Karnataka Dam Water Level: ಮಲೆನಾಡು, ಕರಾವಳಿಯಲ್ಲಿ ಮಳೆಯ ಅಬ್ಬರ ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

Karnataka Rain: ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲೂ ಮಳೆಯ ಅಬ್ಬರ ಇಳಿಮುಖವಾಗಿದೆ. ಕೊಡಗಿನಲ್ಲಿ ಕೂಡ 2 ದಿನಗಳಿಂದ ಮಳೆ ಕೊಂಚ ಬಿಡುವು ಪಡೆದಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

Sushma Chakre | news18-kannada
Updated:August 13, 2020, 9:01 AM IST
Karnataka Dam Water Level: ಮಲೆನಾಡು, ಕರಾವಳಿಯಲ್ಲಿ ಮಳೆಯ ಅಬ್ಬರ ಇಳಿಕೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
  • Share this:
ರಾಜ್ಯಾದ್ಯಂತ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲೂ ಮಳೆಯ ಅಬ್ಬರ ಇಳಿಮುಖವಾಗಿದೆ. ಕೊಡಗಿನಲ್ಲಿ ಕೂಡ 2 ದಿನಗಳಿಂದ ಮಳೆ ಕೊಂಚ ಬಿಡುವು ಪಡೆದಿದೆ. ಆದರೂ ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ಇದರಿಂದಾಗಿ ಉಕ್ಕಿ ಹರಿಯುತ್ತಿದ್ದ ನದಿಗಳು ಈಗ ಸಹಜ ಸ್ಥಿತಿಗೆ ಮರಳಿವೆ. ಭಾರೀ ಮಳೆಯಿಂದ ಕಂಗೆಟ್ಟಿದ್ದ ಜನರು ಈಗ ಮಳೆಯಿಂದ ಮನೆಯ ಸುತ್ತಮುತ್ತ ಆಗಿರುವ ಅವಾಂತರಗಳನ್ನು ಸರಿಪಡಿಸಿಕೊಳ್ಳುವತ್ತ ಗಮನಹರಿಸಿದ್ದಾರೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 554.4 ಮೀಟರ್​
ಇಂದಿನ ಮಟ್ಟ- 546 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 81.62 ಟಿಎಂಸಿ
ಇಂದಿನ ಒಳಹರಿವು- 26,338 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಮೀಟರ್​
ಇಂದಿನ ಮಟ್ಟ- 582 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 12.40 ಟಿಎಂಸಿ
ಇಂದಿನ ಒಳಹರಿವು- 5,353 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2856.41 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.62 ಟಿಎಂಸಿ
ಇಂದಿನ ಒಳಹರಿವು- 6054 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ​
ಇಂದಿನ ಮಟ್ಟ- 2920.41 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 35.56 ಟಿಎಂಸಿ
ಇಂದಿನ ಒಳಹರಿವು- 10,697 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5190 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 43.38 ಟಿಎಂಸಿ
ಇಂದಿನ ಒಳಹರಿವು- 77,950 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 73,217 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2282.97 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.84 ಟಿಎಂಸಿ
ಇಂದಿನ ಒಳಹರಿವು- 22.912 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 24.063 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 587. 69 ಮೀಟರ್​
ಗರಿಷ್ಠ ಸಾಮರ್ಥ್ಯ- 100 ಟಿಎಂಸಿ
ಇಂದಿನ ನೀರು ಸಂಗ್ರಹ- 72.44 ಟಿಎಂಸಿ
ಇಂದಿನ ಒಳಹರಿವು- 23,565 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 23,565 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 48.37 ಟಿಎಂಸಿ
ಇಂದಿನ ಒಳಹರಿವು- 13,341 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 3,699 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 632.04 ಅಡಿ​
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 29.37 ಟಿಎಂಸಿ
ಇಂದಿನ ಒಳಹರಿವು- 6,551 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 164 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.63 ಮೀಟರ್
ಇಂದಿನ ಮಟ್ಟ- 519.20 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 116.196 ಟಿಎಂಸಿ
ಇಂದಿನ ಒಳಹರಿವು- 1,12,447 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 71,047 ಕ್ಯೂಸೆಕ್ಸ್
Published by: Sushma Chakre
First published: August 13, 2020, 9:00 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading