ನಿಮ್ಮ ಊರಿನ ಡ್ಯಾಂ ನೀರಿನ ಮಟ್ಟ ಎಷ್ಟಿದೆ ನೋಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Dam Water Level: ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ

  • Share this:

ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿ, ಚಳಿ ಕೂಡ ಆರಂಭವಾಗಿದೆ. ಆದರೆ ಮೂರು ದಿನಗಳಿಂದ ಬೆಂಗಳೂರಿನಲ್ಲಿ (Bengaluru Rains) ಮಾತ್ರ ಬಿಟ್ಟು ಬಿಡದೇ ಮಳೆ ಸುರಿಯುತ್ತಲೇ ಇದೆ. ಇನ್ನು ಹಲವೆಡೆ ಮೋಡ ಕವಿದ (Karnataka Weather Update) ವಾತಾವರಣವಿದ್ದು, ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ವರದಿ ಮಾಡಿದೆ. ಈ ವರ್ಷ ವರುಣನ ಕೃಪೆ ರಾಜ್ಯದ ಮೇಲೆ ಉತ್ತಮವಾಗಿದ್ದು, ಈ ಹಿನ್ನೆಲೆಯಿಂದಾಗಿ ಜಲಾಶಯಗಳು (Karnataka Dams Water Level) ತುಂಬಿ ಹರಿದಿವೆ. ಸ್ವಲ್ಪ ದಿನದ ಹಿಂದೆ ಮಳೆ ಪ್ರಮಾಣ ಇಳಿಕೆಯಾಗಿದ್ದರಿಂದ, ಸಹಜವಾಗಿಯೇ ಜಲಾಶಯಗಳ ಒಳಹರಿವಿನ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿದ್ದು ಅದರಂತೆ ಹೊರಹರಿವಿನ ಪ್ರಮಾಣದಲ್ಲೂ ನಿಧಾನವಾಗಿ ಇಳಿಕೆಯಾಗಿತ್ತು.


ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಅನುಕೂಲವಾಗಲಿದೆ.


ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿ
ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.


ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ


ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (04-11-2022 ರಂತೆ)
ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 48.95 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 49.45 ಟಿಎಂಸಿ
ಇಂದಿನ ಒಳಹರಿವು - 7,203ಕ್ಯೂಸೆಕ್ಸ್​
ಇಂದಿನ ಹೊರಹರಿವು - 5,379 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 103.82 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 99.51 ಟಿಎಂಸಿ
ಇಂದಿನ ಒಳಹರಿವು - 3336 ಕ್ಯೂಸೆಕ್ಸ್​
ಇಂದಿನ ಹೊರಹರಿವು - 8912 ಕ್ಯೂಸೆಕ್ಸ್​


ಕಬಿನಿ ಜಲಾಶಯ - Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 17.80 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 19.52 ಟಿಎಂಸಿ
ಇಂದಿನ ಒಳಹರಿವು - 243 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,050 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ - Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 111.16 ಟಿಎಂಸಿ
ಇಂದಿನ ಒಳಹರಿವು- 5,609 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5,609 ಕ್ಯೂಸೆಕ್ಸ್​


ಭದ್ರಾ ಜಲಾಶಯ - Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 71.12 ಟಿಎಂಸಿ
ಇಂದಿನ ಒಳಹರಿವು- 1,488 ಕ್ಯೂಸೆಕ್ಸ್​
ಇಂದಿನ ಹೊರಹರಿವು -2,391 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ - Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 48.35 ಟಿಎಂಸಿ
ಇಂದಿನ ಒಳಹರಿವು - 342 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 187 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ - Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ -37.66 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 35.59 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 394 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ - Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 35.41 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 26.18 ಟಿಎಂಸಿ
ಇಂದಿನ ಒಳಹರಿವು - 1429 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 3000 ಕ್ಯೂಸೆಕ್ಸ್​


ಇದನ್ನೂ ಓದಿ: ಪ್ರತಿ ಟನ್ ಕಬ್ಬಿನ ಬೆಲೆ ನಿಗದಿ ವಿಚಾರ; ರೈತರು ಹಾಗೂ ಸರ್ಕಾರದ ನಡುವೆ ಸಂಘರ್ಷ, ಮತ್ತೆ ಉಗ್ರ ಹೋರಾಟದ ಎಚ್ಚರಿಕೆ!


ವರಾಹಿ ಜಲಾಶಯ - Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31 ಟಿಎಂಸಿ
ಇಂದಿನ ನೀರಿನ ಮಟ್ಟ- 21.67 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-18.36 ಟಿಎಂಸಿ
ಇಂದಿನ ಒಳಹರಿವು - 39 ಕ್ಯೂಸೆಕ್ಸ್​
ಇಂದಿನ ಹೊರಹರಿವು - 750 ಕ್ಯೂಸೆಕ್ಸ್​


ಹಾರಂಗಿ ಜಲಾಶಯ - Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.35 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.87 ಟಿಎಂಸಿ
ಇಂದಿನ ಒಳಹರಿವು - 514 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2000 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ - Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 129.21 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 136.3 ಟಿಎಂಸಿ
ಇಂದಿನ ಒಳಹರಿವು - 1819 ಕ್ಯೂಸೆಕ್ಸ್​
ಇಂದಿನ ಹೊರಹರಿವು - 8618 ಕ್ಯೂಸೆಕ್ಸ್


ಸೂಪಾ ಜಲಾಶಯ - Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 103.44 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 112.89 ಟಿಎಂಸಿ
ಇಂದಿನ ಒಳಹರಿವು - 704 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2801 ಕ್ಯೂಸೆಕ್ಸ್​


ಇದನ್ನೂ ಓದಿ: ಶಾಸಕರ ಮನೆ ಬಳಿಯೇ ಕಳಪೆ ಕಾಮಗಾರಿ? ಹೀಗಾದ್ರೆ ಜನ ಸಾಮಾನ್ಯರ ಪಾಡೇನು?


ನಾರಾಯಣಪುರ ಜಲಾಶಯ - Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 29.57 ಟಿಎಂಸಿ
ಇಂದಿನ ಒಳಹರಿವು - 4179 ಕ್ಯೂಸೆಕ್ಸ್​
ಇಂದಿನ ಹೊರಹರಿವು - 10681 ಕ್ಯೂಸೆಕ್ಸ್

Published by:Sandhya M
First published: