Karnataka Dams Water Level: ಫುಲ್ ಆಯ್ತು ಘಟಪ್ರಭಾ ಡ್ಯಾಂ, ರಾಜ್ಯದ ಜಲಾಶಯಗಳ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಈ ಬಾರಿ ರಾಜ್ಯದಲ್ಲಿ ಮಳೆ (Heavy Rainfall) ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ (Dams) ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಅಲ್ಲದೆ, ಕೆಲ ಜಲಾಶಯಗಳಿಂದ ಹೆಚ್ಚುವರಿಯಾದ ನೀರನ್ನು ಈಗ ಹೊರಬಿಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಮಳೆಯ ಆರ್ಭಟ ಸಾಕಷ್ಟಿದ್ದ ಕಾರಣ ಕೆಲ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿತ್ತು. ಆದರೆ, ಈಗ ಎಲ್ಲೆಡೆ ಮಳೆ ಕಡಿಮೆಯಾಗಿದ್ದು ಅದರಂತೆ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಆದಾಗ್ಯೂ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ (Agricultural Activities) ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ.

ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ. ಕೆಲ ದಿನಗಳಿಂದ ಮಳೆ ಕಡಿಮೆಯಾಗುತ್ತಿದ್ದು ಕೆಲವು ಸ್ಥಳಗಳಲ್ಲಿ ಪ್ರವಾಹದಿಂದಾಗಿ ಮುಳುಗಿ ಹೋಗಿದ್ದ ಚಿಕ್ಕ ಪುಟ್ಟ ಸೇತುವೆಗಳು ಮತ್ತೆ ಕಾಣತೊಡಗಿವೆ. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 48.39 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 42.97 ಟಿಎಂಸಿ
ಇಂದಿನ ಒಳಹರಿವು - 7613 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4879 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 105.79 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.74 ಟಿಎಂಸಿ
ಇಂದಿನ ಒಳಹರಿವು - 31208 ಕ್ಯೂಸೆಕ್ಸ್​
ಇಂದಿನ ಹೊರಹರಿವು - 31208 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.16 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 19.11 ಟಿಎಂಸಿ
ಇಂದಿನ ಒಳಹರಿವು - 4772 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4350 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 121.61 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು-116168 ಕ್ಯೂಸೆಕ್ಸ್​
ಇಂದಿನ ಹೊರಹರಿವು - 100451 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ-69.19 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.28 ಟಿಎಂಸಿ
ಇಂದಿನ ಒಳಹರಿವು- 6939 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5145 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 50.55 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು - 8989 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 4974 ಕ್ಯೂಸೆಕ್ಸ್

Karnataka dams water level Major reservoir water level here is details of july 11 2022 stg kvd
ರಾಜ್ಯದ ಜಲಾಶಯ


ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 35.12 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 35.39 ಟಿಎಂಸಿ
ಇಂದಿನ ಒಳಹರಿವು - 4369 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1244 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.06 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 34.76 ಟಿಎಂಸಿ
ಇಂದಿನ ಒಳಹರಿವು - 5872 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 5810 ಕ್ಯೂಸೆಕ್ಸ್​

Karnataka reservoir water level today check major dams july 25 2022
ಸಾಂದರ್ಭಿಕ ಚಿತ್ರ


ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 20.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.42 ಟಿಎಂಸಿ
ಇಂದಿನ ಒಳಹರಿವು - 943 ಕ್ಯೂಸೆಕ್ಸ್​
ಇಂದಿನ ಹೊರಹರಿವು - 770 ಕ್ಯೂಸೆಕ್ಸ್​

ಇದನ್ನೂ ಓದಿ: ಬಳ್ಳಾರಿಯ ಬಾಲಕಿಗೆ 53 ಲಕ್ಷ ಪರಿಹಾರ; ಸುಪ್ರೀಂ ಆದೇಶ

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.84 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.12 ಟಿಎಂಸಿ
ಇಂದಿನ ಒಳಹರಿವು - 2628 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1300 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 132.68 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 131.1 ಟಿಎಂಸಿ
ಇಂದಿನ ಒಳಹರಿವು - 9658 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5998 ಕ್ಯೂಸೆಕ್ಸ್

Karnataka reservoir water today check major dams level august 20 2022
ಸಾಂದರ್ಭಿಕ ಚಿತ್ರ


ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 86.89 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 107.9 ಟಿಎಂಸಿ
ಇಂದಿನ ಒಳಹರಿವು - 7128 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2284 ಕ್ಯೂಸೆಕ್ಸ್​

ಇದನ್ನೂ ಓದಿ: ಮನೆ ಮುಂದೆ ಬ್ಯಾನರ್ ಹಾಕಿದ ಶಾಸಕ ರೇಣುಕಾಚಾರ್ಯ; ಮದ್ವೆಯಲ್ಲಿ ಸಾವರ್ಕರ್ ಫೋಟೋ ಗಿಫ್ಟ್

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 30.74  ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 31.59 ಟಿಎಂಸಿ
ಇಂದಿನ ಒಳಹರಿವು - 102906 ಕ್ಯೂಸೆಕ್ಸ್​
ಇಂದಿನ ಹೊರಹರಿವು - 101883 ಕ್ಯೂಸೆಕ್ಸ್
Published by:Sandhya M
First published: