• Home
  • »
  • News
  • »
  • state
  • »
  • Karnataka Dams Water Level: ಪ್ರಮುಖ ಜಲಾಶಯಗಳು ಭರ್ತಿ; ಇಂದಿನ ನೀರಿನ ಮಟ್ಟ ಚೆಕ್ ಮಾಡಿ

Karnataka Dams Water Level: ಪ್ರಮುಖ ಜಲಾಶಯಗಳು ಭರ್ತಿ; ಇಂದಿನ ನೀರಿನ ಮಟ್ಟ ಚೆಕ್ ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪ್ರಸ್ತುತ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಸಂಪೂರ್ಣ ಮಾಹಿತಿ ಇಲ್ಲಿದೆ.

  • Share this:

    ಕಳೆದ ಎರಡು ದಿನಗಳಿಂದ ರಾಜ್ಯದ ಬಹುತೇಕ ಎಲ್ಲೆಡೆ ಮಳೆ ನಿಂತಿದೆ. ಈ ಪರಿಣಾಮ ಈ ಹಿಂದೆ ರಾಜ್ಯದ ಹಲವು ಪ್ರಮುಖ ಜಲಾಶಯಗಳಲ್ಲಿ (Dams Water Level) ಕಂಡುಬರುತ್ತಿದ್ದ ನೀರಿನ ಒಳ ಹಾಗೂ ಹೊರ ಹರಿವಿನ ಪ್ರಮಾಣ ಈಗ ಗಮನಾರ್ಹವಾಗಿ ತಗ್ಗಿದೆ ಎಂದೇ ಹೇಳಬಹುದು. ಅಷ್ಟಕ್ಕೂ ಈ ಬಾರಿ ವಾಡಿಕೆಗಿಂತ ತುಸು ಹೆಚ್ಚಾಗಿಯೇ ಮಳೆಯಾಗಿದ್ದು ರಾಜ್ಯದ ಹಲವು ಪ್ರಮುಖ (Karnataka Dams Water Level) ಜಲಾಶಯಗಳೆಲ್ಲವೂ ಸಾಕಷ್ಟು ಭರ್ತಿಯಾಗಿವೆ. ಈ ಹಿಂದೆ ಹರಿದು ಬರುತ್ತಿದ್ದ ಜಲಾಶಯಗಳಿಗೆ ಒಳಹರಿವಿನ ಪ್ರಮಾಣಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಮಾಣವು ಗಮನಾರ್ಹವಾಗಿ ಕಡಿಮೆಯಾಗಿದ್ದು ಅದರಂತೆ ಹೊರಹರಿವಿನ ಪ್ರಮಾಣದಲ್ಲೂ ನಿಧಾನವಾಗಿ ಇಳಿಕೆ ಇರುವುದನ್ನು ಗಮನಿಸಬಹುದು.


    ಸದ್ಯ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ಉತ್ತಮ ವಿಷಯವಾಗಿದ್ದು ರೈತಾಪಿ ಜನರಿಗೆ ಹಾಗೂ ಕೃಷಿ ಚಟುವಟಿಕೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಇನ್ನೊಂದು ವಿಶೇಷವೆಂದರೆ ಈ ಬಾರಿ ರಾಜ್ಯದ ಮುಖ್ಯ ಜಲಾಶಯಗಳಲ್ಲೊಂದಾದ ಲಿಂಗನಮಕ್ಕಿ ಸಾಕಷ್ಟು ಭರ್ತಿಯಾಗಿದೆ.


    ಕೃಷಿ ಚಟುವಟಿಕೆಗಳಿಗೆ ಪೂರಕ
    ಜಲ, ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು ಒದಗಿಸುವುದು ಸಹ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.


    ಇದನ್ನೂ ಓದಿ: Voting List: 17 ವರ್ಷಕ್ಕೇ ವೋಟರ್​ ಲಿಸ್ಟ್​ಗೆ ಸೇರಿ! ರಾಜ್ಯದ ಒಟ್ಟು ಮತದಾರರ ವಿವರ ಇಲ್ಲಿದೆ ನೋಡಿ


    ಪ್ರಸ್ತುತ, ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ. (09-11-2022 ರಂತೆ)


    ಕೆಆರ್​ಎಸ್​ ಜಲಾಶಯ - KRS Dam
    ಗರಿಷ್ಠ ಮಟ್ಟ - 124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ - 48.64 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 49.45 ಟಿಎಂಸಿ
    ಇಂದಿನ ಒಳಹರಿವು - 4250 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 6623 ಕ್ಯೂಸೆಕ್ಸ್​


    ತುಂಗಭದ್ರಾ ಜಲಾಶಯ - Tungabhadra Dam
    ಗರಿಷ್ಠ ನೀರಿನ ಮಟ್ಟ - 1,633 ಅಡಿ
    ಒಟ್ಟು ಸಾಮರ್ಥ್ಯ- 105.79 ಟಿಎಂಸಿ
    ಇಂದಿನ ನೀರಿನ ಮಟ್ಟ - 102.05 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 98.74 ಟಿಎಂಸಿ
    ಇಂದಿನ ಒಳಹರಿವು - 5245 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 10822 ಕ್ಯೂಸೆಕ್ಸ್​


    ಕಬಿನಿ ಜಲಾಶಯ - Kabini Dam
    ಗರಿಷ್ಠ ನೀರಿನ ಮಟ್ಟ - 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ - 17.02 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 19.48 ಟಿಎಂಸಿ
    ಇಂದಿನ ಒಳಹರಿವು - 150 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 2050 ಕ್ಯೂಸೆಕ್ಸ್​


    ಆಲಮಟ್ಟಿ ಜಲಾಶಯ - Almatti Dam
    ಗರಿಷ್ಠ ಮಟ್ಟ - 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 123.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 109.29 ಟಿಎಂಸಿ
    ಇಂದಿನ ಒಳಹರಿವು- 1609 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 1609 ಕ್ಯೂಸೆಕ್ಸ್​


    ಭದ್ರಾ ಜಲಾಶಯ - Bhadra Dam
    ಗರಿಷ್ಠ ಮಟ್ಟ - 657.73 ಮೀಟರ್
    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 69.84 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 70.65 ಟಿಎಂಸಿ
    ಇಂದಿನ ಒಳಹರಿವು- 1133 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 3400 ಕ್ಯೂಸೆಕ್ಸ್​


    ಘಟಪ್ರಭಾ ಜಲಾಶಯ - Ghataprabha Dam
    ಗರಿಷ್ಠ ಮಟ್ಟ - 662.91 ಮೀಟರ್
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 51 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 47.08 ಟಿಎಂಸಿ
    ಇಂದಿನ ಒಳಹರಿವು - 198 ಕ್ಯೂಸೆಕ್ಸ್​​
    ಇಂದಿನ ಹೊರಹರಿವು - 198 ಕ್ಯೂಸೆಕ್ಸ್


    ಮಲಪ್ರಭಾ ಜಲಾಶಯ - Malaprabha Dam
    ಗರಿಷ್ಠ ಮಟ್ಟ-633.80 ಮೀಟರ್
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ - 37.31 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 34.67 ಟಿಎಂಸಿ
    ಇಂದಿನ ಒಳಹರಿವು - 0 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 394 ಕ್ಯೂಸೆಕ್ಸ್​


    ಹೇಮಾವತಿ ಜಲಾಶಯ - Hemavathi Dam
    ಗರಿಷ್ಠ ಮಟ್ಟ - 2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 34.66 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 26.11 ಟಿಎಂಸಿ
    ಇಂದಿನ ಒಳಹರಿವು - 1548 ಕ್ಯೂಸೆಕ್ಸ್​​
    ಇಂದಿನ ಹೊರಹರಿವು - 3050 ಕ್ಯೂಸೆಕ್ಸ್​


    ವರಾಹಿ ಜಲಾಶಯ - Varahi Dam
    ಗರಿಷ್ಠ ಮಟ್ಟ - 594.36 ಮೀಟರ್
    ​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 21.20 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 18.33 ಟಿಎಂಸಿ
    ಇಂದಿನ ಒಳಹರಿವು - 49 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 749 ಕ್ಯೂಸೆಕ್ಸ್​


    ಹಾರಂಗಿ ಜಲಾಶಯ - Harangi Dam
    ಗರಿಷ್ಠ ಮಟ್ಟ - 871.38 ಮೀಟರ್
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ- 5.73 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 8.07 ಟಿಎಂಸಿ
    ಇಂದಿನ ಒಳಹರಿವು - 342 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 1700 ಕ್ಯೂಸೆಕ್ಸ್​​


    ಇದನ್ನೂ ಓದಿ: Heart Attack Research: ಹಾರ್ಟ್ ಅಟ್ಯಾಕ್ ಹೆಚ್ಚಳ; ಸಂಶೋಧನೆಗೆ ಮುಂದಾದ ಜಯದೇವ ಆಸ್ಪತ್ರೆ


    ಲಿಂಗನಮಕ್ಕಿ ಜಲಾಶಯ - Linganamakki Dam
    ಗರಿಷ್ಠ ಮಟ್ಟ - 554.44 ಮೀಟರ್
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 127.06 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 135.5 ಟಿಎಂಸಿ
    ಇಂದಿನ ಒಳಹರಿವು - 323 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 5916 ಕ್ಯೂಸೆಕ್ಸ್


    ಸೂಪಾ ಜಲಾಶಯ - Supa Dam
    ಗರಿಷ್ಠ ಮಟ್ಟ- 564.00 ಮೀಟರ್
    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 102.35 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 112.10 ಟಿಎಂಸಿ
    ಇಂದಿನ ಒಳಹರಿವು - 614 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 2280 ಕ್ಯೂಸೆಕ್ಸ್​


    ಇದನ್ನೂ ಓದಿ:


    ನಾರಾಯಣಪುರ ಜಲಾಶಯ - Narayanapura Dam
    ಗರಿಷ್ಠ ಮಟ್ಟ - 492.25 ಮೀಟರ್
    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 29.70 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 28.57 ಟಿಎಂಸಿ
    ಇಂದಿನ ಒಳಹರಿವು - 1907 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 8891 ಕ್ಯೂಸೆಕ್ಸ್

    Published by:ಗುರುಗಣೇಶ ಡಬ್ಗುಳಿ
    First published: