Karnataka Dams Water Level: ಉಕ್ಕಿ ಹರಿಯುತ್ತಿವೆ ಬೆಳಗಾವಿ ಸಪ್ತ ನದಿಗಳು, ಜಲಾಶಯಗಳ ನೀರಿನ ಮಟ್ಟ ಏರಿಕೆ

Karnataka Reservoir Water Level: ಹವಾಮಾನ ಇಲಾಖೆಯ ಪ್ರಕಾರ, ಇನ್ನೂ ಸ್ವಲ್ಪ ಸಮಯ ಮಳೆಯಾಗುವ ಸಾಧ್ಯತೆಯಿದ್ದು ಮತ್ತೆ ಆಯಕಟ್ಟಿನ ಪ್ರದೇಶಗಳಲ್ಲಿ ನೀರಿನ ಹರಿವು ಏರುವ ಸಾಧ್ಯತೆಯನ್ನು ತಳ್ಳಿ ಹಾಕಲಾಗದು. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಈ ಬಾರಿ ರಾಜ್ಯದಲ್ಲಿ (State) ಮಳೆ ಸಾಕಷ್ಟು (Heavy Rainfall) ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ ನೀರು (Dam Water) ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಕೆಲ ದಿನಗಳ ಹಿಂದೆ ಕಡಿಮೆಯಾಗಿದ್ದ ಮಳೆ ಮತ್ತೆ ಕೆಲ ದಿನಗಳಿಂದ ರಾಜ್ಯದ ಅಲ್ಲಲ್ಲಿ ಸುರಿಯುತ್ತಿದೆ. ಹಿಂದೆ ಮಳೆಯ ಆರ್ಭಟ ಸಾಕಷ್ಟಿದ್ದ ಕಾರಣ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಿತ್ತು. ಆದರೆ, ಈಗ ಒಂದೆರಡು ಜಲಾಶಯಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲ ಕಡೆ ಒಳ ಹರಿವು ಹಾಗೂ ಹೊರಹರಿವು ಎರಡೂ ನಿಧಾನವಾಗಿ ಕಡಿಮೆಯಾಗುತ್ತಿದೆ. ಅದಾಗ್ಯೂ, ಕಳೆದ 3-4 ದಿನಗಳಲ್ಲಿ ರಾಜ್ಯದ ಕೆಲವೆಡೆ ಮತ್ತೆ ವರುಣನ ಆರ್ಭಟ ಏರುತ್ತಿದೆ.

ಸದ್ಯ, ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ.

ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ.

ಈಗ ಕಳೆದ ಕೆಲ ದಿನಗಳಿಂದ ಮತ್ತೆ ಮಳೆ ಅಲ್ಲಲ್ಲಿ ಜಾಸ್ತಿಯಾಗುತ್ತಿರುವ ಸುದ್ದಿಗಳು ವರದಿಯಾಗುತ್ತಿವೆ. ಹವಾಮಾನ ಇಲಾಖೆಯ ಪ್ರಕಾರ, ಇನ್ನೂ ಸ್ವಲ್ಪ ಸಮಯ ಮಳೆಯಾಗುವ ಸಾಧ್ಯತೆಯಿದ್ದು ಮತ್ತೆ ಆಯಕಟ್ಟಿನ ಪ್ರದೇಶಗಳಲ್ಲಿ ನೀರಿನ ಹರಿವು ಏರುವ ಸಾಧ್ಯತೆಯನ್ನು ತಳ್ಳಿ ಹಾಕಲಾಗದು. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (12-09-2022 ರಂತೆ)

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.15 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 38.64 ಟಿಎಂಸಿ
ಇಂದಿನ ಒಳಹರಿವು - 21661 ಕ್ಯೂಸೆಕ್ಸ್​
ಇಂದಿನ ಹೊರಹರಿವು - 17899 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 104.66 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.51 ಟಿಎಂಸಿ
ಇಂದಿನ ಒಳಹರಿವು - 36822 ಕ್ಯೂಸೆಕ್ಸ್​
ಇಂದಿನ ಹೊರಹರಿವು - 33569 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 18.38 ಟಿಎಂಸಿ
ಇಂದಿನ ಒಳಹರಿವು - 15884 ಕ್ಯೂಸೆಕ್ಸ್​
ಇಂದಿನ ಹೊರಹರಿವು - 13050 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.66 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 122.06 ಟಿಎಂಸಿ
ಇಂದಿನ ಒಳಹರಿವು- 52491 ಕ್ಯೂಸೆಕ್ಸ್​
ಇಂದಿನ ಹೊರಹರಿವು - 52951 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.70 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.99 ಟಿಎಂಸಿ
ಇಂದಿನ ಒಳಹರಿವು- 14630 ಕ್ಯೂಸೆಕ್ಸ್​
ಇಂದಿನ ಹೊರಹರಿವು - 7685 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51 ಟಿಎಂಸಿ
ಇಂದಿನ ಒಳಹರಿವು - 23056 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 23056 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 37.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 37.52 ಟಿಎಂಸಿ
ಇಂದಿನ ಒಳಹರಿವು - 4127 ಕ್ಯೂಸೆಕ್ಸ್​
ಇಂದಿನ ಹೊರಹರಿವು - 4127 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 37.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 31.08 ಟಿಎಂಸಿ
ಇಂದಿನ ಒಳಹರಿವು - 14858 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 14800 ಕ್ಯೂಸೆಕ್ಸ್​

ಇದನ್ನೂ ಓದಿ: ಮಂಗಳೂರಿಗೆ ಮೋದಿ, ರಾತ್ರೋ ರಾತ್ರಿ ಮಾಯವಾಗಿದ್ದ ರಸ್ತೆ ಗುಂಡಿಗಳು ಹತ್ತೇ ದಿನದಲ್ಲಿ ಪ್ರತ್ಯಕ್ಷ!

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 22.39 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 18.77 ಟಿಎಂಸಿ
ಇಂದಿನ ಒಳಹರಿವು - 3756 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.02 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.28 ಟಿಎಂಸಿ
ಇಂದಿನ ಒಳಹರಿವು - 4396 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1700 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 139.75 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 136.9 ಟಿಎಂಸಿ
ಇಂದಿನ ಒಳಹರಿವು - 20068 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3858 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 97.14 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 112.9 ಟಿಎಂಸಿ
ಇಂದಿನ ಒಳಹರಿವು - 13266 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಇದನ್ನೂ ಓದಿ: ಜೈಲು ಸೇರಿದ BBMP ಜಂಟಿ ಆಯುಕ್ತ; ಮುಂದುವರಿಯಲಿದೆ ಒತ್ತುವರಿ ತೆರವು ಕಾರ್ಯಾಚರಣೆ; ಬಿಬಿಎಂಪಿ ಮೇಲಿದ್ಯಾ ರಾಜಕೀಯ ಒತ್ತಡ

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 30 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 31.64 ಟಿಎಂಸಿ
ಇಂದಿನ ಒಳಹರಿವು - 60781 ಕ್ಯೂಸೆಕ್ಸ್​
ಇಂದಿನ ಹೊರಹರಿವು - 60781 ಕ್ಯೂಸೆಕ್ಸ್
Published by:Sandhya M
First published: