Karnataka Dam Water Level: ನದಿ ತೀರಕ್ಕೆ ಹೋಗುವ ಮುನ್ನ ಇವತ್ತಿನ ಜಲಾಶಯಗಳ ನೀರಿನ ಮಟ್ಟ ನೋಡಿ

ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ.

ಯರಗೋಳ ಜಲಾಶಯ

ಯರಗೋಳ ಜಲಾಶಯ

  • Share this:
ಈ ಬಾರಿ ರಾಜ್ಯ (State) ದಲ್ಲಿ ಮಳೆ (Rain) ಸಾಕಷ್ಟು ಸುರಿದಿದ್ದು ಪ್ರಮುಖ ಜಲಾಶಯಗಳಲ್ಲಿ ನೀರು ಸಮೃದ್ಧವಾಗಿ ಸಂಗ್ರಹಣೆಗೊಂಡಿದೆ. ಅಲ್ಲದೆ, ಕೆಲ ಜಲಾಶಯಗಳಿಂದ ಹೆಚ್ಚುವರಿಯಾದ ನೀರನ್ನು ಈಗ ಹೊರಬಿಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಮಳೆಯ ಆರ್ಭಟ ಸಾಕಷ್ಟಿದ್ದ ಕಾರಣ ಜಲಾಶಯ (Dam) ಗಳಿಗೆ ಒಳ ಹರಿವು ಹೆಚ್ಚಾಗಿತ್ತು. ಆದರೆ, ಈಗ ಒಂದೆರಡು ಜಲಾಶಯಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲ ಕಡೆ ಒಳ ಹರಿವು ನಿಧಾನವಾಗಿ ಕಡಿಮೆಯಾಗುತ್ತಿದೆ. ಆದಾಗ್ಯೂ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ (Farmers) ಹಾಗೂ ಕೃಷಿ ಚಟುವಟಿಕೆ (Agriculture Activates) ಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ ಹೋಲಿಸಿದರೆ ಪ್ರಸ್ತುತ ನಾಲ್ಕು 4-5 ಟಿಎಂಸಿ ಹೆಚ್ಚುವರಿ ನೀರಿದೆ.

ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ!

ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಕರ್ನಾಟಕದ ಪ್ರಸಿದ್ಧ ಜಲಾಶಯವಾದ ಕೆಆರ್‌‌‌‌‌‌‌‌ಎಸ್ ಸೇರಿದಂತೆ ಕೆಲವು ಜಲಾಶಯಗಳು ಭರ್ತಿಯಾಗಿವೆ.

karnataka dam water level today september 4 2022 mrq
ಹಾರಂಗಿ


ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿಯೇ ಕಂಡುಬಂದಿದೆ. ಕಳೆದ ಹತ್ತು ದಿನಗಳಲ್ಲಿ ಉತ್ತರ ಭಾಗವೂ ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಾಕಷ್ಟು ಮಳೆ ಸುರಿದಿದೆ. ಈ ಬಾರಿ ಹಲವೆಡೆ ವಾಡಿಕೆಗಿಂತ ಜಾಸ್ತಿ ಮಳೆ ಬಿದ್ದಿದ್ದು ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿದ್ದಲ್ಲದೆ ಕೆಲ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ಭೂಮಿ ಊಳಿ ಅನ್ನ ಬೆಳೆಯುವ ರೈತನ ಮೊಗದಲ್ಲಿ ನೆಮ್ಮದಿಯ ನಗು ಬಂದಿದ್ದರೆ ಕೆಲವೆಡೆ ಪ್ರವಾಹ ಉಂಟಾಗಿ ಕೃಷಿ ಭೂಮಿ ಜಲಾವೃತವಾಗಿ ಬೆಳೆ ನಾಶವಾಗಿದ್ದು ಹಲವು ರೈತರು ಕಂಗಾಲಾಗಿದ್ದು ಸಹ ಸುಳ್ಳಲ್ಲ. ಕೆಲ ದಿನಗಳಿಂದ ಮಳೆ ಕಡಿಮೆಯಾಗುತ್ತಿದ್ದು ಕೆಲವು ಸ್ಥಳಗಳಲ್ಲಿ ಪ್ರವಾಹದಿಂದಾಗಿ ಮುಳುಗಿ ಹೋಗಿದ್ದ ಚಿಕ್ಕ ಪುಟ್ಟ ಸೇತುವೆಗಳು ಮತ್ತೆ ಕಾಣತೊಡಗಿವೆ. ಒಟ್ಟಿನಲ್ಲಿ ರಾಜ್ಯದ ವಿವಿಧ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಉತ್ತಮವಾಗಿದ್ದು ಈಗಾಗಲೇ ಕೆಲ ಜಲಾಶಯಗಳು ಭರ್ತಿಯಾಗಿವೆ.

ಇದನ್ನೂ ಓದಿ:   DC Tammanna: ಸುಮಲತಾ ಬಂಡವಾಳ ನಮ್ಗೆ ಗೊತ್ತು, ಬುಡು ಬುಡುಕೆ ಮಾಡ್ಕೊಂಡು ರಾಜಕಾರಣಕ್ಕೆ ಬಂದಿಲ್ಲ: ಡಿ ಸಿ ತಮ್ಮಣ್ಣ

ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (03-09-2022 ರಂತೆ)

ಕೆಆರ್​ಎಸ್​ ಜಲಾಶಯ - KRS Dam
ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.31 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 38.81 ಟಿಎಂಸಿ
ಇಂದಿನ ಒಳಹರಿವು - 36778 ಕ್ಯೂಸೆಕ್ಸ್​
ಇಂದಿನ ಹೊರಹರಿವು - 34307 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam
ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ - 103.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 100.55 ಟಿಎಂಸಿ
ಇಂದಿನ ಒಳಹರಿವು - 99363 ಕ್ಯೂಸೆಕ್ಸ್​
ಇಂದಿನ ಹೊರಹರಿವು - 96575 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 16.91 ಟಿಎಂಸಿ
ಇಂದಿನ ಒಳಹರಿವು - 6240 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6342 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 123.08 ಟಿಎಂಸಿ
ಇಂದಿನ ಒಳಹರಿವು- 25451 ಕ್ಯೂಸೆಕ್ಸ್​
ಇಂದಿನ ಹೊರಹರಿವು - 25451 ಕ್ಯೂಸೆಕ್ಸ್​

karnataka dam water level today september 4 2022 mrq
ಸಾಂದರ್ಭಿಕ ಚಿತ್ರ


ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.28 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 70.80 ಟಿಎಂಸಿ
ಇಂದಿನ ಒಳಹರಿವು- 9920 ಕ್ಯೂಸೆಕ್ಸ್​
ಇಂದಿನ ಹೊರಹರಿವು - 17790 ಕ್ಯೂಸೆಕ್ಸ್​

ಇದನ್ನೂ ಓದಿ:  Karnataka Weather Report: ಮತ್ತೆ ಮಳೆ, ಪ್ರವಾಹ ಸಾಧ್ಯತೆ; ಬೆಂಗಳೂರು-ಮೈಸೂರು ಪ್ರಯಾಣಿಕರೇ ಎಚ್ಚರ

ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 51.00 ಟಿಎಂಸಿ
ಇಂದಿನ ಒಳಹರಿವು - 4906 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 4906 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 37.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 36.62 ಟಿಎಂಸಿ
ಇಂದಿನ ಒಳಹರಿವು - 6982 ಕ್ಯೂಸೆಕ್ಸ್​
ಇಂದಿನ ಹೊರಹರಿವು -6982 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 36.67 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 31.64 ಟಿಎಂಸಿ
ಇಂದಿನ ಒಳಹರಿವು - 8942 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 12800 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 21.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 17.27 ಟಿಎಂಸಿ
ಇಂದಿನ ಒಳಹರಿವು -  721 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.57 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.19 ಟಿಎಂಸಿ
ಇಂದಿನ ಒಳಹರಿವು - 3732 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1783ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 137.50 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 131.7 ಟಿಎಂಸಿ
ಇಂದಿನ ಒಳಹರಿವು - 7226 ಕ್ಯೂಸೆಕ್ಸ್​
ಇಂದಿನ ಹೊರಹರಿವು - 7079 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 93.80 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 108.4 ಟಿಎಂಸಿ
ಇಂದಿನ ಒಳಹರಿವು - 4327 ಕ್ಯೂಸೆಕ್ಸ್​
ಇಂದಿನ ಹೊರಹರಿವು - 0 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ- Narayanapura Dam
ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 31.96 ಟಿಎಂಸಿ
ಇಂದಿನ ಒಳಹರಿವು - 36980 ಕ್ಯೂಸೆಕ್ಸ್​
ಇಂದಿನ ಹೊರಹರಿವು - 35891 ಕ್ಯೂಸೆಕ್ಸ್
Published by:Mahmadrafik K
First published: