Karnataka Dams Water Level: ರಾಜ್ಯದಲ್ಲಿ ಮುಂದುವರೆದ ವರುಣನ ರಣಾರ್ಭಟ! ತುಂಬಿ ಹರಿಯುತ್ತಿವೆ ಪ್ರಮುಖ ಜಲಾಶಯಗಳು

ಈ ಬಾರಿ ರಾಜ್ಯದಲ್ಲಿ ಮಳೆ ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಅಲ್ಲದೆ, ಕೆಲ ಜಲಾಶಯಗಳಿಂದ ಹೆಚ್ಚುವರಿಯಾದ ನೀರನ್ನು ಈಗ ಹೊರಬಿಡಲಾಗುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Dams Water Level: ಈ ಬಾರಿ ರಾಜ್ಯದಲ್ಲಿ ಮಳೆ ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯ (Dam) ಗಳಲ್ಲಿ ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಅಲ್ಲದೆ, ಕೆಲ ಜಲಾಶಯಗಳಿಂದ ಹೆಚ್ಚುವರಿಯಾದ ನೀರನ್ನು ಈಗ ಹೊರಬಿಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಮಳೆ(Rain) ಯ ಆರ್ಭಟ ಸಾಕಷ್ಟಿದ್ದ ಕಾರಣ ಕೆಲ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿತ್ತು. ಆದರೆ, ಈಗ ಎಲ್ಲೆಡೆ ಮಳೆ ಕಡಿಮೆಯಾಗಿದ್ದು ಅದರಂತೆ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ. ಆದಾಗ್ಯೂ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ (Farmers) ಹಾಗೂ ಕೃಷಿ (Agriculture) ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ ಹೋಲಿಸಿದರೆ ಪ್ರಸ್ತುತ ನಾಲ್ಕು ಟಿಎಂಸಿ (TMC) ಹೆಚ್ಚುವರಿ ನೀರಿದೆ.

ತುಂಬಿ ಹರಿಯುತ್ತಿದೆ ಪ್ರಮುಖ ಜಲಾಶಯಗಳು!

ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.

ರಾಜ್ಯದಲ್ಲಿ ವರುಣನ ರಣಾರ್ಭಟ!

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ. ಕೆಲ ದಿನಗಳಿಂದ ಮಳೆ ಕಡಿಮೆಯಾಗುತ್ತಿದ್ದು ಕೆಲವು ಸ್ಥಳಗಳಲ್ಲಿ ಪ್ರವಾಹದಿಂದಾಗಿ ಮುಳುಗಿ ಹೋಗಿದ್ದ ಚಿಕ್ಕ ಪುಟ್ಟ ಸೇತುವೆಗಳು ಮತ್ತೆ ಕಾಣತೊಡಗಿವೆ. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (29-08-2022 ರಂತೆ)

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.28 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 41.35 ಟಿಎಂಸಿ
ಇಂದಿನ ಒಳಹರಿವು - 23020 ಕ್ಯೂಸೆಕ್ಸ್​
ಇಂದಿನ ಹೊರಹರಿವು - 20243 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 104.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 98.16 ಟಿಎಂಸಿ
ಇಂದಿನ ಒಳಹರಿವು - 58868 ಕ್ಯೂಸೆಕ್ಸ್​
ಇಂದಿನ ಹೊರಹರಿವು - 54686 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 17.82 ಟಿಎಂಸಿ
ಇಂದಿನ ಒಳಹರಿವು - 10598 ಕ್ಯೂಸೆಕ್ಸ್​
ಇಂದಿನ ಹೊರಹರಿವು - 10550 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 27488 ಕ್ಯೂಸೆಕ್ಸ್​
ಇಂದಿನ ಹೊರಹರಿವು - 25451 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.23 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.33 ಟಿಎಂಸಿ
ಇಂದಿನ ಒಳಹರಿವು- 6533 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5931 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51 ಟಿಎಂಸಿ
ಇಂದಿನ ಒಳಹರಿವು - 3810 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 3810 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 36.62 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 36.07 ಟಿಎಂಸಿ
ಇಂದಿನ ಒಳಹರಿವು - 5662 ಕ್ಯೂಸೆಕ್ಸ್​
ಇಂದಿನ ಹೊರಹರಿವು - 894 ಕ್ಯೂಸೆಕ್ಸ್​

ಇದನ್ನೂ ಓದಿ: ನಿಲ್ಲದ ಮಳೆ, ರಸ್ತೆಗಳು ಜಲಾವೃತ; ಇಂದು ಶಾಲಾ ಕಾಲೇಜುಗಳಿಗೆ ರಜೆ

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.06 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 33.01 ಟಿಎಂಸಿ
ಇಂದಿನ ಒಳಹರಿವು - 6602 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 6540 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 21.20 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 16.75 ಟಿಎಂಸಿ
ಇಂದಿನ ಒಳಹರಿವು - 721 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.78 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.95 ಟಿಎಂಸಿ
ಇಂದಿನ ಒಳಹರಿವು - 2684 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3670 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 135.81 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 131.1 ಟಿಎಂಸಿ
ಇಂದಿನ ಒಳಹರಿವು - 6969 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6820 ಕ್ಯೂಸೆಕ್ಸ್

ಇದನ್ನೂ ಓದಿ: ವರುಣನ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ತತ್ತರ; ಎಲ್ಲಿ ನೋಡಿದ್ರೂ ನೀರು, ಶಾಲೆಗಳಿಗೆ ರಜೆ

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 92.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 108.1 ಟಿಎಂಸಿ
ಇಂದಿನ ಒಳಹರಿವು - 5998 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2113 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 31.18 ಟಿಎಂಸಿ
ಇಂದಿನ ಒಳಹರಿವು - 29615 ಕ್ಯೂಸೆಕ್ಸ್​
ಇಂದಿನ ಹೊರಹರಿವು - 29615 ಕ್ಯೂಸೆಕ್ಸ್
Published by:Vasudeva M
First published: