• Home
  • »
  • News
  • »
  • state
  • »
  • Karnataka Dams Water Level: ಕಡಿಮೆಯಾಯ್ತು ಜಲಾಶಯಗಳ ಒಳಹರಿವು, ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

Karnataka Dams Water Level: ಕಡಿಮೆಯಾಯ್ತು ಜಲಾಶಯಗಳ ಒಳಹರಿವು, ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Karnataka Dam Water Level: ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ.

ಮುಂದೆ ಓದಿ ...
  • Trending Desk
  • Last Updated :
  • Karnataka, India
  • Share this:

ರಾಜ್ಯದ (State) ಕೆಲವು ಪ್ರದೇಶಗಳಲ್ಲಿ ನಾಲ್ಕೈದು ದಿನಗಳ ಹಿಂದೆ ಮತ್ತೆ ವರುಣನ (Rain) ಆರ್ಭಟ ಹೆಚ್ಚಾಗಿ ಹಲವು ಜಲಾಶಯಗಳಿಗೆ ಒಳ ಹರಿವಿನ ಪ್ರಮಾಣ ಏರಿತ್ತು. ಆದರೆ ಕಳೆದೆರಡು ದಿನಗಳಿಂದ ಮಳೆ ನಿಂತಿದ್ದು ಈಗ ಒಳಹರಿವು ಹಾಗೂ ಹೊರಹರಿವು ನಿಧಾನವಾಗಿ ತಗ್ಗುತ್ತಿದೆ. ಅಷ್ಟಕ್ಕೂ ಈ ಬಾರಿ ವಾಡಿಕೆಗಿಂತ ತುಸು ಹೆಚ್ಚಾಗಿಯೇ ಮಳೆಯಾಗಿದ್ದು ರಾಜ್ಯದ ಹಲವು ಪ್ರಮುಖ ಜಲಾಶಯಗಳೆಲ್ಲವೂ ಸಾಕಷ್ಟು ಭರ್ತಿಯಾಗಿವೆ. ಈ ಹಿಂದೆ ಹರಿದು ಬರುತ್ತಿದ್ದ ಜಲಾಶಯಗಳಿಗೆ (Dams)  ಒಳಹರಿವಿನ ಪ್ರಮಾಣಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಮಾಣವು ಗಮನಾರ್ಹವಾಗಿ ಕಡಿಮೆಯಾಗಿದ್ದು ಅದರಂತೆ ಹೊರಹರಿವಿನ ಪ್ರಮಾಣದಲ್ಲೂ ನಿಧಾನವಾಗಿ ಇಳಿಕೆ ಇರುವುದನ್ನು ಗಮನಿಸಬಹುದು.


ಸದ್ಯ, ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ.


ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.


ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.


ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (25-10-2022 ರಂತೆ)


ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 46.17 ಟಿಎಂಸಿ
ಇಂದಿನ ಒಳಹರಿವು - 10808 ಕ್ಯೂಸೆಕ್ಸ್​
ಇಂದಿನ ಹೊರಹರಿವು - 10551 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 105.78 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು - 14709 ಕ್ಯೂಸೆಕ್ಸ್​
ಇಂದಿನ ಹೊರಹರಿವು - 14709 ಕ್ಯೂಸೆಕ್ಸ್​


ಕಬಿನಿ ಜಲಾಶಯ - Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.13 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 19.24 ಟಿಎಂಸಿ
ಇಂದಿನ ಒಳಹರಿವು - 1826 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1725 ಕ್ಯೂಸೆಕ್ಸ್​


ಆಲಮಟ್ಟಿ ಜಲಾಶಯ - Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.48 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 121.61 ಟಿಎಂಸಿ
ಇಂದಿನ ಒಳಹರಿವು- 66528 ಕ್ಯೂಸೆಕ್ಸ್​
ಇಂದಿನ ಹೊರಹರಿವು - 42617 ಕ್ಯೂಸೆಕ್ಸ್​


ಭದ್ರಾ ಜಲಾಶಯ - Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.95 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 2456 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2456 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ - Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 50.73 ಟಿಎಂಸಿ
ಇಂದಿನ ಒಳಹರಿವು - 308 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 308 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ - Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 37.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 37.03 ಟಿಎಂಸಿ
ಇಂದಿನ ಒಳಹರಿವು - 1577 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1577 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ - Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 36.72 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 27.24 ಟಿಎಂಸಿ
ಇಂದಿನ ಒಳಹರಿವು - 2576 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 1392 ಕ್ಯೂಸೆಕ್ಸ್​


ವರಾಹಿ ಜಲಾಶಯ - Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 22.30 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 18.65 ಟಿಎಂಸಿ
ಇಂದಿನ ಒಳಹರಿವು - 193 ಕ್ಯೂಸೆಕ್ಸ್​
ಇಂದಿನ ಹೊರಹರಿವು - 756 ಕ್ಯೂಸೆಕ್ಸ್​


ಇದನ್ನೂ ಓದಿ: ರೋಲ್​ಕಾಲ್​ ನೀಡುವಂತೆ ಬಿಜೆಪಿ ಮುಖಂಡನ ಗುಂಡಾಗಿರಿ; ಪಟಾಕಿ ಅಂಗಡಿ ಮಾಲೀಕರ ಮೇಲೆ ಹಲ್ಲೆ!


ಹಾರಂಗಿ ಜಲಾಶಯ - Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.53 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.27 ಟಿಎಂಸಿ
ಇಂದಿನ ಒಳಹರಿವು - 494 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1050 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ - Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 134.16 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 139.1 ಟಿಎಂಸಿ
ಇಂದಿನ ಒಳಹರಿವು - 1508 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4806 ಕ್ಯೂಸೆಕ್ಸ್


ಸೂಪಾ ಜಲಾಶಯ - Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 105.25 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 114.2 ಟಿಎಂಸಿ
ಇಂದಿನ ಒಳಹರಿವು - 1412 ಕ್ಯೂಸೆಕ್ಸ್​
ಇಂದಿನ ಹೊರಹರಿವು - 141 ಕ್ಯೂಸೆಕ್ಸ್​


ಇದನ್ನೂ ಓದಿ: ಪಟಾಕಿ ಹಚ್ಚಿ ಜನರ ಮೇಲೆಸೆದು ಪುಂಡಾಟ; ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಮೂಳೆ ಮುರಿಯೋ ಹಾಗೆ ಹೊಡೆದ್ರು


ನಾರಾಯಣಪುರ ಜಲಾಶಯ - Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.37 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 30.74 ಟಿಎಂಸಿ
ಇಂದಿನ ಒಳಹರಿವು - 42975 ಕ್ಯೂಸೆಕ್ಸ್​
ಇಂದಿನ ಹೊರಹರಿವು - 43107 ಕ್ಯೂಸೆಕ್ಸ್

Published by:Sandhya M
First published: